HomeKarnatakaಚಿಕಿತ್ಸೆಗೆ ಬಂದ ಮಹಿಳೆ ಮೇಲೆ ವೈದ್ಯನಿಂದ ಅತ್ಯಾಚಾರಕ್ಕೆ ಯತ್ನ

ಚಿಕಿತ್ಸೆಗೆ ಬಂದ ಮಹಿಳೆ ಮೇಲೆ ವೈದ್ಯನಿಂದ ಅತ್ಯಾಚಾರಕ್ಕೆ ಯತ್ನ

ಕೊಪ್ಪಳ: ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬಂದಿದ್ದ ಮಹಿಳೆ ಮೇಲೆ ವೈದ್ಯನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದ ಘಟನೆ ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ರ್ಯಾವಣಕಿ ಗ್ರಾಮದಲ್ಲಿ ನಡೆದಿದೆ.

ಖಾಸಗಿ ಕ್ಲಿನಿಕ್ ಗೆ ಬಂದ ಮಹಿಳೆಯ ಮೇಲೆ ಆರ್.ಎಂ.ಪಿ. ವೈದ್ಯ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ರ್ಯಾವಣಕಿ ಗ್ರಾಮದ ಆರ್‌.ಎಂ.ಪಿ. ವೈದ್ಯ ಪ್ರಭುರಾಜ್ ಶೆಟ್ಟರ್ ಎಂಬಾತನ ವಿರುದ್ಧ ಆರೋಪ ಕೇಳಿ ಬಂದಿದೆ. ಗುರುವಾರ ಚಿಕಿತ್ಸೆಗೆ ಬಂದಿದ್ದ ಗ್ರಾಮದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಘಟನೆ ಬಗ್ಗೆ ವೈದ್ಯನ ವಿರುದ್ಧ ಕುಕನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಹಿಂದುಳಿದ ವರ್ಗಗಳ ಕಾನೂನು ಪದವಿಧರರಿಗೆ ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಪ್ಪಳ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕೊಪ್ಪಳ ಜಿಲ್ಲೆಯ ಕಾನೂನು ಪದವಿ ಪಡೆದಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಜನಾಂಗದ ಅಭ್ಯರ್ಥಿಗಳಿಗೆ 4 ವರ್ಷಗಳ ಅವಧಿಗೆ ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಸ್ವಿಕರಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತಿರ್ಣನಾಗಿರಬೇಕು ಹಾಗೂ ಬಾರ್ ಕೌನ್ಸಿಲ್ ನಲ್ಲಿ ಹೆಸರು ನೋಂದಾಯಿಸಿರಬೇಕು. ಪ್ರವರ್ಗ-1 ಕ್ಕೆ ಗರಿಷ್ಠ 40 ವರ್ಷಗಳು ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಪ್ರವರ್ಗ-1 ಅಭ್ಯರ್ಥಿಗಳ ವಾರ್ಷಿಕ ಆದಾಯ ರೂ. 3.50 ಲಕ್ಷ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ವಾರ್ಷಿಕ ಆದಾಯ ರೂ. 2.50 ಲಕ್ಷ ಮೀರಿರಬಾರದು.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಅಕ್ಟೋಬರ್ 17 ರೊಳಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಸಂಕೀರ್ಣ ಕಟ್ಟಡ ಕೊಪ್ಪಳ ಇವರಿಂದ ಪಡೆದು ಸಂಬAಧಿಸಿದ ದಾಖಲೆಗಳ ಪ್ರತಿಯನ್ನು ದೃಡಿಕರಿಸಿ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ: ಸೆ. 29 ಕೊನೆಯ ದಿನ

ಕೊಪ್ಪಳ: 2026-27ನೇ ಸಾಲಿನ ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಾಗಿ ಪರಿಶಿಷ್ಟ ಪಂಗಡದ(ಎಸ್ಟಿ) ಅರ್ಹ ಸಾಧಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರತಿ ವರ್ಷ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಪರಿಶಿಷ್ಟ ಪಂಗಡದ ಸಮುದಾಯದ ಏಳಿಗೆಗಾಗಿ ಶ್ರಮಿಸಿದ ಹಾಗೂ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಪರಿಶಿಷ್ಟ ಪಂಗಡದ ಸಾಧಕರಿಗೆ ಈ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 29 ಕೊನೆಯ ದಿನಾಂಕವಾಗಿದ್ದು, ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಯ ಕೊಪ್ಪಳ ಮತ್ತು ಯಲಬುರ್ಗಾದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಅಥವಾ ಗಂಗಾವತಿ ಮತ್ತು ಕುಷ್ಟಗಿಯ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಗೆ ಕಚೇರಿ ವೇಳೆಯಲ್ಲಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಅಥವಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular