HomeKarnatakaಕೃಷ್ಣಮೃಗ ಬೇಟೆ ಪ್ರಕರಣ: ಮತ್ತೆ ಮೂವರು ಆರೋಪಿಗಳು ಅರೆಸ್ಟ್

ಕೃಷ್ಣಮೃಗ ಬೇಟೆ ಪ್ರಕರಣ: ಮತ್ತೆ ಮೂವರು ಆರೋಪಿಗಳು ಅರೆಸ್ಟ್

ಬೀದರ್: ಬೀದರ್ ಜಿಲ್ಲೆಯಲ್ಲಿ ಕೃಷ್ಣಮೃಗ ಬೇಟೆಯಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಆರು ಆರೋಪಿಗಳಲ್ಲಿ ಮೂವರು ತಲೆಮರೆಸಿಕೊಂಡಿದ್ದರು. ಇದೀಗ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿಯ ಸೋಹೆಬ್ ಮಲ್ಲಿಕ್, ಹೈದ್ರಾಬಾದ್ ಮೂಲದ ಅಬ್ದುಲ್ ಸಾಹಿದ್ ಹಾಗೂ ಹಮೀದ್ ಬಂಧಿತ ಆರೋಪಿಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ಹೈದ್ರಾಬಾದ್ ಮೂಲದ ನಾಸೀರ್, ಆರೀಫ್ ಖಾನ್ ಮತ್ತು ಮಹ್ಮದ್ ಹಜ್ಜಿ ಮೂವರನ್ನು ಬಂಧಿಸಿದ್ದು, ಪ್ರಕರಣದಲ್ಲಿ ಒಟ್ಟು ಆರು ಜನರನ್ನು ಬಂಧಿಸದಂತಾಗಿದೆ.

ಬೀದರ್ ತಾಲೂಕಿನ ಚೊಂಡಿ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಕೃಷ್ಣಮೃಗ ಬೇಟೆಯಾಡುತ್ತಿದ್ದ ಬೇಟೆಗಾರರ ಬಗ್ಗೆ ಜನವಾಡ ಪೊಲೀಸರಿಗೆ ಗ್ರಾಮಸ್ಥರು ಮಾಹಿತಿ ನೀಡಿದ್ದರು. ಗ್ರಾಮಸ್ಥರ ಮಾಹಿತಿ ಹಿನ್ನೆಲೆ ಸ್ಥಳಕ್ಕೆ ಪೊಲೀಸರು ಬರುತ್ತಿದ್ದಂತೆ ಮೂವರು ಬೇಟೆಗಾರರು ಕಾಲ್ಕಿತ್ತಿದ್ದರು. ಈ ವೇಳೆ ಮೂವರು ಸಿಕ್ಕಿಬಿದ್ದಿದ್ದರು.

ಬಂಧಿತರಿಂದ ಬೇಟೆಗೆ ಬಳಸಿದ ಬಂದೂಕು ಹಾಗೂ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಜನವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular