HomeKarnatakaBREAKING: ಧಾರವಾಡಕ್ಕೆ ತೆರಳಲು ಶಾಸಕ ವಿನಯ್ ಕುಲಕರ್ಣಿಗೆ ಷರತ್ತು ಬದ್ಧ ಅನುಮತಿ ನೀಡಿದ ಕೋರ್ಟ್

BREAKING: ಧಾರವಾಡಕ್ಕೆ ತೆರಳಲು ಶಾಸಕ ವಿನಯ್ ಕುಲಕರ್ಣಿಗೆ ಷರತ್ತು ಬದ್ಧ ಅನುಮತಿ ನೀಡಿದ ಕೋರ್ಟ್

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ನ್ಯಾಯಾಲಯ ಮತ್ತೊಂದು ರಿಲೀಫ್ ನೀಡಿದೆ.

ಯೋಗೀಶ್ ಗೌಡ ಕೊಲೆ ಕೇಸ್ ನ ಸಾಕ್ಷ್ಯ ನಾಶ ಆರೋಪದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದಿರುವ ವಿನಯ್ ಕುಲಕರ್ಣಿಗೆ ಇದೀಗ ಧಾರವಾಡಕ್ಕೆ ತೆರಳಲು 42ನೇ ಎಸಿಜೆಎಂ ಕೋರ್ಟ್ ಅನುಮತಿ ನೀಡಿದೆ.

ಸ್ವಕ್ಷೇತ್ರ ಧಾರವಾಡಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಧಾರವಾಡಕ್ಕೆ ತೆರಳಲು ಷರತ್ತುಬದ್ಧ ಅನುಮತಿ ನೀಡಿದೆ. ಮೆರವಣಿಗೆ ಇತ್ಯಾದಿ ಮಾಡದಂತೆ ಷರತ್ತು ವಿಧಿಸಿದ್ದು, ಒಂದು ವೇಳೆ ಷರತ್ತು ಉಲ್ಲಂಘಿಸಿದರೆ ಜಾಮೀನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular