ಬೆಂಗಳೂರು: ಪ್ರತಿ ಲೀಟರ್ ಹಾಲಿನ ದರವನ್ನು 8 ರೂಪಾಯಿ ಮತ್ತು ಪ್ರೋತ್ಸಾಧನವನ್ನು 8 ರೂಪಾಯಿಯಷ್ಟು ಹೆಚ್ಚಳ ಮಾಡಬೇಕೆಂದು ಸರ್ಕಾರಕ್ಕೆ ಹಾಲು ಒಕ್ಕೂಟಗಳು ಆಗ್ರಹಿಸಿವೆ. ಬರಗಾಲದಿಂದ ಪಶು ಆಹಾರ ಸಾಗಾಣೆ ವೆಚ್ಚ, ಕಚ್ಚಾ ವಸ್ತು ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಹಾಲಿನ ದರ ಮತ್ತು ಪ್ರೋತ್ಸಾಹಧನವನ್ನು ತಲಾ 8 ರೂ. ಹೆಚ್ಚಳ ಮಾಡುವಂತೆ ಒತ್ತಾಯಿಸಲಾಗಿದೆ.
ರಾಜ್ಯದಲ್ಲಿ ತೀವ್ರ ಬರಗಾಲದಿಂದ ಪಶು ಆಹಾರ, ಸಾಗಣೆ ವೆಚ್ಚ ಹಾಗೂ ಕಚ್ಚಾವಸ್ತುಗಳ ಬೆಲೆ ಏರಿಕೆಯಾಗಿದೆ. ಆದ್ದರಿಂದ ರೈತರನ್ನು ಹಾಗೂ ಹಾಲಿನ ಒಕ್ಕೂಟಗಳನ್ನು ಉಳಿಸಲು ಹಾಲಿನ ಮಾರಾಟ ಬೆಲೆಯನ್ನು ಪ್ರತಿ ಲೀಟರ್ ಗೆ ₹8 ಮತ್ತು ಸರ್ಕಾರ ನೀಡುವ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್‌ಗೆ ₹8 ರಂತೆ ಹೆಚ್ಚಳ ಮಾಡಬೇಕು ಎಂದು ರಾಜ್ಯದ ವಿವಿಧ ಹಾಲು ಒಕ್ಕೂಟಗಳು ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಶುಕ್ರವಾರ ಈ ಕುರಿತು ಬಮೂಲ್ ಮಾಜಿ ಅಧ್ಯಕ್ಷ ಪಿ.ನಾಗರಾಜ್, ಮಂಡ್ಯ ಹಾಲು ಒಕ್ಕೂಟದ ಅಧ್ಯಕ್ಷ ಬೋರೇಗೌಡ, ಶಿವಮೊಗ್ಗ ಒಕ್ಕೂಟದ ನಿರ್ದೇಶಕ ಸಿ.ವೀರಭದ್ರಬಾಬು, ಚಾಮರಾಜನಗರ ಹಾಲು ಒಕ್ಕೂಟದ ಎಂ.ನಂಜುಂಡಸ್ವಾಮಿ ಸೇರಿ ಇತರರು ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ.
ಕಳೆದ ಎಂಟು ತಿಂಗಳಿನಿಂದ ರೈತರು ಸೇರಿ ಹಾಲು ಒಕ್ಕೂಟಗಳ ನಿರ್ದೇಶಕರು ಹಾಲಿನ ದರ ಮತ್ತು ಪ್ರೋತ್ಸಾಹಧನ ಏರಿಕೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಆದರೆ ಈವರೆಗೂ ರಾಜ್ಯ ಸರ್ಕಾರ ಸ್ಪಂದಿಸಿಲ್ಲ. ಇನ್ನು ಮೂರು ದಿನಗಳಲ್ಲಿ ದರ ಏರಿಕೆ ಮಾಡದಿದ್ದರೆ ‘ವಿಧಾನಸೌಧ ಚಲೋ’ ಪ್ರತಿಭಟನೆ ಹಮ್ಮಿ ಕೊಳ್ಳುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ.
ಬಮೂಲ್ ಮಾಜಿ ಅಧ್ಯಕ್ಷ ಮತ್ತು ನಿರ್ದೇಶಕ ಪಿ.ನಾಗರಾಜ್ ಮಾತನಾಡಿ, ಈ ಬಾರಿ ಮುಂಗಾರು ಮಳೆ ಕೊರತೆ ತೀವ್ರ ಬರಗಾಲದಿಂದಾಗಿ ಮೇವಿನ ಕೊರತೆ ಎದುರಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಮತ್ತು ಸಂಗ್ರಹಣೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಈ ಹಿಂದೆ ದಿನಕ್ಕೆ1.11 ಕೋಟಿ ಲೀಟರ್ ಇದ್ದಹಾಲಿನ ಸಂಗ್ರಹಣೆಯು ಈಗ 1.05 ಕೋಟಿ ಲೀಟರ್ ಗೆ ಇಳಿಕೆಯಾಗಿದೆ ಎಂದು ಹೇಳಿದ್ದಾರೆ.
ಮಂಡ್ಯ ಹಾಲು ಒಕ್ಕೂಟದ ಅಧ್ಯಕ್ಷ ಬೋರೇಗೌಡ, ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಡೀಸೆಲ್, ಪೆಟ್ರೋಲ್, ಗ್ಯಾಸ್, ಎಲ್‌ಪಿಜಿ ಹಾಗೂ ಪಶು ಆಹಾರಗಳ ಬೆಲೆ ಶೇ.30ರಿಂದ 40ರಷ್ಟು ಏರಿಕೆಯಾಗಿದೆ. ಖಾಸಗಿ ಡೈರಿಗಳು ಹಾಗೂ ನೀರಿನ ಬಾಟಲಿಗಳಿಗೆ ಹೋಲಿಸಿದರೆ ನಂದಿನ ಹಾಲಿನ ಬೆಲೆ ದೇಶದಲ್ಲೇ ಅತ್ಯಂತ ಕಡಿಮೆ. ರೈತರಿಗೆ ಒಂದು ಲೀಟರ್ ಹಾಲು ಉತ್ಪಾದಿಸಲು ತಗಲುವ ವೆಚ್ಚಕ್ಕೆ ತಕ್ಕಂತೆ ಸೂಕ್ತ ಪ್ರತಿಫಲ ಸಿಗದೆ ಅವರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಸರ್ಕಾರ ತಕ್ಷಣವೇ ಸಂಪುಟ ಸಭೆ ಕರೆದು ಹಾಲಿನ ಬೆಲೆ ಏರಿಕೆ ಹಾಗೂ ಪ್ರೋತ್ಸಾಹಧನ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಬೇಕು. ಮುಂಬರುವ 3 ದಿನಗಳಲ್ಲಿ ಸರ್ಕಾರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳದಿದ್ದರೆ, ರಾಜ್ಯದ ಎಲ್ಲಾ 16 ಒಕ್ಕೂಟಗಳ ಪದಾಧಿಕಾರಿಗಳು ಹಾಗೂ ರೈತರು ವಿಧಾನಸೌಧ ಚಲೋ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಪ್ರತಿ ಲೀಟರ್ ಹಾಲಿನ ಮಾರಾಟ ದರವನ್ನು 8 ರೂಪಾಯಿ ಹೆಚ್ಚಿಸಬೇಕು ಹಾಗೂ ರೈತರ ಪ್ರೋತ್ಸಾಹ ಧನವನ್ನು 5 ರೂ.ನಿಂದ 8 ರೂ.ಗೆ ಏರಿಸಬೇಕೆಂದು ರಾಜ್ಯದ ಹಾಲು ಉತ್ಪಾದಕರ ಸಂಘಗಳು ಮತ್ತು ಒಕ್ಕೂಟಗಳು ಸರ್ಕಾರವನ್ನು ಆಗ್ರಹಿಸಿವೆ.
ಈ ಕುರಿತ ಪ್ರಮುಖ ವಿವರಗಳು ಇಲ್ಲಿವೆ:
ಪ್ರಮುಖ ಬೇಡಿಕೆಗಳು
ದರ ಹೆಚ್ಚಳ: ಮಾರುಕಟ್ಟೆಯಲ್ಲಿ ಪ್ರತಿ ಲೀಟರ್ ಹಾಲಿನ ದರವನ್ನು 8 ರೂ. ಹೆಚ್ಚಿಸುವುದು.
ಪ್ರೋತ್ಸಾಹ ಧನ: ರೈತರಿಗೆ ನೀಡುವ ಸರ್ಕಾರಿ ಪ್ರೋತ್ಸಾಹ ಧನವನ್ನು 5 ರೂ.ನಿಂದ 8 ರೂ.ಗೆ ಏರಿಸುವುದು.
ಸರ್ಕಾರಕ್ಕೆ ಗಡುವು: ಈ ಬಗ್ಗೆ ತಕ್ಷಣ ತುರ್ತು ಸಂಪುಟ ಸಭೆ ಕರೆದು ನಿರ್ಧಾರ ಕೈಗೊಳ್ಳಲು 3 ದಿನಗಳ ಅಂತಿಮ ಗಡುವು ನೀಡಲಾಗಿದೆ.
ಬೇಡಿಕೆ ಈಡೇರದಿದ್ದರೆ ‘ವಿಧಾನಸೌಧ ಚಲೋ’ ಎಚ್ಚರಿಕೆ ನೀಡಲಾಗಿದೆ.
ದರ ಹೆಚ್ಚಳಕ್ಕೆ ಕಾರಣಗಳು
ಉತ್ಪಾದನಾ ವೆಚ್ಚ ಏರಿಕೆ: ಜಾನುವಾರುಗಳ ಹಿಟ್ಟು, ಕಚ್ಚಾ ವಸ್ತುಗಳು ಹಾಗೂ ಒಣಮೇಯಿ ವೆಚ್ಚ ಶೇ. 25ಕ್ಕೂ ಹೆಚ್ಚು ಹೆಚ್ಚಾಗಿದೆ.
ರೈತರ ಸಂಕಷ್ಟ: ಅತಿವೃಷ್ಠಿ/ಅನಾವೃಷ್ಠಿ ಹಾಗೂ ನಿರ್ವಹಣಾ ವೆಚ್ಚದಿಂದಾಗಿ ಹೈನುಗಾರಿಕೆ ನಡೆಸುವುದು ಕಷ್ಟವಾಗಿದೆ. ರೈತರಿಗೆ ಸಿಗುತ್ತಿರುವ ಬೆಲೆ ತೀರಾ ಕಡಿಮೆಯಿರುವುದರಿಂದ ಈ ಒತ್ತಾಯ ಮಾಡಲಾಗಿದೆ.

