HomeKarnatakaಡಿ.ಕೆ.ಶಿವಕುಮಾರ್

ಡಿ.ಕೆ.ಶಿವಕುಮಾರ್

ಬೆಂಗಳೂರು: ಕಸ್ತೂರಿ ರಂಗನ್‌ ವರದಿ ವಿಚಾರವಾಗಿ ಚರ್ಚೆ ನಡೆಸಲು ಸೆಪ್ಟೆಂಬರ್‌ 21 ರಿಂದ 23 ರ ವರೆಗೆ ಮೂರು ದಿನಗಳ ವಿಧಾನಮಂಡಲ ಅಧಿವೇಶನ ಕರೆಯಲಾಗಿದ್ದು, ರೈತರ ಹಿತದೃಷ್ಟಿಯಿಂದ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಅರಣ್ಯ ಭವನದಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಅಧಿವೇಶನದಲ್ಲಿ ಎಲ್ಲ ಶಾಸಕರು ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ಮುಕ್ತವಾಗಿ ನೀಡಬೇಕು. ರಾಜ್ಯದ ರೈತರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರು ಮುಖ್ಯಮಂತ್ರಿಯವರ ಎಪಿಎಂಸಿ ಭೇಟಿ ಕುರಿತಂತೆ ಮೆಚ್ಚುಗೆ ವ್ಯಕ್ತಪಡಿಸಿದ ವಿಚಾರವಾಗಿ, ನಮ್ಮ ಕೆಲಸವನ್ನು ಗುರುತಿಸಿದ ಹೈಕೋರ್ಟ್ ಗೆ ಕೃತಜ್ಞತೆ ಸಲ್ಲಿಸುತ್ತೇನೆ. ಎಲ್ಲ ಸಚಿವರಿಗೂ ಎಪಿಎಂಸಿಗಳ ಬಗ್ಗೆ ಗಮನ ಹರಿಸುವಂತೆ ಸೂಚಿಸಿದ್ದೇನೆ. ಏಕೆಂದರೆ ಸಾಮಾನ್ಯ ಜನರು ಯಾವುದೇ ಕಾರಣಕ್ಕೂ ತೊಂದರೆ ಅನುಭವಿಸಬಾರದು ಎಂಬುದು ಸರ್ಕಾರದ ನಿಲುವು ಎಂದರು.

ಬಾಲ ಕಾರ್ಮಿಕರ ರಕ್ಷಣೆ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆ ಬಗ್ಗೆ, ಬಾಲಕಾರ್ಮಿಕರ ರಕ್ಷಣೆ ವಿಚಾರದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆ ದುರದೃಷ್ಟಕರ. ಮಕ್ಕಳನ್ನು ರಕ್ಷಿಸುವುದು ಕಾರ್ಮಿಕ ಇಲಾಖೆ ಮಾತ್ರವಲ್ಲ, ಪೊಲೀಸ್ ಇಲಾಖೆಯ ಜವಾಬ್ದಾರಿಯೂ ಹೌದು.‌ ಬಾಲಕಾರ್ಮಿಕರನ್ನು ರಕ್ಷಿಸುವ ಕಾರ್ಯದಲ್ಲಿ ಪೊಲೀಸ್ ಹಾಗೂ ಕಾರ್ಮಿಕ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಇನ್ನು ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ ವಿಚಾರವಾಗಿ, ಸತೀಶ್ ಜಾರಕಿಹೊಳಿ ಅವರಿಗೆ ಧೈರ್ಯ ತುಂಬಿದ್ದೇನೆ. ಅವರು ಯಾವುದೇ ತಪ್ಪು ಮಾಡಿಲ್ಲ. ಕಾನೂನು ಚೌಕಟ್ಟಿನಲ್ಲಿಯೇ ವ್ಯವಹಾರ ನಡೆಸುತ್ತಿದ್ದಾರೆ ಎಂದು ಹೇಳಿದರು.

ಇದು ರಾಜಕೀಯವಾಗಿ ನಡೆಯುತ್ತಿರುವ ಬೆಳವಣಿಗೆ. ಕಾಂಗ್ರೆಸ್ ಪಕ್ಷದ ನಾಯಕರನ್ನು ಹಾಗೂ ವಿರೋಧ ಪಕ್ಷದವರನ್ನು ಗುರಿ ಮಾಡಲಾಗುತ್ತಿದೆ. ಇನ್ನೂ ಮೂರು–ನಾಲ್ಕು ಜನರನ್ನು ಗುರಿ ಮಾಡುವ ಸಾಧ್ಯತೆ ಇದೆ ಎಂಬ ಅರಿವು ನನಗಿದೆ ಎಂದರು.

ಬಿಜೆಪಿ ನಾಯಕರಿಗೆ ಸಂಬಂಧಿಸಿದ ಹಣ ವರ್ಗಾವಣೆ ಹಾಗೂ ವಿದೇಶಿ ಖಾತೆಗಳಿಗೆ ಹಣ ಹೋಗಿರುವ ಆರೋಪಗಳಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಕಾಂಗ್ರೆಸ್ ನಾಯಕರ ಮೇಲಷ್ಟೇ ತನಿಖಾ ಸಂಸ್ಥೆಗಳ ಕ್ರಮ ನಡೆಯುತ್ತಿದೆ ಎಂದು ಹೇಳಿದರು.

ಇನ್ನು ವಂದೇ ಮಾತರಂ ಹಾಡಿನ ವಿಚಾರವಾಗಿ, ಕಾಂಗ್ರೆಸ್ ನಿಲುವು ಬಹಳ ಹಿಂದಿನಿಂದಲೂ ಸ್ಪಷ್ಟವಾಗಿದೆ. ವಂದೇ ಮಾತರಂ, ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಕಾಂಗ್ರೆಸ್ ಗೌರವ ನೀಡುತ್ತದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular