HomeKarnatakaBREAKING : ರಾಜ್ಯದಲ್ಲಿ ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್; ಸೆಲ್ಫೀ, ರೀಲ್ಸ್‌ಗೆ ಬ್ರೇಕ್!

BREAKING : ರಾಜ್ಯದಲ್ಲಿ ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್; ಸೆಲ್ಫೀ, ರೀಲ್ಸ್‌ಗೆ ಬ್ರೇಕ್!

ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.ಕಾಲೇಜು ವಿದ್ಯಾರ್ಥಿಗಳ ಕಾಲೇಜು ಪ್ರವಾಸಕ್ಕೆ ಕಾಲೇಜು ಶಿಕ್ಷಣ ಇಲಾಖೆ ಹೊಸ ನಿಯಮಗಳನ್ನು ಜಾರಿಗೆ ತಂದಿದೆ.

ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರವಾಸದ ವೇಳೆ ಸೆಲ್ಫೀ, ರೀಲ್ಸ್‌ ಚಿತ್ರೀಕರಣಕ್ಕೆ ನಿರ್ಬಂಧ, ಪ್ರವಾಸದ ಅವಧಿಯನ್ನು ಗರಿಷ್ಠ 5 ದಿನಗಳಿಗೆ ಮಿತಿ ಸೇರಿದಂತೆ ಹಲವು ನಿಯಮಗಳನ್ನು ಜಾರಿಗೊಳಿಸಲಾಗಿದೆ. ಪ್ರವಾಸ ಆಯೋಜಿಸುವ ಮೊದಲು ಕಾಲೇಜುಗಳು ಇಲಾಖೆಯಿಂದ ಪೂರ್ವಾನುಮತಿ ಪಡೆಯುವುದು ಹಾಗೂ ಪೋಷಕರ ಒಪ್ಪಿಗೆ ಪಡೆಯುವುದು ಕಡ್ಡಾಯವಾಗಿದೆ.

ಪ್ರವಾಸದ ವೇಳೆ ಸೆಲ್ಫೀ, ರೀಲ್ಸ್‌ ಚಿತ್ರೀಕರಣಕ್ಕೆ ನಿರ್ಬಂಧ ಸೇರಿ ಪ್ರವಾಸದ ಅವಧಿಯನ್ನು ಗರಿಷ್ಠ 5 ದಿನಗಳಿಗೆ ಮಿತಿ ಸೇರಿದಂತೆ ಹಲವು ನಿಯಮಗಳನ್ನು ಜಾರಿಗೊಳಿಸಲಾಗಿದೆ. ಪ್ರವಾಸ ಆಯೋಜಿಸುವ ಮೊದಲು ಕಾಲೇಜುಗಳು ಇಲಾಖೆಯಿಂದ ಪೂರ್ವಾನುಮತಿ ಪಡೆಯುವುದು ಹಾಗೂ ಪೋಷಕರ ಒಪ್ಪಿಗೆ ಪಡೆಯುವುದು ಕಡ್ಡಾಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಕಾಲೇಜು ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪ್ರವಾಸದ ವೇಳೆ ಸೆಲ್ಫೀ ಹಾಗೂ ರೀಲ್ಸ್‌ ಚಿತ್ರೀಕರಣಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ರವಾಸದ ಅವಧಿಯನ್ನು ಗರಿಷ್ಠ 5 ದಿನಗಳಿಗೆ ಮಿತಿಗೊಳಿಸಲಾಗಿದೆ.

ಪ್ರವಾಸಕ್ಕೆ ತೆರಳುವ ಮುನ್ನವೇ ವಿದ್ಯಾರ್ಥಿಗಳಿಗೆ ಸೆಲ್ಫೀ, ರೀಲ್ಸ್‌ ಮಾಡದಂತೆ ಪ್ರಾಂಶುಪಾಲರು ಸ್ಪಷ್ಟವಾಗಿ ತಿಳಿಸಬೇಕು. ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಅಧ್ಯಾಪಕರು ನಿಗಾ ವಹಿಸಬೇಕು ಎಂದು ಇಲಾಖೆ ಸೂಚಿಸಿದೆ.

ಶೈಕ್ಷಣಿಕ ಪ್ರವಾಸಕ್ಕೆ ಅನುಮತಿ ಕಡ್ಡಾಯ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಶೈಕ್ಷಣಿಕ ಪ್ರವಾಸ ಆಯೋಜಿಸುವ ಮೊದಲು ಕಾಲೇಜು ಶಿಕ್ಷಣ ಇಲಾಖೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಪ್ರವಾಸಕ್ಕೆ ತೆರಳುವ ವಿದ್ಯಾರ್ಥಿಗಳಿಂದ ಮುಚ್ಚಳಿಕೆ ಪತ್ರ ಪಡೆಯಬೇಕು ಹಾಗೂ ಪೋಷಕರ ಒಪ್ಪಿಗೆಯನ್ನೂ ಪಡೆದು ಇಲಾಖೆಗೆ ಸಲ್ಲಿಸಬೇಕು.

ಅನುಮತಿ ನೀಡಿರುವ ಪ್ರವಾಸದ ಸ್ಥಳಗಳನ್ನು ಹೊರತುಪಡಿಸಿ ಬೇರೆ ಸ್ಥಳಗಳಿಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುವಂತಿಲ್ಲ. ಪ್ರವಾಸದ ವೇಳಾಪಟ್ಟಿಯನ್ನು ಅನುಮೋದಿಸಿದ ಬಳಿಕ ಬದಲಾವಣೆ ಮಾಡುವಂತಿಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಮಳೆಗಾಲದಲ್ಲಿ ಪ್ರವಾಸಕ್ಕೆ ಬ್ರೇಕ್

ಮಳೆಗಾಲದಲ್ಲಿ ಶೈಕ್ಷಣಿಕ ಪ್ರವಾಸ ಆಯೋಜಿಸದಂತೆ ಇಲಾಖೆ ಸೂಚಿಸಿದೆ. ನದಿ, ಸಮುದ್ರ, ಜಲಪಾತ, ದಟ್ಟ ಅರಣ್ಯ ಹಾಗೂ ಅಪಾಯಕಾರಿ ಗುಡ್ಡ ಪ್ರದೇಶಗಳಂತಹ ಸ್ಥಳಗಳಿಗೆ ಪ್ರವಾಸ ಕೈಗೊಂಡರೆ ಮುಂಚಿತವಾಗಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಟ್ರೆಕ್ಕಿಂಗ್ ಅಥವಾ ಈಜು ಚಟುವಟಿಕೆಗಳನ್ನು ಪ್ರವಾಸದಲ್ಲಿ ಸೇರಿಸಿದ್ದರೆ, ಪ್ರಮಾಣೀಕೃತ ತಜ್ಞರ ಉಪಸ್ಥಿತಿ ಮತ್ತು ಸ್ಥಳೀಯ ಸುರಕ್ಷತಾ ಅನುಮತಿ ಕಡ್ಡಾಯವಾಗಿರುತ್ತದೆ.

ಪ್ರವಾಸದಲ್ಲಿ ಎಷ್ಟು ಅಧ್ಯಾಪಕರು ಇರಬೇಕು?

ಪ್ರತಿ ಶೈಕ್ಷಣಿಕ ಪ್ರವಾಸದಲ್ಲೂ ಕನಿಷ್ಠ ಒಬ್ಬ ಕಾಯಂ ಉಪನ್ಯಾಸಕ ಕಡ್ಡಾಯವಾಗಿ ಇರಬೇಕು. ಕೇವಲ ಅತಿಥಿ ಉಪನ್ಯಾಸಕರ ಮೇಲ್ವಿಚಾರಣೆಯಲ್ಲಿ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವಂತಿಲ್ಲ.

ಪ್ರವಾಸಕ್ಕೆ ತೆರಳುವ ಬೋಧಕ ಸಿಬ್ಬಂದಿಯ ಸಂಖ್ಯೆ ನಾಲ್ಕನ್ನು ಮೀರಬಾರದು. ಇವರಲ್ಲಿ ಕನಿಷ್ಠ ಇಬ್ಬರು ಮಹಿಳಾ ಅಧ್ಯಾಪಕಿಯರು ಇರಬೇಕು ಹಾಗೂ ಒಬ್ಬ ಗ್ರೂಪ್‌-ಡಿ ಸಿಬ್ಬಂದಿಯೂ ತಂಡದಲ್ಲಿರಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು

ಶೈಕ್ಷಣಿಕ ಪ್ರವಾಸದ ಬಗ್ಗೆ ಸಂಬಂಧಪಟ್ಟ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು ಕಡ್ಡಾಯ. ಪ್ರವಾಸದ ಸ್ಥಳಗಳು ಮತ್ತು ವೇಳಾಪಟ್ಟಿಯ ವಿವರಗಳನ್ನು ಪೊಲೀಸರಿಗೆ ನೀಡಬೇಕು ಎಂದು ಇಲಾಖೆ ಸೂಚಿಸಿದೆ.

ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡುವ ಉದ್ದೇಶದಿಂದ ಈ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದ್ದು, ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ.

ಒಟ್ಟಾರೆಯಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸವು ಸುರಕ್ಷಿತವಾಗಿ ಹಾಗೂ ಶಿಸ್ತಿನಿಂದ ನಡೆಯುವಂತೆ ಮಾಡಲು ಈ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ. ಪ್ರವಾಸದ ವೇಳೆ ಸೆಲ್ಫೀ, ರೀಲ್ಸ್‌ ಸೇರಿದಂತೆ ಅಪಾಯಕಾರಿ ಚಟುವಟಿಕೆಗಳಿಗೆ ಕಡಿವಾಣ ಹಾಕುವುದರ ಜೊತೆಗೆ, ಶಿಕ್ಷಕರ ಮೇಲ್ವಿಚಾರಣೆ ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಕಡ್ಡಾಯಗೊಳಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಂಡು ಶೈಕ್ಷಣಿಕ ಉದ್ದೇಶ ಈಡೇರಿಸುವಂತೆ ಕಾಲೇಜುಗಳು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯವಾಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular