ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ವಿವಿಧ ಸಾಲ ಹಾಗೂ ಸಹಾಯಧನ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಿದೆ.
ನಿಗಮದ ವತಿಯಿಂದ ಹಾಸನ ಜಿಲ್ಯಾದ್ಯಂತ ವಾಸವಿರುವ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ್, ಬೌದ್ಧ, ಸಿಖ್ಖ್ ಹಾಗೂ ಪಾರ್ಸಿ ಜನಾಂಗದವರಿಗೆ 2026-27ನೇ ಸಾಲಿನಲ್ಲಿ ಅರಿವು(ವಿದ್ಯಾಭ್ಯಾಸ ಸಾಲ) ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಶ್ರಮಶಕ್ತಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ, ಗಂಗಾ ಕಲ್ಯಾಣ ಯೋಜನೆ, ನವೋದಯ ಯೋಜನೆ, ಫಾಸ್ಟ್ ಫುಡ್ ಟ್ರಕ್ /ಟೈಲರ್ ಕಿಚನ್ ಫುಡ್ (ಕಿಯೋಸ್ಟ್)ಯೋಜನೆಯಡಿ ಸಾಲ, ಸಹಾಯಧನ ನೀಡಲಾಗುವುದು.
ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗ ಪ್ರೋತ್ಸಾಹ ಯೋಜನೆ, ಸಿಖ್ಖ್ ಲಿಗಾರ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಯೋಜನೆ, ಸಮುದಾಯ ಆಧಾರಿತ ತರಬೇತಿ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ, ವ್ಯಾಪಾರ/ಉದ್ದಿಮೆ ನೇರಸಾಲ ಯೋಜನೆ, ಸಾಂತ್ವನ ಯೋಜನೆಗಳಡಿಯಲ್ಲಿ ನಿಗಮದಿಂದ ಸಾಲ ಹಾಗೂ ಸಹಾಯಧನ ಸೌಲಭ್ಯಗಳನ್ನು ನೀಡಲು ಸೆ. 17ರವರೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಹಾಸನ ಕಚೇರಿ ಹಾಗೂ ದೂರವಾಣಿ ಸಂಖ್ಯೆ: 08172-246333 ಯನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

