HomeKarnatakaರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿ ; ಶಿಕ್ಷಣ ಇಲಾಖೆ ಮಹತ್ವದ ಆದೇಶ

ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿ ; ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಶಾಲೆಗಳಲ್ಲಿ 2020ರ ಡಿಸೆಂಬರ್‌ 31ರ ಪೂರ್ವದಲ್ಲಿ ಖಾಲಿಯಾಗಿರುವ ಅರ್ಹ ಬೋಧಕ ಹುದ್ದೆಗಳನ್ನು ನಿಯಮಾನುಸಾರ ಭರ್ತಿ ಮಾಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ.

ಯಾವುದೇ ಒಂದು ಆಡಳಿತ ಮಂಡಳಿಯ ಅಧೀನದಲ್ಲಿರುವ ಅನುದಾನಿತ ಶಾಲೆಯಲ್ಲಿ ಖಾಲಿಯಾಗಿದ್ದ ಹುದ್ದೆಯನ್ನು, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಅದೇ ಆಡಳಿತ ಮಂಡಳಿಯ ಮತ್ತೊಂದು ಶಾಲೆಯಿಂದ ಸಿಬ್ಬಂದಿ ವರ್ಗಾವಣೆ ಮೂಲಕ ಭರ್ತಿ ಮಾಡಿದ್ದರೆ, ಆ ವರ್ಗಾವಣೆಯಿಂದ ಮೊದಲಿನ ಶಾಲೆಯಲ್ಲಿ ಉಂಟಾಗುವ ಖಾಲಿ ಹುದ್ದೆಯನ್ನೂ ಪರಿಗಣಿಸಲು ಇಲಾಖೆ ಸೂಚಿಸಿದೆ.

ವರ್ಗಾವಣೆಗೊಂಡ ಶಾಲೆಯಲ್ಲಿ ಹುದ್ದೆ ಖಾಲಿಯಾದ ಮೂಲ ದಿನಾಂಕವನ್ನೇ ಪರಿಗಣಿಸಿ, ವರ್ಗಾವಣೆ ಪೂರ್ವದ ಶಾಲೆಯಲ್ಲಿ ಉಂಟಾದ ಹುದ್ದೆಯನ್ನು ಖಾಲಿ ಹುದ್ದೆಯೆಂದು ನಮೂದಿಸಬೇಕು. ಇಂತಹ ಹುದ್ದೆಗಳನ್ನು 2020ರ ಡಿಸೆಂಬರ್‌ 31ರ ಪೂರ್ವದಲ್ಲಿ ಖಾಲಿಯಾಗಿದ್ದ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ನಿಯಮಾನುಸಾರ ಪರಿಗಣಿಸಬೇಕು ಎಂದು ಇಲಾಖೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಿಯಮವು ಒಂದೇ ಆಡಳಿತ ಮಂಡಳಿಯಿಂದ ನಡೆಸಲ್ಪಡುವ ಅನುದಾನಿತ ಶಾಲೆಗಳ ನಡುವಿನ ಸಿಬ್ಬಂದಿ ವರ್ಗಾವಣೆಯಿಂದ ಉಂಟಾಗುವ ಖಾಲಿ ಹುದ್ದೆಗಳಿಗೆ ಅನ್ವಯವಾಗಲಿದೆ. ಅಂತಹ ಪ್ರಕರಣಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಈಗಾಗಲೇ ಇಂತಹ ಪ್ರಕರಣಗಳನ್ನು ಹೊಂದಿರುವ ಶಾಲೆಗಳು ತಮ್ಮ ಪ್ರಸ್ತಾವನೆಗಳನ್ನು ಪುನಃ ಪರಿಶೀಲಿಸಿ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ವಿಭಾಗೀಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು (ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

2020ರ ಡಿಸೆಂಬರ್‌ 31ರ ಪೂರ್ವದ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯಲ್ಲಿ, ಒಂದೇ ಆಡಳಿತ ಮಂಡಳಿಯ ಶಾಲೆಗಳ ನಡುವಿನ ವರ್ಗಾವಣೆಯಿಂದ ಉಂಟಾದ ಖಾಲಿ ಹುದ್ದೆಗಳನ್ನೂ ನಿಯಮಾನುಸಾರ ಪರಿಗಣಿಸಲು ಶಾಲಾ ಶಿಕ್ಷಣ ಇಲಾಖೆ ಅವಕಾಶ ನೀಡಿದೆ.

ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

ಧಾರವಾಡ : ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ದೈಹಿಕ ಶಿಕ್ಷಣ ವಿಭಾಗದ ಒಂದು ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಸೆಪ್ಟೆಂಬರ್ 18, 2026 ರಂದು ಬೆಳಿಗ್ಗೆ 10:30 ಘಂಟೆಗೆ ಡೀನ್ (ಸವಿ), ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ 0836-2214234 ಹಾಗೂ ಕೃವಿವಿ ಜಾಲತಾಣ www.uasd.edu ವನ್ನು ಸಂಪರ್ಕಿಸಬಹುದೆಂದು ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಡೀನ್ (ಸವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 18ರಂದು ಉದ್ಯೋಗ ಮೇಳ: ನೇರ ಸಂದರ್ಶನಕ್ಕೆ ಅವಕಾಶ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ‘ಆದಿತ್ಯ ಬಿರ್ಲಾ ಸನ್ ಲೈಫ್ ಇನ್ಶೂರೆನ್ಸ್’ ಇವುಗಳ ಜಂಟಿ ಆಶ್ರಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಸಂದರ್ಶನ ನಡೆಯುವ ಸ್ಥಳ:

ಆದಿತ್ಯ ಬಿರ್ಲಾ ಸನ್ ಲೈಫ್ ಇನ್ಶೂರೆನ್ಸ್, 2ನೇ ಮಹಡಿ, ಅಯ್ಯಪ್ಪ-ಡಿ ಯು ಟವರ್, ಎಂಐಜಿ-3, ಕೆಹೆಚ್‌ಬಿ ಕಾಲೋನಿ, ಪಾರ್ವತಿ ನಗರ, ಕೆಎಫ್‌ಸಿ ಎದುರು, ಬಳ್ಳಾರಿ – 583103.ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ರೀತಿಯ ನೋಂದಣಿ ಶುಲ್ಕ ಇರುವುದಿಲ್ಲ. ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಬ್ಬರೂ ಈ ಅವಕಾಶವನ್ನು ಪಡೆದುಕೊಳ್ಳಬಹುದು.

ಎಸ್‌ಎಸ್‌ಎಲ್‌ಸಿ, ಪಿಯುಸಿ ಅಥವಾ ಯಾವುದೇ ಪದವಿ ಪೂರ್ಣಗೊಳಿಸಿದವರು ಅರ್ಹರು. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ/ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ನ ಪ್ರತಿಯೊಂದಿಗೆ ಆಗಮಿಸತಕ್ಕದ್ದು.

ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಮೊಬೈಲ್ ಸಂಖ್ಯೆಗಳಾದ 7619207762, 9663263086, 7676774293 ಅಥವಾ 6360408094 ಅನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📄 Official Documents / Supporting Documents

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular