ಬೆಂಗಳೂರು: ಜೈಲುಗಳಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದ್ದು, ಕಾರಾಗೃಹಗಳಲ್ಲಿ ಎಐ ಕ್ಯಾಮೆರಾ, ಪೋರ್ಟಬಲ್ ಜಾಮರ್ ಅಳವಡಿಕೆಗೆ ಶುಕ್ರವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಆಪರೇಷನ್ ಶುದ್ಧೀಕರಣ ಹೆಸರಲ್ಲಿ ಜೈಲಿನಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಆದರೂ ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ಮುಂದುವರೆದಿದೆ. ಜೈಲುಗಳಲ್ಲಿ ಎಐ ಕ್ಯಾಮೆರಾ ಅಳವಡಿಕೆಗೆ ಸಂಪುಟ ಸಭೆ ಸಮ್ಮತಿಸಿದೆ. ರಾಜ್ಯದ ಕಾರಾಗೃಹ ಇಲಾಖೆಯನ್ನು ಆಧುನಿಕ ತಂತ್ರಜ್ಞಾನ ಆಧಾರಿತವಾಗಿ ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಅತ್ಯಾಧುನಿಕ ಉಪಕರಣಗಳ ಖರೀದಿ ಮತ್ತು ಅಳವಡಿಕೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಕಾರಾಗೃಹಗಳ ಭದ್ರತೆ, ಮೇಲ್ವಿಚಾರಣೆ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಳ ಮಾಡಲು ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗಿದೆ.

