ಹಾವೇರಿ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ಛತ್ರ ಕ್ರಾಸ್ ಬಳಿ ನಡೆದಿದೆ.
ಅಪಘಾತದಲ್ಲಿ ಬ್ಯಾಡಗಿ ಪಟ್ಟಣದ ನಿವಾಸಿ ದತ್ತಾತ್ರೇಯ ವರ್ಣೇಕರ್(51) ಮತ್ತು ಮೋಟೆಬೆನ್ನೂರು ನಿವಾಸಿ ಶಂಭುಲಿಂಗ ಬ್ಯಾಡಗಿ(25) ಮೃತಪಟ್ಟವರು ಎಂದು ಹೇಳಲಾಗಿದೆ. ಘಟನೆಯಲ್ಲಿ ಗಾಯಗೊಂಡ ಓರ್ವನಿಗೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

