ಬೆಂಗಳೂರು: UGNEET-26: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆ ನಂತರ ಕೆಲವರು ಆ ಸೀಟುಗಳನ್ನು ರದ್ದುಪಡಿಸಿಕೊಳ್ಳಲು ಕೋರುತ್ತಿದ್ದು, ಅದಕ್ಕೆ ಕೆಲವು ಷರತ್ತುಗಳ ಆಧಾರದ ಮೇಲೆ ಅವಕಾಶ ನೀಡಲಾಗಿದೆ.
MCC ಹಾಗೂ ಇತರ ರಾಜ್ಯಗಳಲ್ಲಿ ಸೀಟು ಹಂಚಿಕೆಯಾದವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಕೌನ್ಸೆಲಿಂಗ್ ನಿಂದ ಹೊರ ಹೋಗಲು ಸೆ.20ರಂದು ಸಂಜೆ 5ರವರೆಗೆ ಅವಕಾಶ ನೀಡಲಾಗಿದೆ. ಇವರಿಗೆ ಯಾವುದೇ ದಂಡ ಇರುವುದಿಲ್ಲ.
ಆದರೆ, MCC ಕೌನ್ಸೆಲಿಂಗ್ ನಲ್ಲಿ ಸೀಟು ಹಂಚಿಕೆಯಾಗದಿರುವ ಅಭ್ಯರ್ಥಿಗಳು ಈ ಸುತ್ತಿನ ಸೀಟು ರದ್ದುಪಡಿಸಿಕೊಳ್ಳಬೇಕಿದ್ದರೆ ₹10 ಸಾವಿರ ದಂಡ ಕಟ್ಟಿ ಮಾಡಿಸಿಕೊಳ್ಳಬಹುದು. ಇಂತಹ ಅಭ್ಯರ್ಥಿಗಳಿಗೆ ಆಸಕ್ತಿ ಇದ್ದಲ್ಲಿ ಮೂರನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸುವುದಕ್ಕೂ ಅವಕಾಶ ನೀಡಲಾಗಿದೆ. ದಂಡ ಕಟ್ಟಬೇಕಾದವರು ಖುದ್ದು KEA ಕಚೇರಿಗೆ ಬಂದೇ ಮಾಡಿಸಿಕೊಳ್ಳಬೇಕು.
ಹೆಚ್ಚಿನ ವಿವರಗಳಿಗೆ ಈ ಕುರಿತ ಮಾಹಿತಿ ಪುಸ್ತಕವನ್ನು ನೋಡುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ದೀಕ್ಷಾ ಭೂಮಿ ಯಾತ್ರೆಗೆ ಆನ್ ಲೈನ್ ಮೂಲಕ ನೋಂದಣಿ
ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಡಾ.ಅಂಬೇಡ್ಕರ್ ರವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿ ಯಾತ್ರೆಗೆ ಅ.19 ರಿಂದ 22 ರವರೆಗೆ ವಿವಿಧ ಜಿಲ್ಲೆಗಳಿಂದ ಪ್ರಯಾಣಿಸಲು ಹಾಗೂ ಹಿಂದಿರುಗಿ ಬರುವ ಸಂಬಂಧ ಬಸ್ಸು ಹಾಗೂ ರೈಲಿನ ವ್ಯವಸ್ಥೆಯನ್ನು ಮಾಡಲಾಗಿದೆ.
ಯಾತ್ರಾರ್ಥಿಗಳು ಸೆ.19 ರಿಂದ ಅ.9 ರವರೆಗೆ ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ http://swd.karnataka.gov.in ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್ ತಿಳಿಸಿದ್ದಾರೆ.
ಮಕ್ಕಳ ಪಾಲನಾ ಸಂಸ್ಥೆಗಳ ನೋಂದಣಿ ಕಡ್ಡಾಯ
ದಾವಣಗೆರೆ: ಜಿಲ್ಲಾ ಮಟ್ಟದ ವ್ಯಾಪ್ತಿಯಲ್ಲಿ ಬರುವ ಮಕ್ಕಳ ಪಾಲನಾ ಸಂಸ್ಥೆಗಳನ್ನು ಕಡ್ಡಾಯವಾಗಿ ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ನೋಂದಣಿ ಮಾಡಿಸಬೇಕು.
ಮಕ್ಕಳ ಪಾಲನಾ ಸಂಸ್ಥೆಗಳು ಕಡ್ಡಾಯವಾಗಿ ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ನೋಂದಣಿಯಾಗಬೇಕಾಗಿರುತ್ತದೆ ಹಾಗೂ ನೋಂದಣಿಯಾಗಿರುವ ಸಂಸ್ಥೆಗಳು ಪ್ರತಿ 5 ವರ್ಷಕ್ಕೊಮ್ಮೆ ನವೀಕರಣಗೊಳ್ಳಬೇಕಾಗಿದ್ದು, ಬಾಲನ್ಯಾಯ ಕಾಯ್ದೆಯಡಿ ನೋಂದಣಿಯಾಗದೆ ಇರುವ ಸಂಸ್ಥೆಗಳನ್ನು ಕಡ್ಡಾಯವಾಗಿ ನೋಂದಣಿ ಮಾಡುವಂತೆ ತಪ್ಪಿದ್ದಲ್ಲಿ ಅನಧೀಕೃತವಾಗಿ ಮಕ್ಕಳ ಪಾಲನಾ ಸಂಸ್ಥೆಗಳನ್ನು ನಡೆಸುತ್ತಿದ್ದಲ್ಲಿ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ನೋಂದಣಿಯಾಗದೆ ಇರುವ ಮಕ್ಕಳ ಪಾಲನಾ ಸಂಸ್ಥೆಗಳ ಮಾಹಿತಿಯನ್ನು ಸೆಪ್ಟೆಂಬರ್ 25 ರೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಾಲಭವನ ಕಚೇರಿ ಜೆ.ಹೆಚ್ ಪಟೇಲ್ ಬಡಾವಣೆ, ಶಾಮನೂರು ಹತ್ತಿರ, ದಾವಣಗೆರೆ ಈ ಕಚೇರಿಗೆ ನೀಡಲು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ: 08192-222701 ಸಂಪರ್ಕಿಸುವಂತೆ ತಪ್ಪಿದ್ದಲ್ಲಿ ತಮ್ಮ ಸಂಸ್ಥೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದೆಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ತಿಳಿಸಿದ್ದಾರೆ.

