HomeUncategorizedಆಗಸ್ಟ್ 24ರಂದು ಉಚಿತ ನೇರ ಉದ್ಯೋಗ ಸಂದರ್ಶನ

ಆಗಸ್ಟ್ 24ರಂದು ಉಚಿತ ನೇರ ಉದ್ಯೋಗ ಸಂದರ್ಶನ

ಬಳ್ಳಾರಿ :    ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಇಂಡಸ್‌ ಬ್ಯಾಂಕ್ (ಭಾರತ್ ಫೈನಾನ್ಶಿಯಲ್ ಇನ್‌ಕ್ಲೂಷನ್ ಲಿಮಿಟೆಡ್) ಸಹಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 24 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಕುಡತಿನಿ ಪಟ್ಟಣದ ಕಂಪ್ಲಿ ಅಲ್ಲಂ ತಿಮ್ಮಪ್ಪನವರ ಕಲ್ಯಾಣ ಮಂಟಪದ ಭಾರತ್ ಫೈನಾನ್ಶಿಯಲ್ ಇನ್‌ಕ್ಲೂಷನ್ ಲಿಮಿಟೆಡ್ (ಕುಡಿತಿನಿ ಬ್ರಾಂಚ್ ಆಫೀಸ್ ಹತ್ತಿರ) ಕಚೇರಿಯಲ್ಲಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

 ಕುಡತಿನಿ, ಸಂಡೂರು, ಬಳ್ಳಾರಿ ಹಾಗೂ ಕೂಡ್ಲಿಗಿ ತಾಲೂಕುಗಳಲ್ಲಿ ಕರ್ತವ್ಯ ನಿರ್ವಹಿಸಲು ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ (ಉಚಿತ ಪ್ರವೇಶ).

ವಿದ್ಯಾರ್ಹತೆ: ಪಿಯುಸಿ ಅಥವಾ ಯಾವುದೇ ಪದವಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಶೇಷ ಸೂಚನೆ: ಅಭ್ಯರ್ಥಿಗಳಿಗೆ ದ್ವಿಚಕ್ರ ವಾಹನ ಕಡ್ಡಾಯವಾಗಿ ಇರಬೇಕು. ಆಸಕ್ತ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಹಾಗೂ ಸ್ವ-ವಿವರವುಳ್ಳ ರೆಸ್ಯೂಮ್ ಜೊತೆಗೆ ನಿಗದಿತ ಸ್ಥಳದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ. 7619207762, 9663263086, 7676774293 ಅಥವಾ 6360408094 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧನಸಹಾಯ: ಅರ್ಜಿ ಸಲ್ಲಿಕೆ ಅವಧಿ ಸೆಪ್ಟೆಂಬರ್ 4 ರವರೆಗೆ ವಿಸ್ತರಣೆ

 ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2026-27ನೇ ಸಾಲಿನ ವಿವಿಧ ಯೋಜನೆಗಳಡಿ ನೀಡಲಾಗುವ ಧನಸಹಾಯ ಹಾಗೂ ಸಹಾಯಧನಕ್ಕಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 04 ರವರೆಗೆ ವಿಸ್ತರಿಸಲಾಗಿದೆ.

ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಮುಂತಾದ ಸಾಂಸ್ಕೃತಿಕ ಕಲಾ ಪ್ರಕಾರಗಳನ್ನು ಉಳಿಸಿ-ಬೆಳೆಸಲು ಶ್ರಮಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ, ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ ಮತ್ತು ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಗಳು ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ ಅನ್ವಯವಾಗುತ್ತವೆ.

 ಈ ಹಿಂದೆ ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿತ್ತು. ಇದೀಗ ಅರ್ಹ ಕಲಾವಿದರು ಹಾಗೂ ಸಂಘ-ಸಂಸ್ಥೆಗಳ ಅನುಕೂಲಕ್ಕಾಗಿ ಸೆಪ್ಟೆಂಬರ್ 04 ರವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.

ಆಸಕ್ತರು ಹಾಗೂ ಅರ್ಹರು ಸರ್ಕಾರದ ಸೇವಾಸಿಂಧು ಪೋರ್ಟಲ್ (sevasindhu.karnataka.gov.in) ಮೂಲಕವೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಕಚೇರಿಯಲ್ಲಿ ನೇರವಾಗಿ ಸಲ್ಲಿಸುವ ಭೌತಿಕ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಹಾಗೂ ನಿಗದಿತ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

 ಹೆಚ್ಚಿನ ಮಾಹಿತಿಗಾಗಿ ನಗರದ ರಾಜ್‌ಕುಮಾರ್ ರಸ್ತೆಯಲ್ಲಿರುವ ಸಾಂಸ್ಕೃತಿಕ ಸಮುಚ್ಚಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ.08392-275182, 080-24410547, 080-22213530, 080-22241325, ಮೊ.8792662814, 8792662816, 9986837037, 9900337738, 9448436877, 9480197511, 9916600027 ಗೆ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular