HomeKarnatakaಪ್ರವಾಸಕ್ಕೆ ಬಂದಿದ್ದಾಗ ದುರಂತ: ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು ತಾಯಿ-ಮಗಳು ನಾಪತ್ತೆ

ಪ್ರವಾಸಕ್ಕೆ ಬಂದಿದ್ದಾಗ ದುರಂತ: ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು ತಾಯಿ-ಮಗಳು ನಾಪತ್ತೆ

ಹಂಪಿ: ಆಂಧ್ರಪ್ರದೇಶದಿಂದ ಪ್ರವಾಸಕ್ಕೆ ಬಂದಿದ್ದ ತಾಯಿ ಹಾಗೂ ಮಗಳು ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು ನಾಪತ್ತೆಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ನಡೆದಿದೆ.

ಶಾಹೀನ್(38) ಹಾಗೂ ಯಾಸ್ಮೀನ್(13) ನದಿಯಲ್ಲಿ ನಾಪತ್ತೆಯಾಗಿರುವ ತಾಯಿ-ಮಗಳು. ಹಂಪಿ ಬಳಿಯ ತುಂಗಭದ್ರಾ ನದಿಯಲ್ಲಿ ಈ ಘಟನೆ ನಡೆದಿದೆ. ಆಂಧ್ರ ಪ್ರದ್ರೇಶದ ಕರ್ನೂಲು ಜಿಲ್ಲೆಯ ಸೂಳೆಕೆರೆ ಗ್ರಾಮದಿಂದ ಸಂಬಂಧಿಕರೊಂದಿಗೆ ತಾಯಿ, ಮಗಳು ಪ್ರವಾಸಕ್ಕೆ ಬಂದಿದ್ದರು. ಅಡುಗೆ ಮಾಡಿ ತುಂಗಭದ್ರಾ ನದಿಯ ಸ್ನಾನಘಟ್ಟದಲ್ಲಿ ಸ್ನಾನಕ್ಕೆ ತೆರಳಿದ್ಧ ವೇಳೆ ದುರ್ಘಘಟನೆ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಲುಜಾರಿ ನದಿಯಲ್ಲಿ ಬಿದ್ದು ಕಣ್ಮರೆಯಾಗಿದ್ದು, ತಾಯಿ, ಮಗಳಿಗಾಗಿ ಹಂಪಿ ಪ್ರವಾಸಿ ಪೊಲೀಸ್ ಠಾಣೆಯ ಪೊಲೀಸರಿಂದ ಶೋಧಕಾರ್ಯ ಮುಂದುವರೆದಿದೆ. ಹಂಪಿ ಪ್ರವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular