HomeKarnatakaಉರ್ದು ಭಾಷೆ ಸೇರಿ ಇತರೆ ವಿಷಯಗಳ ಶಿಕ್ಷಕರ ನೇಮಕಾತಿಗೆ ಮತ್ತೊಂದು ಅಧಿಸೂಚನೆ

ಉರ್ದು ಭಾಷೆ ಸೇರಿ ಇತರೆ ವಿಷಯಗಳ ಶಿಕ್ಷಕರ ನೇಮಕಾತಿಗೆ ಮತ್ತೊಂದು ಅಧಿಸೂಚನೆ

ಬೆಂಗಳೂರು: ಉರ್ದು ಸೇರಿದಂತೆ ಇತರ ವಿಷಯಗಳ ಶಿಕ್ಷಕರ ನೇಮಕಾತಿಗೆ ಮತ್ತೊಂದು ಅಧಿಸೂಚನೆ ಹೊರಡಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಸದಸ್ಯರಾದ ಬಲ್ಕಿಶ್ ಬಾನು, ಡಿ.ಟಿ. ಶ್ರೀನಿವಾಸಗೌಡ, ಎಂ. ನಾಗರಾಜು, ಕೆ. ಶಿವಕುಮಾರ್ ಅವರು ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಸಚಿವರು ಉತ್ತರ ನೀಡಿದರು.

ಪ್ರಸ್ತುತ ನಡೆಯುತ್ತಿರುವ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಉರ್ದು ಭಾಷೆ ಸೇರಿದಂತೆ ಬಿಟ್ಟು ಹೋಗಿರುವ ವಿಷಯಗಳ ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲೇ ಮತ್ತೊಂದು ಅಧಿಸೂಚನೆ ಹೊರಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಲ್ಲಾ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಉರ್ದು ಸೇರಿದಂತೆ ಇನ್ನೂ ನೇಮಕವಾಗಬೇಕಿರುವ ವಿಷಯಗಳ ಶಿಕ್ಷಕರ ನೇಮಕಾತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಕೂಡ ಚರ್ಚೆ ನಡೆದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉರ್ದು ಸೇರಿ ಬಿಟ್ಟು ಹೋಗಿರುವ ವಿಷಯಗಳ ಶಿಕ್ಷಕರ ನೇಮಕಾತಿಗೆ ಮೌಖಿಕವಾಗಿ ಸಮ್ಮತಿ ಸೂಚಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆ ಅನುಮತಿಗೆ ಕಳುಹಿಸಲಾಗಿದೆ. ಆರ್ಥಿಕ ಇಲಾಖೆ ಅನುಮತಿ ದೊರೆತ ಕೂಡಲೇ ಸಚಿವ ಸಂಪುಟದ ಒಪ್ಪಿಗೆ ಪಡೆದು ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಸಭಾಪತಿ ಸಲೀಂ ಮಹಮ್ಮದ್ ನೇತೃತ್ವದಲ್ಲಿ ಈಗಾಗಲೇ ಸಭೆ ನಡೆಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular