HomeKarnatakaBREAKING : ಬಿಜೆಪಿ ಪ್ರತಿಭಟನೆ ಹಿನ್ನೆಲೆ ವಿಧಾನಸೌಧ ಸುತ್ತಮುತ್ತ ಟ್ರಾಫಿಕ್ ಜಾಮ್; ವಾಹನ ಸವಾರರ ಪರದಾಟ

BREAKING : ಬಿಜೆಪಿ ಪ್ರತಿಭಟನೆ ಹಿನ್ನೆಲೆ ವಿಧಾನಸೌಧ ಸುತ್ತಮುತ್ತ ಟ್ರಾಫಿಕ್ ಜಾಮ್; ವಾಹನ ಸವಾರರ ಪರದಾಟ

 ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್‌ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗಿದೆ. ಪ್ರತಿಭಟನಾಕಾರರ ಹೆಚ್ಚಿನ ಸಂಖ್ಯೆಯ ಆಗಮನ ಹಾಗೂ ಭದ್ರತಾ ವ್ಯವಸ್ಥೆ ಹಿನ್ನೆಲೆಯಲ್ಲಿ ಹಲವು ರಸ್ತೆಗಳಲ್ಲಿ ವಾಹನಗಳ ಸಂಚಾರ ನಿಧಾನಗೊಂಡಿದೆ.

ವಿಧಾನಸೌಧದ ಸುತ್ತಮುತ್ತ ವಾಹನಗಳ ಸಂಖ್ಯೆ ಹೆಚ್ಚಾದ ಪರಿಣಾಮ ವಾಹನ ಸವಾರರು ಟ್ರಾಫಿಕ್‌ನಲ್ಲಿ ಸಿಲುಕಿ ಪರದಾಡುವಂತಾಗಿದೆ. ಕಚೇರಿ ಹಾಗೂ ಇತರೆ ಕೆಲಸಗಳಿಗಾಗಿ ನಗರಕ್ಕೆ ಆಗಮಿಸಿದ್ದ ಸಾರ್ವಜನಿಕರು ಸಂಚಾರ ದಟ್ಟಣೆಯಿಂದ ತೊಂದರೆ ಅನುಭವಿಸಿದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸರು ವಿಧಾನಸೌಧದ ಸುತ್ತಮುತ್ತ ಭದ್ರತೆ ಬಿಗಿಗೊಳಿಸಿದ್ದು, ವಾಹನಗಳ ಸಂಚಾರ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಧಾನಸೌಧದತ್ತ ತೆರಳಲು ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ತಡೆದು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಸಂಚಾರ ವ್ಯವಸ್ಥೆಯಲ್ಲೂ ವ್ಯತ್ಯಯ ಉಂಟಾಗಿದೆ.

ಪ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ

ಪ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸರ್ಕಾರದ ವೈಫಲ್ಯ ಹಾಗೂ ಸಚಿವರ ವಿರುದ್ಧದ ಆರೋಪಗಳನ್ನು ಖಂಡಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular