HomeKarnatakaSSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪ್ರಿಪರೇಟರಿ ಮಾದರಿಯಲ್ಲೇ ರಾಜ್ಯಮಟ್ಟದ ಎಸ್ಎ-1 ಪರೀಕ್ಷೆ

SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪ್ರಿಪರೇಟರಿ ಮಾದರಿಯಲ್ಲೇ ರಾಜ್ಯಮಟ್ಟದ ಎಸ್ಎ-1 ಪರೀಕ್ಷೆ

–ಎಸ್ಎಸ್ಎಲ್ಸಿ(SSLC) ವಿದ್ಯಾರ್ಥಿಗಳಿಗೆ 2026- 27ನೇ ಸಾಲಿನ ರಾಜ್ಯಮಟ್ಟದ ಒಂದನೇ ಸಂಕಲನಾತ್ಮಕ ಮೌಲ್ಯಮಾಪನ ಎಸ್ಎ-1 ಸೆಪ್ಟೆಂಬರ್ 23ರಿಂದ 30ರವರೆಗೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ.

ಪೂರ್ವ ಸಿದ್ಧತಾ ಪರೀಕ್ಷೆ ಮಾದರಿಯಲ್ಲೇ ಎಸ್ಎ-1 ನಡೆಸಲು ಸೂಚನೆ ನೀಡಲಾಗಿದ್ದು, ಇದಕ್ಕೆ ಏಕರೂಪ ಪ್ರಶ್ನೆ ಪತ್ರಿಕೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದಲೇ ಸಿದ್ಧಪಡಿಸಿ ನೀಡಲು ತೀರ್ಮಾನಿಸಲಾಗಿದೆ.

ರಾಜ್ಯಮಟ್ಟದಲ್ಲಿ ಎಸ್ಎ-1

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2026-27 ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ 1 ನೇ ಸಂಕಲನಾತ್ಮಕ ಮೌಲ್ಯಮಾಪನವನ್ನು (SA-1) ಇದೇ ಸೆಪ್ಟೆಂಬರ್‌ 23 ರಿಂದ 30 ರವರೆಗೆ ನಡೆಸಲು ತೀರ್ಮಾನಿಸಿದ್ದೇವೆ.  ಪೂರ್ವ ಸಿದ್ಧತಾ ಪರೀಕ್ಷೆಯ (ಪ್ರಿಪರೇಟರಿ) ಮಾದರಿಯಲ್ಲಿಯೇ ಈ SA-1 ಅನ್ನು ನಡೆಸಲಾಗುತ್ತದೆ. ಪ್ರಶ್ನೆ ಪತ್ರಿಕೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಸಿದ್ಧಪಡಿಸಿ, ಆಯುಕ್ತರ ಕಚೇರಿಯ ಮೇಲ್ವಿಚಾರಣೆಯಲ್ಲಿ ವೇಳಾಪಟ್ಟಿಯಂತೆ ಆಯಾ ದಿನದ ಪ್ರಶ್ನೆ ಪತ್ರಿಕೆಯನ್ನು ಪ್ರೌಢ ಶಾಲೆಗಳ ಮುಖ್ಯಶಿಕ್ಷಕರಿಗೆ ಕಳುಹಿಸಿಕೊಡಲಾಗುತ್ತದೆ. ಅವರು ಅದನ್ನು ಮುದ್ರಿಸಿಕೊಂಡು SA-1 ಪರೀಕ್ಷೆ ನಡೆಸಲಿದ್ದಾರೆ.

ವಿದ್ಯಾರ್ಥಿಗಳ ಇಲ್ಲಿಯವರೆಗಿನ ಸಾಧನೆಯನ್ನು ತಿಳಿದುಕೊಳ್ಳಲು ಇದರಿಂದ ಅನುಕೂಲವಾಗಲಿದೆ. ಬಹಳ ವ್ಯವಸ್ಥಿತವಾಗಿ ಈ ಪರೀಕ್ಷೆ ನಡೆಸಲು ಕ್ರಮ ತೆಗೆದುಕೊಂಡಿದ್ದೇವೆ. ಇದರಿಂದ ಮುಖ್ಯ ಪರೀಕ್ಷೆಗೆ ಸಿದ್ಧತೆ ನಡೆಸಲು ವಿದ್ಯಾರ್ಥಿಗಳಿಗೆ ಸಹಾಯವಾಗಲಿದೆ. ಸಂಕಲನಾತ್ಮಕ ಮೌಲ್ಯಮಾಪನಕ್ಕೆ (SA-1) ಸಿದ್ಧತೆ ನಡೆಸುತ್ತಿರುವ ನನ್ನೆಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಕಾನೂನಾತ್ಮಕ ಕ್ರಮಗಳು

ಪರೀಕ್ಷಾ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪ್ರಶ್ನೆಪತ್ರಿಕೆಯ ಫೋಟೋ ತೆಗೆಯುವುದು ಮತ್ತು ಪ್ರಶ್ನೆ ಪತ್ರಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ / ವಾಟ್ಸಾಪ್ ಮುಖಾಂತರ ಹರಿಬಿಡುವುದು, ಪರೀಕ್ಷಾ ಕೇಂದ್ರಗಳಲ್ಲಿ ಚೀಟಿಗಳನ್ನು ಸರಬರಾಜು ಮಾಡುವುದು ಇನ್ನಿತರ ಯಾವುದೇ ಪರೀಕ್ಷಾ ಅವ್ಯವಹಾರದ ಅಪರಾಧ ಕೃತ್ಯಕ್ಕೆ ಸಂಬಂಧಿಸಿದವರ ವಿರುದ್ಧ ಬಿಎನ್‌ಸ್ (ಭಾರತೀಯ ನ್ಯಾಯ ಸಂಹಿತೆ) ಕಾಯ್ದೆ 2023, ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ಮತ್ತು ಮಂಡಳಿ ಕಾಯ್ದೆ 1966, Karnataka Act No.18 of 2017 The Karnataka Education (Amendment) Act, 2017-20 ಸರ್ಕಾರದ ಆದೇಶ ಇಡಿ 24 ಎಸ್ಎಲ್‌ಬಿ 2020 ದಿನಾಂಕ:18.03.2020 ರನ್ವಯ ಮೊಕ್ಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಹಾಗೂ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) 1957 ನಿಯಮದಂತೆ ಕ್ರಮ ಕೈಗೊಳ್ಳಲಾಗುವುದು.

ಅನುದಾನಿತ ಪ್ರೌಢಶಾಲೆಗಳು ಗೌಪ್ಯತೆಯನ್ನು ಕಾಯ್ದುಕೊಂಡಿರದಿದ್ದಲ್ಲಿ ಅಥವಾ ಪ್ರಶ್ನೆ ಪತ್ರಿಕೆಗಳನ್ನು ಬಹಿರಂಗಪಡಿಸಲು ಕಾರಣರಾದಲ್ಲಿ ಅಂತಹ ಶಾಲೆಯ ಮಾನ್ಯತೆಯನ್ನು ಹಿಂಪಡೆದು ಅನುದಾನ ಹಿಂಪಡೆಯಲು ನಿಯಮಾನುಸಾರ ಕ್ರಮ ವಹಿಸಲಾಗುವುದು. ಅನುದಾನ ರಹಿತ ಶಾಲೆಗಳು ಗೌಪ್ಯತೆಯನ್ನು ಕಾಯ್ದುಕೊಂಡಿರದಿದ್ದಲ್ಲಿ ಅಥವಾ ಪ್ರಶ್ನೆಪತ್ರಿಕೆಗಳನ್ನು ಬಹಿರಂಗಪಡಿಸಲು ಕಾರಣರಾದ ಶಾಲೆಯ ಮಾನ್ಯತೆಯನ್ನು ಶಾಶ್ವತವಾಗಿ ರದ್ದುಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular