HomeKarnatakaರೇಷನ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್: ಇ-ಕೆವೈಸಿಗೆ ಅ.20ರವರೆಗೆ ಅವಕಾಶ, ದಿನಕ್ಕೆ 2 ಅವಧಿಯಲ್ಲಿ ನ್ಯಾಯಬೆಲೆ ಅಂಗಡಿ ಓಪನ್

ರೇಷನ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್: ಇ-ಕೆವೈಸಿಗೆ ಅ.20ರವರೆಗೆ ಅವಕಾಶ, ದಿನಕ್ಕೆ 2 ಅವಧಿಯಲ್ಲಿ ನ್ಯಾಯಬೆಲೆ ಅಂಗಡಿ ಓಪನ್

ಬೆಂಗಳೂರು: ರೇಷನ್ ಕಾರ್ಡ್‌ ಇ-ಕೆವೈಸಿ ಪೂರ್ಣಗೊಳಿಸಲು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡಿದ್ದ ಗಡುವನ್ನು ಅಕ್ಟೋಬರ್ 20ರವರೆಗೆ ವಿಸ್ತರಿಸಿದೆ. ಈ ಮೊದಲು ಸೆಪ್ಟೆಂಬರ್ 30 ಕೊನೆಯ ದಿನವಾಗಿತ್ತು.

ಸರ್ವರ್ ಸಮಸ್ಯೆಯಿಂದಾಗಿ ರಾಜ್ಯದ ಹಲವು ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಜನರು ಗಂಟೆಗಟ್ಟಲೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ಎದುರಾಗಿತ್ತು. ಗ್ರಾಮೀಣ ಭಾಗದಲ್ಲೂ ಸರ್ವರ್‌ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಪಡಿತರ ಚೀಟಿದಾರರಿಗೆ ತೊಂದರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಇಲಾಖೆ ಗಡುವು ವಿಸ್ತರಿಸಿದೆ.

ನ್ಯಾಯಬೆಲೆ ಅಂಗಡಿಗಳ ಸಮಯ ಬದಲು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಡಿತರ ಚೀಟಿದಾರರು ಮತ್ತು ದಿನಗೂಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಅಕ್ಟೋಬರ್ 1ರಿಂದ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿಯನ್ನೂ ಪರಿಷ್ಕರಿಸಲಾಗಿದೆ.

ಬೆಳಿಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ ಸಂಜೆ 4ರಿಂದ ರಾತ್ರಿ 8ರವರೆಗೆ ಈ ಎರಡು ಅವಧಿಯಲ್ಲಿ ನ್ಯಾಯಬೆಲೆ ಅಂಗಡಿಗಳು ತೆರೆದಿರಬೇಕು. ಪ್ರತಿ ದಿನ ಒಟ್ಟು 8 ಗಂಟೆಗಳ ಕಾಲ ಪಡಿತರ ವಿತರಣೆ ಮಾಡಬೇಕು ಎಂದು ಇಲಾಖೆ ಸೂಚಿಸಿದೆ.

ಇ-ಕೆವೈಸಿ ಪೂರ್ಣಗೊಳಿಸಲು ಸಚಿವರ ಮನವಿ

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಅವರು, ಸರ್ವರ್ ಸಮಸ್ಯೆಯಿಂದ ಜನರು ಆತಂಕಪಡಬೇಕಿಲ್ಲ ಎಂದು ತಿಳಿಸಿದ್ದಾರೆ. ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಕಾಲಾವಕಾಶ ನೀಡಲಾಗಿದ್ದು, ಈ ಅವಧಿಯಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯುವಂತೆ ಪಡಿತರ ಚೀಟಿದಾರರಿಗೆ ಮನವಿ ಮಾಡಿದ್ದಾರೆ.ಹೊಸ ಗಡುವಿನಿಂದ ಇ-ಕೆವೈಸಿ ಬಾಕಿ ಉಳಿಸಿಕೊಂಡಿರುವ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ ಹೆಚ್ಚುವರಿ ಸಮಯ ಸಿಕ್ಕಂತಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular