HomeKarnatakaBREAKING : ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಸಾವು, 20...

BREAKING : ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಸಾವು, 20 ಮಂದಿಗೆ ಗಾಯ

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ.

ಐಮಂಗಲ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್‌ ರಸ್ತೆ ಬದಿಯ ಟ್ರೆಂಚ್‌ಗೆ ಬಿದ್ದ ಪರಿಣಾಮ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದ ರಭಸಕ್ಕೆ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಅಪಘಾತದಲ್ಲಿ ಗಾಯಗೊಂಡಿರುವ 20 ಮಂದಿಯನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್‌ನಲ್ಲಿ ಒಟ್ಟು 53 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಐಮಂಗಲ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಪರಿಶೀಲನೆ ನಡೆಸಿದ ಬಳಿಕ ಬಸ್‌ನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular