HomeJobsSSLC, ಪಿಯುಸಿ, ಪದವೀಧರರಿಗೆ ಉದ್ಯೋಗಾವಕಾಶ: ಇಲ್ಲಿದೆ ಮಾಹಿತಿ

SSLC, ಪಿಯುಸಿ, ಪದವೀಧರರಿಗೆ ಉದ್ಯೋಗಾವಕಾಶ: ಇಲ್ಲಿದೆ ಮಾಹಿತಿ

ಬಳ್ಳಾರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ‘ಆದಿತ್ಯ ಬಿರ್ಲಾ ಸನ್ ಲೈಫ್ ಇನ್ಶೂರೆನ್ಸ್’ ಇವುಗಳ ಜಂಟಿ ಆಶ್ರಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಸಂದರ್ಶನ ನಡೆಯುವ ಸ್ಥಳ:

ಆದಿತ್ಯ ಬಿರ್ಲಾ ಸನ್ ಲೈಫ್ ಇನ್ಶೂರೆನ್ಸ್, 2ನೇ ಮಹಡಿ, ಅಯ್ಯಪ್ಪ-ಡಿ ಯು ಟವರ್, ಎಂಐಜಿ-3, ಕೆಹೆಚ್‌ಬಿ ಕಾಲೋನಿ, ಪಾರ್ವತಿ ನಗರ, ಕೆಎಫ್‌ಸಿ ಎದುರು, ಬಳ್ಳಾರಿ – 583103.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ರೀತಿಯ ನೋಂದಣಿ ಶುಲ್ಕ ಇರುವುದಿಲ್ಲ. ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಬ್ಬರೂ ಈ ಅವಕಾಶವನ್ನು ಪಡೆದುಕೊಳ್ಳಬಹುದು.

ಎಸ್‌ಎಸ್‌ಎಲ್‌ಸಿ, ಪಿಯುಸಿ ಅಥವಾ ಯಾವುದೇ ಪದವಿ ಪೂರ್ಣಗೊಳಿಸಿದವರು ಅರ್ಹರು. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ/ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಆಗಮಿಸತಕ್ಕದ್ದು.

ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಮೊಬೈಲ್ ಸಂಖ್ಯೆಗಳಾದ 7619207762, 9663263086, 7676774293 ಅಥವಾ 6360408094 ಅನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರು ಸೌಲಭ್ಯ ಕಲ್ಪಿಸಲು ಗ್ರಾ.ಪಂ ಅನುದಾನ ಬಳಕೆಯಾಗಲಿ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಕೂಡಲೇ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಲು ಗ್ರಾಮ ಪಂಚಾಯಿತಿಯ ಅನುದಾನ ಪೂರ್ಣವಾಗಿ ಬಳಕೆ ಮಾಡಿ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಸಂಸದೀಯ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ನಗರ  ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ  ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಬೆಂಗಳೂರು ನಗರ  ಜಿಲ್ಲಾ ಪಂಚಾಯಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 2026-27ನೇ ಸಾಲಿನ ಮೊದಲನೇ ತ್ರೈಮಾಸಿಕ ಕೆಡಿಪಿ  ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೂಲಭೂತ ಸೌಕರ್ಯಗಳಲ್ಲಿ ಕುಡಿಯುವ ನೀರಿನ ಸೌಲಭ್ಯಕ್ಕೆ ಶಾಶ್ವತ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಪ್ರಥಮಾದ್ಯತೆ   ನೀಡಬೇಕು ಎಂದರು.

ನೂತನ ಬೋರ್ವೆಲ್ ಕೊರೆಯಲು ಅನುದಾನ ಕೋರುವ ಹಲವಾರು ಪ್ರಸ್ತಾವನೆ ಬರುತ್ತಿವೆ. ಈಗಾಗಲೇ ವರ್ಷಗಳಿಂದ ನಿಷ್ಕ್ರಿಯಗೊಂಡಿರುವ ಸಾವಿರಕ್ಕೂ ಹೆಚ್ಚು ಕೊಳವೆ ಬಾವಿಗಳಿಗೆ ಅಳವಡಿಸಿರುವ ಆರ್. ಆರ್ ಸಂಖ್ಯೆಯನ್ನೇ ನೂತನ ಸಂಪರ್ಕಗಳಿಗೆ ವರ್ಗಾವಣೆ ಮಾಡಿ ಎಂದು ಅವರು ಸೂಚಿಸಿದರು.

ಮುಂದಿನ ಸಭೆಯೊಳಗಾಗಿ ಈ ಕಾರ್ಯವನ್ನು ಪೂರ್ಣಗೊಳಸಲಾಗುವುದು ಎಂದು ಜಿಲ್ಲಾ ಪಂಚಾಯತ್ ನ ಮುಖ್ಯಕಾರ್ಯ ನಿರ್ವಹಣಾ ಅಧಿಕಾರಿಗಳಾದ ಶ್ರೀ.ಯತೀಶ್ .ಆರ್ ಅವರು ಭರವಸೆ ನೀಡಿದರು.

ಕಸ ನಿರ್ವಹಣೆ ವಿಚಾರದಲ್ಲಿ ಇತರೆ ರಾಜ್ಯಗಳನ್ನು ಗಮನಿಸಿದರೆ ನಮಗೆ ಬೇಸರವಾಗುತ್ತದೆ. ನಮ್ಮಲ್ಲಿ ಹಣಕ್ಕೆ ಯಾವುದೇ ಕೊರತೆ ಇಲ್ಲ, ಆದರೆ ವೈಜ್ಞಾನಿಕ ಮನಸ್ಥಿತಿಯ ಕೊರತೆಯಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿಗಳಿಗೆ ಬರುವ ಅನುದಾನದ ಒಂದು ಪಾಲನ್ನು ಕಡ್ಡಾಯವಾಗಿ ಶಾಶ್ವತ ನಿರ್ಮಾಣ ಕಾರ್ಯಗಳಿಗೆ, ವಿಶೇಷವಾಗಿ ನೀರು ಮತ್ತು ಕಸ ನಿರ್ವಹಣೆಗೆ ಮೀಸಲಿಡಬೇಕು ಎಂದರು.

ಕೇವಲ ಹಣ ಖರ್ಚು ಮಾಡುವುದರಿಂದ ಜಿಲ್ಲೆ ಅಭಿವೃದ್ಧಿ ಆಗುವುದಿಲ್ಲ. ಬದಲಿಗೆ ಅದು ಜನರ ಸಮಸ್ಯೆಗಳಿಗೆ ಪರಿಹಾರವಾಗಿ ಪರಿಣಮಿಸಬೇಕು. ಇಲ್ಲದಿದ್ದರೆ ಹಣ ವೆಚ್ಚ ಮಾಡಿಯೂ ಯಾವುದೇ ಪ್ರಯೋಜನವಿಲ್ಲ ಎಂದು ಕಿವಿಮಾತು ಹೇಳಿದರು.

ಕಳೆದ ಒಂದೂವರೆ ವರ್ಷದಿಂದ ಯೋಜನೆಯನ್ನು ಮಾಡಿ ಬೆಂಗಳೂರು ಸುತ್ತ ಬಿ ಎಂ ಆರ್ ಡಿ ವ್ಯಾಪ್ತಿಯಲ್ಲಿ ಹೊಸ ರಸ್ತೆಗಳನ್ನು ಗುರುತಿಸಲಾಗಿದೆ. ಕೆಲವು ರಸ್ತೆಗಳನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದರು. ಈ ಕಾರ್ಯದಲ್ಲಿ ಅಧಿಕಾರಿಗಳ ನಿರ್ಲಕ್ಷ ಅಥವಾ ನಿಯಮ ಉಲಂಘನೆ ಕಂಡು ಬಂದಲ್ಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

 ಗ್ರಾಮೀಣ ಭಾಗದಲ್ಲಿ ಉದ್ಯಾನವನ, ಆಟದ ಮೈದಾನ ಮತ್ತು ಕ್ರೀಡಾಂಗಣದ ಅವಶ್ಯಕತೆ ಇದ್ದು ಪಂಚಾಯಿತಿ ಭಾಗದಲ್ಲಿ ಖಾಲಿ ಇರುವ ನಿವೇಶನವನ್ನು ಹಸ್ತಾಂತರಿಸಿ ಆದ್ಯತೆ ಮೇರೆಗೆ ತಡೆಗೋಡೆಯನ್ನು ನಿರ್ಮಿಸಿ ಅನುದಾನದ ಲಭ್ಯತೆ ಆಧರಿಸಿ ಅಭಿವೃದ್ಧಿಪಡಿಸಬೇಕು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ತಾಲೂಕು ಶಾಸಕರಾದ ಎಂ ಕೃಷ್ಣಪ್ಪ, ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಋತ್ವಿಕ್ ರಂಜನ್ ಪಾಂಡೆ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯತೀಶ್ ಆರ್.  ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular