ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2026-27 ನೇ ಸಾಲಿನ ಜುಲೈ ಆವೃತ್ತಿಯ ಸ್ನಾತಕ ಕೋರ್ಸುಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್‌ಡಬ್ಲ್ಯೂ., ಬಿ.ಎಸ್ಸಿ., ಬಿ.ಲಿಬ್.ಐ.ಎಸ್ಸಿ. ಸೇರಿದಂತೆ ವಿವಿಧ ಸ್ನಾತಕ ಕೋರ್ಸುಗಳು ಹಾಗೂ ಎಂ.ಎ., ಎಂ.ಕಾಂ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್‌ಡಬ್ಲ್ಯೂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ ಹಾಗೂ ಸೇರಿದಂತೆ ಸ್ನಾತಕೋತ್ತರ ಕೋರ್ಸುಗಳಿಗೆ ಪ್ರವೇಶ ಪಡೆಯಬಹುದಾಗಿದೆ. ಪಿಜಿ ಡಿಪ್ಲೊಮಾ, ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸುಗಳ ಪ್ರವೇಶಾತಿ ಅವಧಿಯನ್ನು ಅಕ್ಟೋಬರ್ 13 ವರೆಗೆ ವಿಸ್ತರಿಸಲಾಗಿದೆ.
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಬೆಂಗಳೂರು ಪ್ರಾದೇಶಿಕ ನಿರ್ದೇಶಕರು , ಬೆಂಗಳೂರು ಪ್ರಾದೇಶಿಕ ಕೇಂದ್ರ -01 ,ಮೊದಲನೇ ಮಹಡಿ, ಕೆ.ಎಸ್. ಆರ್ ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು ಇಲ್ಲಿ ಭೇಟಿ ನೀಡಿ ಪ್ರವೇಶಾತಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ www.ksoumysuru.in ಅಥವಾ ಬೆಂಗಳೂರು ಪ್ರಾದೇಶಿಕ ಕೇಂದ್ರದ ದೂರವಾಣಿ ಸಂಖ್ಯೆ 080-26603664, 98805-26439, 90195-26439 ಅನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ
ಬೆಂಗಳೂರು : ಕರ್ನಾಟಕ ಆರ್ಯ ವೈಶ್ಯ ಸಮುದಾಯದ ಅಭಿವೃದ್ದಿ ನಿಗಮ (ನಿ) ವತಿಯಿಂದ 2026-27 ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಬ್ಯಾಂಕುಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, CET ಹಾಗೂ NET ಕೌನ್ಸಿಲಿಂಗ್ ಮುಗಿದ ನಂತರ ) ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ ಲೈನ್ : http://kacdc.karnataka.gov.in ಮೂಲಕ ಆಕ್ಟೋಬರ್ 15 ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕ ಕಚೇರಿ, ಬೆಂಗಳೂರು ಉತ್ತರ ಜಿಲ್ಲೆ, ನಂ.324/62. ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್ ರೋಡ್ , ಗಂಗಾನಗರ, ಬೆಂಗಳೂರು ಅಥವಾ ದೂರವಾಣಿ: 9448451111ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ಜಿಲ್ಲೆ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜವಾಹರ ನವೋದಯ ವಿದ್ಯಾಲಯದ 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬೆಂಗಳೂರು ನಗರ ಜಿಲ್ಲೆಯ ಬಾಗಲೂರಿನ ಪಿಎಂ ಶ್ರೀ ಜವಾಹರ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನಲ್ಲಿ ಖಾಲಿ ಇರುವ 9 ಮತ್ತು 11ನೇ ತರಗತಿ ಸ್ಥಾನಗಳಿಗೆ ಲ್ಯಾಟರಲ್ ಎಂಟ್ರಿ ಸೆಲೆಕ್ಷನ್ ಟೆಸ್ಟ್ (LEST-2027) ಮೂಲಕ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
2026-27ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಲ್ಲಿ 8ನೇ ತರಗತಿ ಹಾಗೂ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು.LEST-2027 ಪರೀಕ್ಷೆಯು 2027ರ ಏಪ್ರಿಲ್ 10ರಂದು ಶನಿವಾರ ನಡೆಯಲಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2026ರ ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.
ನವೋದಯ ವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಅಥವಾ 9ನೇ ತರಗತಿಗೆ cbseitms.nic.in/2026/nvsix ಹಾಗೂ 11ನೇ ತರಗತಿಗೆ cbseitms.nic.in/2026/nvsxi_11 ವೆಬ್‌ಸೈಟ್‌ಗಳಿಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ವಿದ್ಯಾಲಯದ 9844478098, 7624831601, 080-29900456 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

