HomeIndiaಗಣೇಶ ಮೂರ್ತಿ ವಿಸರ್ಜನೆ ವೇಳೆ ಘೋರ ದುರಂತ: ಕೆರೆಯಲ್ಲಿ ಮುಳುಗಿ 6 ವಿದ್ಯಾರ್ಥಿಗಳು ದುರ್ಮರಣ

ಗಣೇಶ ಮೂರ್ತಿ ವಿಸರ್ಜನೆ ವೇಳೆ ಘೋರ ದುರಂತ: ಕೆರೆಯಲ್ಲಿ ಮುಳುಗಿ 6 ವಿದ್ಯಾರ್ಥಿಗಳು ದುರ್ಮರಣ

ಹೈದರಾಬಾದ್: ಗಣೇಶ ಮೂರ್ತಿ ವಿಸರ್ಜನೆಯವೇಳೆ ದುರಂತ ಸಂಭವಿಸಿದ್ದು, 6 ವಿದ್ಯಾರ್ಥಿಗಳು ನೀರು ಪಾಲಾಗಿರುವ ದಾರುಣ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಸಂಗಾರೆಡ್ಡಿ ಜಿಲ್ಲೆಯ ಪೆದ್ದ ಕಂಜೆರ್ಲ ಗ್ರಾಮದ ನೇರೇಡು ಚೆರುವು ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ಆರು ಮಂದಿ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಸ್ಥೆಯೊಂದರ ವಸತಿನಿಲಯದಲ್ಲಿದ್ದ ವಿದ್ಯಾರ್ಥಿಗಳು ಗಣೇಶ ವಿಸರ್ಜನೆಗೆ ತೆರಳಿದ್ದಾಗ ಮೂರ್ತಿಯನ್ನು ನೀರಿನ ಆಳಕ್ಕೆ ಕೊಂಡೊಯ್ಯುವಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ನರಸಿಂಹ ರಾಜು, ಸುಮಂತ್, ಗಣೇಶ್, ಉದಯ ಕಿರಣ್, ಶ್ಯಾಮ್ ಕುಮಾರ್ ಮತ್ತು ಸಿದ್ಧಾರ್ಥ್ ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿಗಳು ಸಿರಿಶಾ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ನ ಅನಾಥಾಶ್ರಮದ ಮಕ್ಕಳು ಎಂದು ತಿಳಿದುಬಂದಿದೆ.

ಗಣೇಶ ವಿಸರ್ಜನೆಗಾಗಿ ತಮ್ಮ ಅನಾಥಾಶ್ರಮದಿಂದ ಮೂರು ಕಿಲೋಮೀಟರ್ ದೂರದಲ್ಲಿರುವ, ಗ್ರಾಮದ ಹೊರವಲಯದಲ್ಲಿರುವ ಕೆರೆಗೆ ಎಂಟು ಜನರ ಗುಂಪು ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ಸ್ಥಳೀಯರ ನೆರವಿನಿಂದ ಪೊಲೀಸರು ಮೃತದೇಹಗಳನ್ನು ಹೊರತೆಗೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಅವರು ಈ ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಮ್ಮ ಸಂತಾಪವನ್ನು ಸೂಚಿಸಿದ್ದಾರೆ.

ಬಾಧಿತ ಕುಟುಂಬಗಳಿಗೆ ಅಗತ್ಯ ನೆರವು ಒದಗಿಸುವಂತೆ ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು. ಅಲ್ಲದೆ, ಗಣೇಶ ವಿಸರ್ಜನಾ ಕಾರ್ಯಕ್ರಮಗಳ ಸಂದರ್ಭದಲ್ಲಿ ಎಲ್ಲೆಡೆ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದನ್ನು ಖಚಿತಪಡಿಸಿಕೊಳ್ಳುವಂತೆಯೂ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ ಆರೋಪ: ಭಟ್ಕಳ ಉದ್ವಿಗ್ನ

ಭಟ್ಕಳ: ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾಗಳ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪ ಕೇಳಿಬಂದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ.

ಬುಧವಾರ ರಾತ್ರಿ ಭಟ್ಕಳ ತಾಲೂಕಿನ ಗುಳ್ಮಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಭಟ್ಕಳದ ತಲಾಂದದಿಂದ ಸಾರ್ವಜನಿಕ ಗಣೇಶ ವಿಸರ್ಜನಾ ಮೆರವಣಿಗೆ ನಡೆಯುತ್ತಿತ್ತು. ಮೆರವಣಿಗೆ ಗುಳ್ಮಿ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಸಾಗುತ್ತಿದ್ದ ವೇಳೆ, ರಸ್ತೆಯ ಪಕ್ಕದಲ್ಲಿರುವ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ನೆಲಮಹಡಿಯಲ್ಲಿರುವ ತಾಜುಸುನ್ನಾ ಅರೇಬಿಕ್ ಮದರಸಾ ಮೇಲೆ ಅಪರಿಚಿತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯಲ್ಲಿ ಕಟ್ಟಡದ ಎರಡು ಕಿಟಕಿ ಗಾಜುಗಳು ಹಾನಿಗೊಳಗಾಗಿವೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಸ್ಥಳೀಯ ಅಬ್ದುಲ್ ಅಲಿಂ ಎಂಬವರು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಘಟನೆ ಬೆನ್ನಲ್ಲೇ ಸ್ಥಳೀಯ ಮುಸ್ಲಿಮರು ಪೊಲಿಸ್ ಠಾಣೆ ಮುಂದೆ ಜಮಾವಣೆಗೊಂಡು ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು. ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದರು.

ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೃತ್ಯ ಎಸಗಿದವರನ್ನು ಬಂಧಿಸುವುದಾಗಿ ತಿಳಿಸಿದ್ದಾರೆ. ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ಮಸೀದಿ ಮೇಲೆ ಕಲ್ಲು ತೂರಾಟ ಆರೋಪ ಬೆನ್ನಲ್ಲೆ ಭಟ್ಕಳದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಕಲ್ಲು ತೂರಾಟದ ಆರೋಪದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೆರವಣಿಗೆಯ ಸಂದರ್ಭದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳು ಹಾಗೂ ಇತರ ಮಾಹಿತಿಗಳನ್ನು ಕಲೆ ಹಾಕಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular