ಚಿಕ್ಕಮಗಳೂರು: ಈದ್ ಮಿಲಾದ್ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಟಿಪ್ಪು ನಗರದಲ್ಲಿ ಅಳವಡಿಸಲಾಗಿದ್ದ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಕಟೌಟ್‌ಗೆ ಪಾಕಿಸ್ತಾನದ ‘ಮುಜಾಹಿದ್’ ಹಾಡು ಬಳಸಿ ವಿಡಿಯೋ ಮಾಡಲಾಗಿದ್ದು, ಅದನ್ನು ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಇನ್ಸ್ಟಾಗ್ರಾಮ್ ಪೇಜ್‌ನಲ್ಲಿ ಪೋಸ್ಟ್ ಮಾಡಲಾಗಿತ್ತು ಎನ್ನಲಾಗಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು, PSI ಧನರಾಜ್ ನೀಡಿದ ದೂರಿನ ಆಧಾರದ ಮೇಲೆ ಸೌಮೋಟೋ ಎಫ್‌ಐಆರ್ ದಾಖಲಿಸಿದ್ದಾರೆ.
BNS ಸೆಕ್ಷನ್ 196 ಮತ್ತು 299 ಅಡಿಯಲ್ಲಿ ದೇಶವಿರೋಧಿ ಕೃತ್ಯ ಹಾಗೂ ಕೋಮು ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಇನ್ನು ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದವರ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಪೋಸ್ಟ್ ಮಾಡಿದವರು ಹಾಗೂ ಅದನ್ನು ಹಂಚಿಕೊಂಡವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.
ಚಿಕ್ಕಮಗಳೂರಿನ ಟಿಪ್ಪು ನಗರದಲ್ಲಿ ಈದ್ ಮಿಲಾದ್ ಸಂಬಂಧ ಹಾಕಲಾಗಿದ್ದ 40 ಅಡಿಯ ಟಿಪ್ಪು ಕಟೌಟ್‌ಗೆ ಪಾಕಿಸ್ತಾನದ ‘ಮುಜಾಹಿದ್’ ಹಾಡು ಬಳಸಿ ಇನ್ಸ್ಟಾಗ್ರಾಮ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿತ್ತು. ಇದು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

