HomeIndiaBREAKING: ದೆಹಲಿಯಲ್ಲಿ ಶಾಸಕ ಅಭಯ್ ಪಾಟೀಲ್ ಕಾರ್ ಅಪಘಾತ: ಆಪ್ ಎಂಎಲ್ಎ ಸೇರಿ 6 ಮಂದಿಗೆ...

BREAKING: ದೆಹಲಿಯಲ್ಲಿ ಶಾಸಕ ಅಭಯ್ ಪಾಟೀಲ್ ಕಾರ್ ಅಪಘಾತ: ಆಪ್ ಎಂಎಲ್ಎ ಸೇರಿ 6 ಮಂದಿಗೆ ಗಾಯ

ನವದೆಹಲಿ: ದೆಹಲಿಯ ಐಟಿಒದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಶಾಸಕರು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ.

ಭಾನುವಾರ ರಾತ್ರಿ ದೆಹಲಿಯ ಐಟಿಒದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದೆಹಲಿಯ ಕಿರಾರಿಯ ಹಾಲಿ ಶಾಸಕ ಅನಿಲ್ ಝಾ ಮತ್ತು ಕರ್ನಾಟಕದ ಶಾಸಕ ಅಭಯ್ ಪಟೇಲ್ ಸೇರಿ ಇಬ್ಬರು ಶಾಸಕರು ಮತ್ತು ಇತರೆ ನಾಲ್ವರು ಗಾಯಗೊಂಡಿದ್ದಾರೆ.

ರಾತ್ರಿ 9:30 ರ ಸುಮಾರಿಗೆ ಕೇಂದ್ರ ದೆಹಲಿಯ ಪಿಡಬ್ಲ್ಯೂಡಿ ಕಚೇರಿ ಬಳಿ ಎರಡು ಕಾರುಗಳು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಪೊಲೀಸರ ಪ್ರಕಾರ, ಲಕ್ಷ್ಮಿ ನಗರದಿಂದ ಐಟಿಒ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದು, ರೇಲಿಂಗ್ ದಾಟಿದ ನಂತರ, ಐಟಿಒದಿಂದ ಲಕ್ಷ್ಮಿ ನಗರ ಕಡೆಗೆ ಬರುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರು ಚಲಾಯಿಸುತ್ತಿದ್ದವರು 32 ವರ್ಷದ ಅಶುತೋಷ್ ಪಾಂಡೆ, ಅವರ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಲೋಕ ನಾಯಕ್ ಜೈ ಪ್ರಕಾಶ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular