HomeKarnatakaಹಾಸನದಲ್ಲಿ ಸ್ನೇಹಿತರ ಜೊತೆ ಲಾಡ್ಜ್ ಗೆ ಬಂದಿದ್ದ ಯುವತಿ ಅನುಮಾನಾಸ್ಪದ ಸಾವು

ಹಾಸನದಲ್ಲಿ ಸ್ನೇಹಿತರ ಜೊತೆ ಲಾಡ್ಜ್ ಗೆ ಬಂದಿದ್ದ ಯುವತಿ ಅನುಮಾನಾಸ್ಪದ ಸಾವು

ಹಾಸನ: ಲಾಡ್ಜ್‌ನಲ್ಲಿ ತಂಗಿದ್ದ 23 ವರ್ಷದ ಯುವತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೊಡಿಗೆಯಲ್ಲಿ ನಡೆದಿದೆ.

ಬೆಂಗಳೂರಿನ ನಾಗಸಂದ್ರ ನಿವಾಸಿ ವರ್ಷ (23) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ವಳಲಹಳ್ಳಿ ಕೊಡಿಗೆಯಲ್ಲಿರುವ ಲಾಡ್ಜ್‌ನಲ್ಲಿ ತಂಗಿದ್ದ ವೇಳೆ ಯುವತಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ .ಶುಕ್ರವಾರ ವರ್ಷ ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಜೊತೆ ಟ್ರಿಪ್ ಗೆ ಬಂದಿದ್ದರು. ಶನಿವಾರ, ಭಾನುವಾರ ಹಾಗೂ ಸೋಮವಾರ ಫಾಲ್ಸ್ ಸೇರಿದಂತೆ ಹಲವು ಕಡೆ ಸುತ್ತಾಡಿದ್ದರು. ಅಲ್ಲದೇ ವಳಲಹಳ್ಳಿ ಕೊಡಿಗೆಯಲ್ಲಿರುವ ಲಾಡ್ಜ್ ನಲ್ಲಿ ಒಂದೇ ರೂಂ ನಲ್ಲಿ ಮೂವರು ತಂಗಿದ್ದರು.ಮಂಗಳವಾರ ವರ್ಷ ಲಾಡ್ಜ್ ನಲ್ಲಿ ಸ್ನಾನಕ್ಕೆ ಹೋಗಿದ್ದ ವೇಳೆ ಮೃತಪಟ್ಟಿದ್ದಾರೆ.

ಯುವತಿಯ ಸಾವಿನ ನಿಖರ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ಹಿನ್ನೆಲೆ ಹಾಗೂ ಘಟನೆಗೆ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸುವ ಪ್ರಕ್ರಿಯೆ ಸೇರಿದಂತೆ ಮುಂದಿನ ಕಾನೂನು ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ. ತನಿಖೆಯ ಬಳಿಕವಷ್ಟೇ ಯುವತಿಯ ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ.

ತುಮಕೂರಿನಲ್ಲಿ ಹಿಟ್‌ ಅಂಡ್‌ ರನ್‌ಗೆ ನವದಂಪತಿ ಸಾವು; ಅಪರಿಚಿತ ವಾಹನ ಡಿಕ್ಕಿ

ತುಮಕೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ನವವಿವಾಹಿತ ದಂಪತಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಸೇತುವೆ ಬಳಿ ನಡೆದಿದೆ.

ಮೃತರನ್ನು ಶಿರಾ ತಾಲೂಕಿನ ಹುಣಸೇಕಟ್ಟೆ ಗ್ರಾಮದ ದರ್ಶನ್ (25) ಮತ್ತು ಉಷಾರಾಣಿ (21) ಎಂದು ಗುರುತಿಸಲಾಗಿದೆ. ಈ ದಂಪತಿ ಸುಮಾರು ಒಂದೂವರೆ ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.

ಮಂಗಳವಾರ ದಂಪತಿ ಬೈಕ್‌ನಲ್ಲಿ ಬೆಂಗಳೂರಿನತ್ತ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದರ್ಶನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಉಷಾರಾಣಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ಅಪರಿಚಿತ ವಾಹನ ಹಾಗೂ ಚಾಲಕನ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular