ಬೆಂಗಳೂರು: MDS-26: ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ನ ಎರಡನೇ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ.
ಮೊದಲ ಸುತ್ತಿನಲ್ಲಿ ಚಾಯ್ಸ್-3 ಆಯ್ಕೆ ಮಾಡಿರುವ ಹಾಗೂ ಇತರ ಚಾಯ್ಸ್ ದಾಖಲಿಸಿರುವ ಅಭ್ಯರ್ಥಿಗಳು ಎರಡನೇ ಸುತ್ತಿಗೆ ಅರ್ಹತೆ ಪಡೆಯಲು ಸೆ.19ರಿಂದ 22ರವರೆಗೆ 1,00,000(SC/ST ಅಭ್ಯರ್ಥಿಗಳು 50,000) ಕಾಷನ್ ಡೆಪಾಸಿಟ್ ಪಾವತಿಸಬೇಕು. ಅದರ ಬಳಿಕವೇ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು.
ಮೊದಲ ಸುತ್ತಿನಲ್ಲಿ ಚಾಯ್ಸ್ -2 ಆಯ್ಕೆ ಮಾಡಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಕಾಷನ್ ಡೆಪಾಸಿಟ್ ಪಾವತಿಸುವ ಅಗತ್ಯ ಇರುವುದಿಲ್ಲ.
ಸೀಟು ಹಂಚಿಕೆಯಾದಲ್ಲಿ ಅಭ್ಯರ್ಥಿಯು ಪಾವತಿಸಿರುವ ಕಾಷನ್ ಡೆಪಾಸಿಟ್ ಅನ್ನು ಶುಲ್ಕಕ್ಕೆ ಹೊಂದಾಣಿಕೆ ಮಾಡಿಕೊಳ್ಳಲಾಗುವುದು.
ಸೆ.19ರಂದು ಬೆಳಿಗ್ಗೆ 11ಕ್ಕೆ ಸೀಟ್ ಮ್ಯಾಟ್ರಿಕ್ಸ್ ಪ್ರಕಟ.
ಸೆ.19ರಿಂದ 23ರವರೆಗೆ ಆಪ್ಷನ್ಸ್ ಬದಲಿಸಲು/ಅಳಿಸಲು/ಮಾರ್ಪಡಿಸಲು ಅವಕಾಶ ನೀಡಲಾಗಿದೆ.
ಸೆ.23ರಂದು ಸಂಜೆ 4ಕ್ಕೆ ತಾತ್ಕಾಲಿಕ ಹಾಗೂ ಸೆ.24ರಂದು ಬೆಳಿಗ್ಗೆ 10ಕ್ಕೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೆ.24ರಿಂದ 28ರವರೆಗೆ ಚಲನ್ ಡೌನ್ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಬೇಕು. ಹಾಗೆಯೇ ಇದೇ ಅವಧಿಯಲ್ಲಿ ಮೂಲ ದಾಖಲೆಗಳನ್ನು ಕೆಇಎ ಕಚೇರಿಯಲ್ಲಿ ಖುದ್ದು ಸಲ್ಲಿಸಬೇಕು. ಬಳಿಕ ಅಭ್ಯರ್ಥಿಗಳು ಸೆ. 29ರವರೆಗೆ ಪ್ರವೇಶ ಆದೇಶವನ್ನು ಡೌನ್ಲೋಡ್ ಮಾಡಿಕೊಂಡು ಕಾಲೇಜುಗಳಲ್ಲಿ ಹಾಜರಾಗಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರೆಗೆ ಅರ್ಜಿ ಆಹ್ವಾನ
ಶಿವಮೊಗ್ಗ: ಮಹಾರಾಷ್ಟ್ರದ ನಾಗಪುರದಲ್ಲಿರುವ ಐತಿಹಾಸಿಕ ದೀಕ್ಷಾ ಭೂಮಿಗೆ ಭೇಟಿ ನೀಡಲು ಇಚ್ಛಿಸುವ ಶಿವಮೊಗ್ಗ ಜಿಲ್ಲೆಯ ಪರಿಶಿಷ್ಟ ಜಾತಿಯ(SC) ಅಭ್ಯರ್ಥಿಗಳಿಂದ ಸಮಾಜ ಕಲ್ಯಾಣ ಇಲಾಖೆಯು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
2026-27 ನೇ ಸಾಲಿನ ಯೋಜನೆಯಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳು ಅಕ್ಟೋಬರ್ 21 ರಂದು ನಾಗಪುರದಲ್ಲಿ ನಡೆಯಲಿರುವ ‘ಧಮ್ಮ ಚಕ್ರ ಪ್ರವರ್ತನ ದಿನ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಈ ಯಾತ್ರೆಯನ್ನು ಆಯೋಜಿಸಲಾಗಿದೆ. ಈ ಪ್ರವಾಸವು ಅಕ್ಟೋಬರ್ 19 ರಿಂದ 22 ರವರೆಗೆ ನಡೆಯಲಿದೆ.
ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯ ಖಾಯಂ ನಿವಾಸಿಗಳಾಗಿದ್ದು, ಪರಿಶಿಷ್ಟ ಜಾತಿಗೆ ಸೇರಿರಬೇಕು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದ್ದು, ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ swdservices.karnataka.gov.in ಮೂಲಕವೇ ಅರ್ಜಿ ಸಲ್ಲಿಸಬೇಕು.
ಆಸಕ್ತರು ಹೆಚ್ಚಿನ ವಿವರಗಳಿಗೆ ಮೊಬೈಲ್ ಸಂಖ್ಯೆ: 9480843044 ಅಥವಾ ಕಚೇರಿ ದೂರವಾಣಿ ಸಂಖ್ಯೆ: 08182-249241 ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ ಅವರು ತಿಳಿಸಿದ್ದಾರೆ.
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ: ಜಿಲ್ಲಾ ಸರ್ಕಾರಿ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಎ.ಆರ್.ಟಿ. ವಿಭಾಗದಲ್ಲಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಒಂದು ವೈದ್ಯಾಧಿಕಾರಿ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಂಬಿಬಿಎಸ್ ವಿದ್ಯಾರ್ಹತೆ ಹಾಗೂ ಅನುಭವ ಹೊಂದಿರುವ, 70 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ರೂ.72,000 ಗೌರವಧನ ನೀಡಲಾಗುತ್ತದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಬಯೋಡೇಟಾ, ವಿದ್ಯಾರ್ಹತೆ ಮತ್ತು ಅನುಭವ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳೊಂದಿಗೆ ದಿನಾಂಕ 23-09-2026 ರ ಸಂಜೆ 4:00 ಗಂಟೆಯೊಳಗೆ ‘ಜಿಲ್ಲಾ ಸರ್ಜನ್ನರು, ಮೆಗ್ಗಾನ್ ಬೋಧನಾ ಆಸ್ಪತ್ರೆ, ಶಿವಮೊಗ್ಗ’ ಇವರ ಕೊಠಡಿಗೆ ನೇರವಾಗಿ ಸಲ್ಲಿಸಬೇಕೆಂದು ಜಿಲ್ಲಾ ಸರ್ಜನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

