ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಶಿವಮೊಗ್ಗ ಇವರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ದಿನಾಂಕ : 18-09-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಅಪೋಲೋ ಫಾರ್ಮಸಿ ಪ್ರೈ. ಲಿ.’ ಹಾಗೂ ‘ಮುತ್ತೂಟ್ ಮೈಕ್ರೋ ಫಿನ್ ಪ್ರೈ.ಲಿ.’ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ.
ಶೈಕ್ಷಣಿಕ ಅರ್ಹತೆ: ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ 18 ರಿಂದ 35 ವರ್ಷ ವಯೋಮಾನದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.ಉಚಿತ ಪ್ರವೇಶವಿದ್ದು,ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606/9108235132 ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ
ಸೆ. 17 ರಂದು ಮಹಿಳಾ ದಸರಾ ಪೂರ್ವಭಾವಿ ಸಭೆ-ಮಹಿಳೆಯರು ಭಾಗವಹಿಸಲು ಮನವಿ
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ಮಹಿಳಾ ದಸರಾ ಸಮಿತಿಯ ವತಿಯಿಂದ ಆಯೋಜಿಸಲಾಗುವ ‘ಮಹಿಳಾ ದಸರಾ 2026’ ಕಾರ್ಯಕ್ರಮಗಳ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕುರಿತು ಚರ್ಚಿಸಲು ಸೆಪ್ಟೆಂಬರ್ 17 ರಂದು ಬೆಳಿಗ್ಗೆ 10 ಗಂಟೆಗೆ ಮಹಾನಗರಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.
ಈ ಸಭೆಯಲ್ಲಿ ವಿವಿಧ ಮಹಿಳಾ ಸಂಘ ಸಂಸ್ಥೆಗಳು ಹಾಗೂ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಚರ್ಚಿಸಲಾಗುತ್ತದೆ. ಆದ್ದರಿಂದ ನಗರದ ಎಲ್ಲಾ ಮಹಿಳಾ ಸಂಘ ಸಂಸ್ಥೆಗಳು, ಪ್ರತಿನಿಧಿಗಳು ಹಾಗೂ ಸಾರ್ವಜನಿಕ ಮಹಿಳೆಯರು ತಪ್ಪದೇ ಭಾಗವಹಿಸಬೇಕಾಗಿ ಸಮುದಾಯ ವ್ಯವಹಾರಿಕ ಅಧಿಕಾರಿ ಹಾಗೂ ಮಹಿಳಾ ದಸರಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
ಸೆ. 25 ರಿಂದ 27 ರವರೆಗೆ ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ
ಶಿವಮೊಗ್ಗ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಆಯೋಜಿಸಿರುವ “ಕಲಾ ಸಂಗಮ” ಕಾರ್ಯಕ್ರಮದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರವು ದಿನಾಂಕ: 25.09.2026 ರಿಂದ 27.09.2026ರವರೆಗೆ “ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ-2026”ನ್ನು ರವೀಂದ್ರ ಕಲಾಕ್ಷೇತ್ರ ಆವರಣ, ಜೆ.ಸಿ. ರಸ್ತೆ, ಬೆಂಗಳೂರು ಇಲ್ಲಿ ಏರ್ಪಡಿಸಿದೆ.
ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1,000-00 ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು – ಅವರ ಹೆಸರಿನಲ್ಲಿ ಡಿಡಿ ಸಲ್ಲಿಸಬೇಕು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಕಚೇರಿ ಅಥವಾ ಪ್ರಾಧಿಕಾರದ ವೆಬ್‌ಸೈಟ್ https://kpp.karnataka.gov.in ನಲ್ಲಿ ಉಚಿತವಾಗಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ದಿನಾಂಕ:22.09.2026 ರಂದು ಸಂಜೆ 5.00 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ಇವರಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆಯ ಮೂಲಕ ಸಲ್ಲಿಸಲು ಕೋರಿದೆ. ಸೀಮಿತ ಮಳಿಗೆಗಳು ಲಭ್ಯವಿರುವುದರಿಂದ ಮೊದಲು ಪ್ರಾಧಿಕಾರದಲ್ಲಿ ಸ್ವೀಕೃತವಾದ ಅರ್ಜಿಗಳಿಗೆ ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ದೂ:080-22484516 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.

