HomeKarnatakaದಾವಣಗೆರೆಯಲ್ಲಿ AI ಚಿರತೆ ರಚಿಸಿ ಸುಳ್ಳು ಸುದ್ದಿ ಹಬ್ಬಿಸಿದ ಯುವಕ: ದೂರು ದಾಖಲು

ದಾವಣಗೆರೆಯಲ್ಲಿ AI ಚಿರತೆ ರಚಿಸಿ ಸುಳ್ಳು ಸುದ್ದಿ ಹಬ್ಬಿಸಿದ ಯುವಕ: ದೂರು ದಾಖಲು

ದಾವಣಗೆರೆ: ಕಿಡಿಗೇಡಿ ಯುವಕನೊಬ್ಬ ಸುಮ್ಮನಿರಲಾರದೇ AI ಬಳಸಿ ಚಿರತೆಯ ನಕಲಿ ಫೋಟೋ ಸೃಷ್ಟಿಸಿ, ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿ ಆತಂಕ ಸೃಷ್ಟಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಹರಿಹರದ ವಾಸನ ಗ್ರಾಮದ ಸುನೀಲ್ (22) ಎಂಬಾತ ಕಳೆದ ಮೂರು ದಿನಗಳ ಹಿಂದೆ ನಂದೀಶ್ವರ ಕ್ಯಾಂಪ್‌ನ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಹೇಳಿ ಫೋಟೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ. ಈ ನಕಲಿ ಎಐ ಚಿರತೆ ಫೋಟೋ ಜಿಲ್ಲಾದ್ಯಂತ ವೈರಲ್ ಆಗಿತ್ತು. ಆತಂಕಕ್ಕೆ ಕಾರಣವಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿರತೆ ಕಾಣಿಸಿಕೊಂಡಿರುವ ಸುದ್ದಿ ಹರಡುತ್ತಿದ್ದಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಆದರೆ, ಸ್ಥಳದಲ್ಲಿ ಚಿರತೆಯ ಯಾವುದೇ ಹೆಜ್ಜೆ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಅನುಮಾನ ಮೂಡಿತ್ತು.

ಈ ಬಗ್ಗೆ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕಿಡಿಗೇದಿಗಳು ಎಐ ಫೋಟೋ ಹರಿಬಿಟ್ಟು ಬೆದರಿಸಿರುವ ಶಂಕೆ ವ್ಯಕ್ತವಾಗಿತ್ತು. ಫೋಟೋ ಹರಿಬಿಟ್ಟ ವ್ಯಕ್ತಿಯನ್ನು ಪತ್ತೆ ಮಾಡಿದ ಪೊಲೀಸರು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದಾರೆ.

ಈ ವೇಳೇ ಆ ಫೋಟೋ ಎಐ ಮೂಲಕ ಸೃಷ್ಟಿಸಿರುವುದಾಗಿ ಸುನೀಲ್ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಎಐ ಚಿರತೆ ಚಿತ್ರ ಸೃಷ್ಟಿಸಿ ಬೆದರಿಕೆ ಹಾಕಿದ ಯುವಕನಿಗೆ ಪೊಲೀಸರು ಬುದ್ಧಿವಾದ ಹೇಳಿದ್ದಾರೆ. ಅಲ್ಲದೇ ಆತನಿಗೆ ಎಚ್ಚರಿಕೆ ನೀಡಿ ಬಿಟ್ಟು ಕಳುಹಿಸಿದ್ದಾರೆ.

ಇನ್ನು ಎಐ ಚಿರತೆ ವೈರಲ್ ಆಗುತ್ತಿದ್ದಂತೆ ಚಿರತೆ ಸುದ್ದಿ ಕೇಳಿ ಅರಣ್ಯಾಧಿಕಾರಿಗಳು ಚಿರತೆ ಸೆರೆ ಹಿಡಿಯಲು ಸ್ಥಳದಲ್ಲಿ ಬೋನು ಇಟ್ಟಿರುವ ಪ್ರಸಂಗವೂ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular