ಹುಬ್ಬಳ್ಳಿ: ಭಾರತವು ಅತ್ಯಂತ ಕಷ್ಟದ ಸ್ಥಿತಿಯಲ್ಲಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಚುಕ್ಕಾಣಿ ಹಿಡಿದು, ಇಂದು ಭಾರತವನ್ನು ಅತ್ಯಂತ ಪ್ರಬಲ ರಾಷ್ಟ್ರವನ್ನಾಗಿ ಹಾಗೂ ಜಗತ್ತಿನ 4ನೇ ಆರ್ಥಿಕ ಶಕ್ತಿಯನ್ನಾಗಿ ರೂಪಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬಣ್ಣಿಸಿದರು
ಹುಬ್ಬಳ್ಳಿಯಲ್ಲಿ ಮಾಧ್ಯಮ ಹೇಳಿಕೆ ನೀಡಿರುವ ಅವರು, ದೇಶದ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ 76ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ದೇಶಾದ್ಯಂತ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಇಂದು ದೇಶವ್ಯಾಪಿ 130 ಕೋಟಿ ಜನರ ಆಶೀರ್ವಾದ ಸಿಗುತ್ತಿದೆ. ದೇಶದಾದ್ಯಂತ ಎಲ್ಲ ದೇವಸ್ಥಾನಗಳಲ್ಲಿ ಪೂಜೆಗಳು ನಡೆಯುತ್ತಿವೆ ಮತ್ತು ಸಾಯಂಕಾಲ ದೀಪ ಬೆಳಗುವ ಕಾರ್ಯಕ್ರಮದೊಂದಿಗೆ ಒಂದು ತಿಂಗಳು ‘ಸೇವಾ ಸಂಕಲ್ಪ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ದೃಢ ಸಂಕಲ್ಪ ಮಾಡಲಾಗಿದೆ ಎಂದು ತಿಳಿಸಿದರು.
ಕಷ್ಟದ ಪರಿಸ್ಥಿತಿಯಿಂದ ಭಾರತವನ್ನು ಉತ್ತುಂಗಕ್ಕೆ
ಕಷ್ಟದ ಪರಿಸ್ಥಿತಿಯಿಂದ ಭಾರತವನ್ನು ಉತ್ತುಂಗಕ್ಕೆ:
ಭಾರತವು ಅತ್ಯಂತ ಕಷ್ಟದ ಸ್ಥಿತಿಯಲ್ಲಿದ್ದಾಗ ಆರ್ಥಿಕ, ಸಾಮಾಜಿಕವಾಗಿ ಎಲ್ಲ ರಂಗಗಳಲ್ಲೂ ಹಿಂದುಳಿದಿದ್ದಾಗ ಪ್ರಧಾನಿ ಮೋದಿ ಅವರು ದೇಶದ ಚುಕ್ಕಾಣಿ ಹಿಡಿದು, ಇಂದು ಭಾರತವನ್ನು ಅತ್ಯಂತ ಪ್ರಬಲ ರಾಷ್ಟ್ರವನ್ನಾಗಿ ಹಾಗೂ ಜಗತ್ತಿನ 4ನೇ ಆರ್ಥಿಕ ಶಕ್ತಿಯನ್ನಾಗಿ ರೂಪಿಸಿದ್ದಾರೆ ಎಂದು ಬಣ್ಣಿಸಿದರು. ಬಡತನದಿಂದ ಬಳಲುತ್ತಿದ್ದ ಸುಮಾರು 25 ಕೋಟಿ ಜನರನ್ನು ಬಡತನದಿಂದ ನಿರ್ಮೂಲನೆ ಮಾಡುವಲ್ಲಿ ಅವರು ಧೀರ ಸಾಹಸವನ್ನು ಮೆರೆದಿದ್ದಾರೆ ಎಂದರು.
‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’
’ಸಬ್ ಕಾ ಸಾಥ್, ಸಬ್ ಕಾ ವಿಕಾಸ್’:
‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’, ‘ಸಬ್ ಕಾ ಪ್ರಯಾಸ್’ ಮಂತ್ರದೊಂದಿಗೆ ‘ಏಕ್ ಭಾರತ್, ಶ್ರೇಷ್ಠ ಭಾರತ್’ ನಿರ್ಮಾಣಕ್ಕೆ ಪ್ರಧಾನಿಯವರು ಶ್ರಮಿಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ‘ಆತ್ಮನಿರ್ಭರ ಭಾರತ’ ಹಾಗೂ 2047ರ ವೇಳೆಗೆ ‘ವಿಕಸಿತ ಭಾರತ’ ನಿರ್ಮಾಣ ಮಾಡುವ ಅವರ ಸಂಕಲ್ಪವನ್ನು ಈಡೇರಿಸಲು ನಾವೆಲ್ಲರೂ ಕೈಜೋಡಿಸಬೇಕು ಎಂದು ಬಸವರಾಜ ಬೊಮ್ಮಾಯಿ ಕರೆ ನೀಡಿದರು.

