HomeKarnatakaಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಸ್ಟ್ರೀಟ್ ಫೆಸ್ಟಿವಲ್ ಗೆ ಸಿಎಂ ಡಿ.ಕೆ.ಶಿವಕುಮಾರ್ ಚಾಲನೆ, ಬಳ್ಳಾರಿ ಜೀನ್ಸ್...

ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಸ್ಟ್ರೀಟ್ ಫೆಸ್ಟಿವಲ್ ಗೆ ಸಿಎಂ ಡಿ.ಕೆ.ಶಿವಕುಮಾರ್ ಚಾಲನೆ, ಬಳ್ಳಾರಿ ಜೀನ್ಸ್ ಖರೀದಿ

ಕಲಬುರಗಿ: ಸ್ವಾಭಿಮಾನ, ತ್ಯಾಗ ಮತ್ತು ಕೆಚ್ಚೆದೆಯ ಹೋರಾಟದ ಫಲವಾಗಿ ನಿಜಾಮನ ನಿರಂಕುಶ ಆಡಳಿತದಿಂದ ಮುಕ್ತಿ ಪಡೆದ ದಿನ ಕಲ್ಯಾಣ ಕರ್ನಾಟಕ ಉತ್ಸವ ದಿನ(ವಿಮೋಚನಾ ದಿನ). 1948ರ ಸೆಪ್ಟೆಂಬರ್ 17ರಂದು ಭಾರತ ಒಕ್ಕೂಟದೊಂದಿಗೆ ವಿಲೀನಗೊಂಡು ಸ್ವಾತಂತ್ರ್ಯದ ಬೆಳಕು ಕಂಡ ಈ ಪುಣ್ಯಭೂಮಿಯ ವಿಮೋಚನೆಗಾಗಿ ರಕ್ತ ಸುರಿಸಿದ ಪ್ರತಿಯೊಬ್ಬ ಅಮರ ವೀರರ ತ್ಯಾಗ-ಬಲಿದಾನ ಸದಾ ಸ್ಮರಣೀಯ. ಆ ಹೋರಾಟದ ಕಿಚ್ಚನ್ನು ನೆನೆಯುತ್ತಲೇ, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ಈ ಭಾಗದ ಯುವಜನತೆಯ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ಸಂಕಲ್ಪ ನಮ್ಮ ಸರ್ಕಾರದ್ದಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮಕ್ಕೆ ಮುನ್ನುಡಿ ಬರೆಯಲಾಯಿತು. ಕಲಬುರಗಿ ನಗರದ ಪಬ್ಲಿಕ್‌ ಗಾರ್ಡನ್‌ನಲ್ಲಿ ಆಯೋಜಿಸಿದ್ದ ಬೀದಿ ಉತ್ಸವಕ್ಕೆ (ಸ್ಟ್ರೀಟ್‌ ಫೆಸ್ಟಿವಲ್‌) ಚಾಲನೆ ನೀಡಿದ ಅವರು, ಪ್ರವಾಸೋದ್ಯಮ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಯನ್ನು ಉದ್ಘಾಟಿಸಿದರು. ಬಳ್ಳಾರಿ ಜೀನ್ಸ್‌ ಖರೀದಿಸಿ ಸ್ಥಳೀಯ ಉದ್ಯಮಕ್ಕೆ ಬೆಂಬಲ ಸೂಚಿಸಿದೆ. ಇದಾದ ಬಳಿಕ ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ. ಶರಣಪ್ರಕಾಶ ಪಾಟೀಲ್, ಡಾ. ಅಜಯ್ ಸಿಂಗ್, ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಖನಿಜ್ ಫಾತಿಮಾ, ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಲಬುರಗಿ ನಗರದ ಪಬ್ಲಿಕ್‌ ಗಾರ್ಡನ್‌ನಲ್ಲಿ ಆಯೋಜಿಸಿದ್ದ ಬೀದಿ ಉತ್ಸವಕ್ಕೆ(ಸ್ಟ್ರೀಟ್‌ ಫೆಸ್ಟಿವಲ್‌) ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಿದರು. ಬಳಿಕ ಪ್ರವಾಸೋದ್ಯಮ ಇಲಾಖೆಯ ವಸ್ತುಪ್ರದರ್ಶನ ಮಳಿಗೆಯನ್ನು ಉದ್ಘಾಟಿಸಿ, ಬಳ್ಳಾರಿ ಜೀನ್ಸ್‌ ಖರೀದಿಸುವ ಮೂಲಕ ಸ್ಥಳೀಯ ಉದ್ಯಮಕ್ಕೆ ಬೆಂಬಲ ಸೂಚಿಸಿದರು. ನಂತರ ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.

ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಕಟಿಬದ್ಧವಾಗಿದೆ. ಈ ಭಾಗಕ್ಕೆ ಸಂವಿಧಾನಬದ್ಧವಾಗಿ ದೊರೆತಿರುವ 371ಜೆ ಮೀಸಲಾತಿ ಹಾಗೂ ವಿಶೇಷ ಸೌಲಭ್ಯಗಳ ಸಮರ್ಪಕ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಯಾವುದೇ ಕಾರಣಕ್ಕೂ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ.

ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ

ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ, ಯುವಜನರಿಗೆ ಅವಕಾಶ, ಉದ್ಯೋಗ ಸೃಷ್ಟಿ ಹಾಗೂ ಈ ಭಾಗದ ಜನರ ಬದುಕಿನಲ್ಲಿ ಗುಣಾತ್ಮಕ ಬದಲಾವಣೆ ತರುವುದು ನಮ್ಮ ಗ್ಯಾರಂಟಿ ಸರ್ಕಾರದ ಆದ್ಯತೆಯಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯದ ಪೂಜ್ಯ ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಆಯೋಜಿಸಿದ್ದ 371ಜೆ ಕಾಯ್ದೆ ಅನುಷ್ಠಾನ ಕುರಿತ ಸರಣಿ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

2009ರಲ್ಲಿ ಇದೇ ಎನ್.ವಿ. ಮೈದಾನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ನಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಮೀಸಲಾತಿ ಕಲ್ಪಿಸುವುದಾಗಿ ಘೋಷಿಸಿದ್ದರು. ಅದರಂತೆ, ಡಾ. ಮಲ್ಲಿಕಾರ್ಜುನ ಖರ್ಗೆ ಅವರ ರಾಜಕೀಯ ಇಚ್ಛಾಶಕ್ತಿ ಮತ್ತು ನಿರಂತರ ಪ್ರಯತ್ನಗಳ ಫಲವಾಗಿ, ಸರ್ವಪಕ್ಷಗಳ ನಾಯಕರ ಮನವೊಲಿಸಿ, ಯಾವುದೇ ವಿರೋಧವಿಲ್ಲದೆ 371ಜೆ ಕಾಯ್ದೆಯನ್ನು ಸಂವಿಧಾನಬದ್ಧವಾಗಿ ಜಾರಿಗೆ ತರಲಾಯಿತು. ಕೊಟ್ಟ ಮಾತಿನಂತೆ ನಮ್ಮ ಪಕ್ಷ ನಡೆದುಕೊಂಡಿದೆ; ಮುಂದೆಯೂ ಇದೇ ಬದ್ಧತೆಯಿಂದ ನಡೆಯಲಿದೆ ಎಂದರು.

ಸುಮಾರು 1.20 ಲಕ್ಷ ಕುಟುಂಬಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ, ಜೊತೆಗೆ ಕಲ್ಯಾಣ ಕರ್ನಾಟಕದ ಮೂಲಸೌಕರ್ಯ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನಕ್ಕೆ ದಾರಿ ಮಾಡಿಕೊಟ್ಟಿರುವ 371ಜೆ ಕಾಯ್ದೆಯ ಜಾರಿಗೆ ಡಾ. ಮಲ್ಲಿಕಾರ್ಜುನ ಖರ್ಗೆ ಸಾಹೇಬರ ಕೊಡುಗೆ ಐತಿಹಾಸಿಕವಾದುದು. ಪಂಚ ಗ್ಯಾರಂಟಿಗಳಿಗೂ ಮುನ್ನವೇ ಕಲ್ಯಾಣ ಕರ್ನಾಟಕದ ಜನರಿಗೆ ಶಿಕ್ಷಣ ಮತ್ತು ಉದ್ಯೋಗದ ಅವಕಾಶಗಳ ಗ್ಯಾರಂಟಿಯನ್ನು ಕಲ್ಪಿಸುವಲ್ಲಿ ಅವರ ಪಾತ್ರವನ್ನು ಯಾರೂ ಮರೆಯಬಾರದು ಎಂದರು.

371ಜೆ ಕಾಯ್ದೆಯ ಆಶಯ ಮತ್ತು ಅದರ ಸೌಲಭ್ಯಗಳು ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ತಲುಪಬೇಕು. ಈ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಆಯೋಜಿಸಿರುವ ವಿಚಾರ ಸಂಕಿರಣಗಳ ಸರಣಿಯನ್ನು ಪ್ರದೇಶದ ಇತರೆ ಜಿಲ್ಲೆಗಳಿಗೂ ವಿಸ್ತರಿಸಿ, ಜನರಲ್ಲಿ ಮತ್ತಷ್ಟು ಅರಿವು ಮೂಡಿಸಬೇಕು ಎಂದು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗವು ತ್ವರಿತಗತಿಯಲ್ಲಿ ಆರ್ಥಿಕ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಎಕನಾಮಿಕ್ ಮಿಷನ್ ರೂಪಿಸಲಾಗುತ್ತಿದೆ. LEAP ಯೋಜನೆಯಡಿ ಕಲಬುರಗಿಯಲ್ಲಿಯೇ Growth Lab ಸ್ಥಾಪಿಸಲಾಗುತ್ತಿದೆ. ಇದರ ಜೊತೆಗೆ ಗ್ಲೋಬಲ್ ಕ್ಯಾಪಬಿಲಿಟಿ ಸೆಂಟರ್‌ಗಳು  ಹಾಗೂ ಐಟಿ ಪಾರ್ಕ್‌ಗಳ ಮೂಲಕ ಉದ್ಯೋಗ, ಹೂಡಿಕೆ ಮತ್ತು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular