ಬೆಂಗಳೂರು: ಎಂಜಿನಿಯರಿಂಗ್ 3ನೇ ಸೆಮಿಸ್ಟರ್ ಗೆ ನೇರ ಪ್ರವೇಶ ಬಯಸುವ ವೃತ್ತಿಪರ ಡಿಪ್ಲೊಮಾ(Working Professional) ಅಭ್ಯರ್ಥಿಗಳ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗಿದೆ.
ಆ.22ರಂದು ಬೆಳಿಗ್ಗೆ 11ಕ್ಕೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ.
ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಆ.24ರಿಂದ 25ರವರೆಗೆ ಶುಲ್ಕ ಪಾವತಿಸಿ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಳ್ಳಬೇಕು. ಆ.26ರೊಳಗೆ ಕಾಲೇಜಿನಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಹೆಚ್.ಪ್ರಸನ್ನ ತಿಳಿಸಿದ್ದಾರೆ.
ಫಲಿತಾಂಶಕ್ಕಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
CAP — Check Result | Karnataka Examinations Authority https://share.google/nXU9OtYoPQYPeRQVO
DCET-26:
ಡಿಸಿಇಟಿ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಚಾಯ್ಸ್ ದಾಖಲಿಸಿ, ಎಂಜಿನಿಯರಿಂಗ್ ಕಾಲೇಜಿಗೆ ಸೇರಲು ದಿನಾಂಕ ವಿಸ್ತರಿಸಲಾಗಿದೆ.
ಚಾಯ್ಸ್ ದಾಖಲಿಸಲು ಆ.24ರಂದು ಮಧ್ಯಾಹ್ನ 1ಗಂಟೆವರೆಗೆ ಸಮಯ ನೀಡಲಾಗಿದೆ. ಮಧ್ಯಾಹ್ನ 2 ಗಂಟೆ ಒಳಗೆ ಚಲನ್ ಡೌನ್‌ಲೋಡ್ ಮಾಡಿಕೊಂಡು, ಶುಲ್ಕ ಪಾವತಿಸಬೇಕು. ಅದೇ ದಿನ ಸಂಜೆ 6 ಗಂಟೆ ಒಳಗೆ ಸೀಟು ಖಾತರಿ ಸ್ಲಿಪ್ ಡೌನ್‌ಲೋಡ್ ಮಾಡಿಕೊಂಡು ಆ.25ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.
https://twitter.com/KEA_karnataka/status/2090827168133906826
https://twitter.com/KEA_karnataka/status/2090718269653332034

