HomeKarnatakaಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಆಯ್ಕೆ ಪಟ್ಟಿ ಪ್ರಕಟ; ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 24 ಕೊನೆಯ ದಿನ

ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಆಯ್ಕೆ ಪಟ್ಟಿ ಪ್ರಕಟ; ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 24 ಕೊನೆಯ ದಿನ

ಬಳ್ಳಾರಿ :   ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡುವ ಸಂಬಂಧ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.

 ಪರಿಶಿಷ್ಟ ಜಾತಿಯ 04 ಹಾಗೂ ಪರಿಶಿಷ್ಟ ಪಂಗಡದ 03 ಸೇರಿದಂತೆ ಒಟ್ಟು 07 ಗುರಿಗಳಿಗೆ ಸಂಬಂಧಿಸಿದಂತೆ ಅರ್ಹತಾ ಪಟ್ಟಿ, ಅನರ್ಹ ಪಟ್ಟಿ, ತಾತ್ಕಾಲಿಕ ಪಟ್ಟಿ ಹಾಗೂ ಕಾಯ್ದಿರಿಸಿದ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಈ ಎಲ್ಲಾ ಪಟ್ಟಿಗಳನ್ನು ಕಮಲಾಪುರದ ಲೋಟಸ್ ಮಹಲ್ ಸಮೀಪವಿರುವ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

 ಪ್ರಕಟಿತ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಅಥವಾ ಅರ್ಜಿದಾರರು ಯಾವುದೇ ಆಕ್ಷೇಪಣೆಗಳನ್ನು ಹೊಂದಿದ್ದಲ್ಲಿ, 24.09.2026 ರೊಳಗಾಗಿ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ. ನಿಗದಿತ ಅವಧಿ ಮೀರಿ ಬಂದ ಆಕ್ಷೇಪಣೆಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ವಿವರಗಳಿಗಾಗಿ ಕಮಲಾಪುರದ ಪ್ರವಾಸೋದ್ಯಮ ಇಲಾಖೆಯ ಕಚೇರಿಯನ್ನು ಖುದ್ದಾಗಿ ಭೇಟಿ ಮಾಡಬಹುದು ಅಥವಾ ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ 08394-295640 ಅನ್ನು ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

 ಸೆಪ್ಟೆಂಬರ್ 22 ರಂದು ಬಳ್ಳಾರಿಯಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ನೋಂದಣಿ ಕಡ್ಡಾಯ

 ಬಳ್ಳಾರಿ :   ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ 2026–27ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 22ರಂದು ಆಯೋಜಿಸಲಾಗಿದೆ.

 ಅಂದು ಬೆಳಿಗ್ಗೆ 10.30ಕ್ಕೆ ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣ ಮತ್ತು ಬಿಡಿಎಎ ಫುಟ್‌ಬಾಲ್ ಕ್ರೀಡಾ ಸಂಕೀರ್ಣ ಮೈದಾನದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

 ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು ಮತ್ತು ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಈ ಕ್ರೀಡಾಕೂಟದಲ್ಲಿ ಕೇವಲ ಬಳ್ಳಾರಿ ಜಿಲ್ಲೆಯ ಕ್ರೀಡಾಪಟುಗಳಿಗೆ ಮಾತ್ರ ಭಾಗವಹಿಸಲು ಅವಕಾಶವಿದ್ದು, ಬೇರೆ ಜಿಲ್ಲೆಯವರಿಗೆ ಅವಕಾಶವಿರುವುದಿಲ್ಲ.

 ಕ್ರೀಡಾಪಟುಗಳು ತಾವು ಪ್ರತಿನಿಧಿಸುವ ತಾಲೂಕು/ಜಿಲ್ಲೆಯ ಸ್ಥಳೀಯ ದೃಢೀಕರಣಕ್ಕಾಗಿ ಶಾಲಾ/ಕಾಲೇಜಿನ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ ಮುಂತಾದ ಅಧಿಕೃತ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ವಿದ್ಯಾಭ್ಯಾಸ ಅಥವಾ ಉದ್ಯೋಗದಲ್ಲಿರುವವರು ತಮ್ಮ ಕಾಲೇಜು ಅಥವಾ ಸಂಸ್ಥೆಯ ಅಧಿಕೃತ ಗುರುತಿನ ಚೀಟಿಯೊಂದಿಗೆ ಭಾಗವಹಿಸಬಹುದು.

 ರಕ್ಷಣಾ ಪಡೆ ಹಾಗೂ ಅರೆ ರಕ್ಷಣಾ ಪಡೆಯ ಸಿಬ್ಬಂದಿಗಳಿಗೆ ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿಲ್ಲ. ಒಬ್ಬ ಕ್ರೀಡಾಪಟು ಕೇವಲ ಒಂದು ಗುಂಪು ಕ್ರೀಡೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಕ್ರೀಡೆಗಳು:

ಸ್ಪರ್ಧಾ ಕ್ರೀಡೆಗಳು: ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಖೋ-ಖೋ, ಫುಟ್‌ಬಾಲ್ (ಪುರುಷರಿಗೆ ಮಾತ್ರ), ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್, ಬ್ಯಾಡ್ಮಿಂಟನ್, ಬಾಸ್ಕೆಟ್‌ಬಾಲ್, ಹಾಕಿ, ಹ್ಯಾಂಡ್‌ಬಾಲ್, ಟೇಬಲ್ ಟೆನ್ನಿಸ್, ಕುಸ್ತಿ ಮತ್ತು ಯೋಗ.

ನೇರ ಆಯ್ಕೆ ಕ್ರೀಡೆಗಳು: ಟೆನ್ನಿಸ್, ನೆಟ್‌ಬಾಲ್, ಈಜು, ವುಶೂ, ಟೆಕ್ವಾಂಡೋ, ಜುಡೋ ಮತ್ತು ಕರಾಟೆ.

ಆನ್‌ಲೈನ್ ನೋಂದಣಿ ಕಡ್ಡಾಯ:

ಪ್ರಸಕ್ತ ಸಾಲಿನಿಂದ ದಸರಾ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳು ‘Dasara CM Cup 2026’ ಪೋರ್ಟಲ್/ಮೊಬೈಲ್ ಆಪ್ (https://dasaracmcup.in/) ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಪ್ರತಿಯನ್ನು ಸಲ್ಲಿಸಿದಲ್ಲಿ ಮಾತ್ರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ.

ಜಿಲ್ಲಾ ಮಟ್ಟದಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗುವುದು ಹಾಗೂ ಪ್ರಯಾಣ ಭತ್ಯೆಯನ್ನು ಸರ್ಕಾರಿ ಬಸ್ ದರಗಳ ಅನ್ವಯ ‘ಕೆ2′ ತಂತ್ರಾAಶದ ಮೂಲಕ ನೇರವಾಗಿ ಕ್ರೀಡಾಪಟುಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಎಂ. ಜಾಕೀರ್-9036335986, ಮಹಮ್ಮದ್ ಮಸೂದ್-9886688858, ರತಿಕಾಂತ್ (ಕಚೇರಿ ಸಿಬ್ಬಂದಿ)- 8971238689 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular