HomeKarnatakaಕಾನೂನು ಉಲ್ಲಂಘಿಸಿರುವವರು ಎಷ್ಟೇ ದೊಡ್ಡವರಾಗಿದ್ದರೂ ಯಾವುದೇ ಮುಲಾಜಿಲ್ಲದೇ ಕ್ರಮ: ಸಣ್ಣ ಮೀನುಗಾರರು ಬೋಟ್ ...

ಕಾನೂನು ಉಲ್ಲಂಘಿಸಿರುವವರು ಎಷ್ಟೇ ದೊಡ್ಡವರಾಗಿದ್ದರೂ ಯಾವುದೇ ಮುಲಾಜಿಲ್ಲದೇ ಕ್ರಮ: ಸಣ್ಣ ಮೀನುಗಾರರು ಬೋಟ್ ನಿಲ್ಲಿಸಲು ಎದುರಿಸುತ್ತಿರುವ ಸಮಸ್ಯೆ ಶೀಘ್ರ ಪರಿಹಾರ: ಸಿಎಂ ಡಿ.ಕೆ.ಶಿವಕುಮಾರ್

ಮಂಗಳೂರು: ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸಿ ಹೊಸ ಅಧ್ಯಾಯ ಬರೆದಿರುವ ಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ ಬೆಳ್ಳಂ ಬೆಳಗ್ಗೆ ಮಂಗಳೂರು ಬಂದರಿಗೆ ದಿಢೀರ್ ಭೇಟಿ ನೀಡಿ ಮೀನುಗಾರರ ಮನದ ಮಾತುಗಳಿಗೆ ಕಿವಿಗೊಟ್ಟರು.

ಬೆಳಗ್ಗೆ 6 ಗಂಟೆಗೆ ಬಂದರಿಗೆ ಭೇಟಿ ನೀಡಿದ ಸಿಎಂ, ಬಂದರು ಪ್ರದೇಶವನ್ನು ಕಣ್ಣಾರೆ ಕಂಡರು. ಬೋಟ್ ನಲ್ಲಿ ಪ್ರಯಾಣ ಮಾಡಿ ಬಂದರು ಅಭಿವೃದ್ಧಿಗೆ ಈಗಾಗಲೇ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳು ಹಾಗೂ ಮುಂದೆ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಅಧಿಕಾರಿಗಳು ಹಾಗೂ ಮೀನುಗಾರರ ಮುಖಂಡರಿಂದ ಮಾಹಿತಿ ಪಡೆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು ಭೇಟಿ ನೀಡಿರುವ ಸಂದರ್ಭದಲ್ಲಿ ಮಂಗಳೂರಿನ ಬಂದರು ಚಟವಟಿಕೆಗಳು ಸ್ಥಬ್ದವಾಗಿವೆ. ಇದಕ್ಕೆ ಕಾರಣ ಏನು ಎಂಬುದನ್ನು ಅರಿಯಲು ವರದಿ ನೀಡುವಂತೆ ಡಿಸಿ ಹಾಗೂ ಆಯುಕ್ತರಿಗೆ ನಿರ್ದೇಶನ ನೀಡಿದ್ದೇನೆ. ಇದಕ್ಕೆ ಅಧಿಕಾರಿಗಳು ಕಾರಣರಾಗಿದ್ದಾರೆ ಅವರನ್ನು ಅಮಾನತು ಮಾಡುತ್ತೇನೆ. ಅಕ್ರಮಗಳನ್ನು ಮುಚ್ಚಿಡುವ ದೃಷ್ಟಿಯಿಂದ ಈ ಕೆಲಸ ಮಾಡಿದ್ದರೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ. ನನಗೆ ಯಾವ ಭದ್ರತೆ ಅಗತ್ಯವಿಲ್ಲ. ನಾನು ಮೀನುಗಾರರು, ವರ್ತಕರು ಹಾಗೂ ದೋಣಿಯನ್ನೇ ನಂಬಿರುವ ಮೀನುಗಾರ ಸಮುದಾಯದ ವಾಸ್ತವ ಸ್ಥಿತಿಗತಿಯನ್ನು ಅರಿಯಲು ಬಂದಿದ್ದೇನೆ’ ಎಂದರು.

ದೇಶದ ವಿವಿಧ ಮೂಲೆಗಳಿಂದ ಇಲ್ಲಿಗೆ ಬಂದು ವ್ಯಾಪಾರ ವಹಿವಾಟ ನಡೆಸುತ್ತಾರೆ. ಅವರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಮೂಲ ಸೌಕರ್ಯಗಳು ದೊರೆಯಬೇಕು, ವಾಹನ ಸಂಚಾರ ಸುಗಮವಾಗಿರಬೇಕು. ಇಲ್ಲಿ ರಸ್ತೆಯನ್ನು ನಿರ್ಬಂದಿಸಿರುವುದು, ಅಕ್ರಮವಾಗಿ ಕಾಂಪೌಂಡ್ ಹಾಕಿರುವುದೆಲ್ಲವೂ ನನ್ನ ಗಮನಕ್ಕೆ ಬಂದಿದೆ.

ಕಾನೂನು ಉಲ್ಲಂಘಿಸಿರುವವರು ಎಷ್ಟೇ ದೊಡ್ಡವರಾಗಿದ್ದರೂ, ಪ್ರಭಾವಶಾಲಿಗಳಾದರು ಯಾವುದೇ ಮುಲಾಜಿಲ್ಲದೇ ಕ್ರಮ ಜರುಗಿಸಬೇಕು. ಖಾಸಗಿ ಆಸ್ತಿಯಾಗಿದ್ದರೆ ದಾಖಲೆಗಳನ್ನು ನೋಡಿ ಸರ್ಕಾರದ ವಶಕ್ಕೆ ಪಡೆಯುತ್ತೇವೆ. ಅಭಿವೃದ್ಧಿಯನ್ನು ಮಾಡುತ್ತೇವೆ” ಎಂದು ಖಡಕ್ ಎಚ್ಚರಿಕೆ ನೀಡಿದರು.

ಸಣ್ಣ ಮೀನುಗಾರರು ಬೋಟ್ ಗಳನ್ನು ನಿಲ್ಲಿಸುವ ವಿಚಾರವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಬಗ್ಗೆ ತೀರ್ಮಾ ಮಾಡುತ್ತೇವೆ” ಎಂದು ಹೇಳಿದರು.

ಮೀನುಗಾರರದ್ದು ದೊಡ್ಡ ಸಮುದಾಯ. ಎಲ್ಲಾ ವರ್ಗದ ಜನ ಸೌಹಾರ್ದತೆಯಿಂದ ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಆರ್ಥಿಕ ಶಕ್ತಿ ಕೇಂದ್ರ. ಈ ಸಮುದಾಯಕ್ಕೆ ಪ್ರೋತ್ಸಾಹ ಕೊಡಬೇಕು. ಹೀಗಾಗಿ, ಇಲ್ಲಿ ಪ್ರತ್ಯೇಕ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಲಾಗುವುದು. ನಾವು ಈಗ ಇರುವ 40-50 ಸೀಟುಗಳನ್ನು 200ಕ್ಕೆ ಏರಿಕೆ ಮಾಡಲಾಗುವುದು, ವಿದ್ಯಾಭ್ಯಾಸ, ಸಮುದ್ರ ಮೆಟ್ರೋ, ನೀಲಿ ಆರ್ಥಿಕತೆಗೆ ಒತ್ತು ನೀಡುವ ಕುರಿತು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದರು.

ಈಗಾಗಲೇ 32 ಸಾವಿರ ಕೋಟಿ ಮೊತ್ತವನ್ನು ಅಭಿವೃದ್ಧಿಗಾಗಿ ಘೋಷಣೆ ಮಾಡಿದ್ದೇವೆ. ಇದರಲ್ಲಿ 16 ಸಾವಿರ ಕೋಟಿ ಇಲ್ಲಿನ ಗ್ರಾಮೀಣ ಭಾಗದ ರಸ್ತೆ, ನೀರಿನಂಥ ಮೂಲ ಸೌಕರ್ಯಕ್ಕೆ ನೀಡಲಾಗಿದೆ. ಮಂಗಳೂರು, ಕಾರವಾರಗಳಲ್ಲಿ ಎಲ್ಲೆಲ್ಲಿ ವಹಿವಾಟು ನಡೆಯುತ್ತದೆ ಎಂಬುದರ ಬಗ್ಗೆ ಸಮಗ್ರ ವರದಿ ಪಡೆದು, ಸಮುದ್ರ ಪಕ್ಕದ ಮೀನುಗಾರ ಕುಟುಂಬಕ್ಕೆ ಅಗತ್ಯ ತಾಂತ್ರಿಕ ನೆರವನ್ನು ನೀಡಲು ಯೋಜನೆ ರೂಪಿಸುತ್ತೇವೆ. ಕೆಲವೊಂದು ಸಮಸ್ಯೆಗಳನ್ನು ಮೀನುಗಾರರು ನೇರವಾಗಿ ಹಂಚಿಕೊಳ್ಳಲು ಸಾಧ್ಯವಾಗದೇ ಇರಬಹುದು. ಚಿಂತೆ ಇಲ್ಲ, ಗುಪ್ತ ವರದಿ ತರಿಸಿಕೊಳ್ಳುತ್ತೇನೆ. ಮಾಫಿಯಾಗಳು ಇದೆಯಾ. ತೊಂದರೆ ಆಗುತ್ತಿದೆಯಾ ಎನ್ನುವುದನ್ನು ಗಮನಿಸುತ್ತೇನೆ. ಒಟ್ಟಾರೆ, ನ್ಯಾಯ ಬದ್ಧವಾಗಿ ವ್ಯಾಪಾರ ವಹಿವಾಟು ನಡೆಯಬೇಕು. ಮೀನುಗಾರರ ಸಮುದಾಯ ಅಭಿವೃದ್ಧಿಯಾಗಬೇಕು ಎನ್ನುವುದು ನಮ್ಮ ಗುರಿ” ಎಂದರು.

ಅಳಿವೆಬಾಗಿಲಲ್ಲಿ 35 ವರ್ಷದಿಂದ ಹೂಳು ಎತ್ತಿಲ್ಲ ಅಪಾಯಕಾರಿಯಾಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಅಲ್ಲಿ ದೋಣಿಯೊಂದು ನಿಂತಿದೆ. ಅದು ಇದೇ ಕಾರಣಕ್ಕೆ ಎನ್ನುವುದು ಸಚಿವ ಖಾದರ್ ಅವರು ವಿವರಿಸಿದ್ದಾರೆ.

ಹೂಳನ್ನು ಸಮುದ್ರಕ್ಕೆ ಬಿಡಬೇಕು ಎಂದು ಕೆಲವರು ಸಲಹೆ ನೀಡಿದ್ದಾರೆ. ಇನ್ನೂ ಕೆಲವರು ಆ ಪ್ರದೇಶವನ್ನು ಮತ್ತಷ್ಟು ವಿಸ್ತಾರ ಮಾಡಿ ಎಂದೂ ಹೇಳಿದ್ದಾರೆ. ಕೇಂದ್ರದ ತಾಂತ್ರಿಕ ಸಮಿತಿ ಇದಕ್ಕೆ ಸಲಹೆ ಕೊಡಬೇಕಂತೆ. ಈ ಬಗ್ಗೆ ಸೂಕ್ತ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳುತ್ತೇವೆ.

ಹೂಳು ತೆಗೆಯುವ ಪ್ರಕ್ರಿಯೆಗೆ ಲೀಸ್ ಪಡೆಯಬೇಕೆ ಅಥವಾ ಯಂತ್ರ, ದೋಣಿಗಳನ್ನು ಖರೀದಿಸಿ ಹೂಳು ತೆಗೆಸಬೇಕೆ ಎನ್ನುವುದನ್ನು ತೀರ್ಮಾನಿಸುತ್ತೇನೆ. ಈ ಹಿಂದೆ ಸರ್ಕಾರದಿಂದಲೇ ಹೂಳು ತೆಗೆಸುವ ವ್ಯವಸ್ಥೆ ಇತ್ತು. ಈಗಿಲ್ಲ ಎಂದರು.

ಕರಾವಾಳಿ ರಾಜ್ಯದ ಸಂಪತ್ತು ಮಾತ್ರವಲ್ಲ ರಾಷ್ಟ್ರದ ಸಂಪತ್ತು ಕೂಡ ಆಗಿದೆ. ಇದನ್ನು ನಾವು ಕಾಪಾಡಬೇಕು. ಮಂಗಳೂರಿಗಾಗಿ ಅಭಿವೃದ್ಧಿಯ ಪಥ ಚಿಂತನೆ ಮಾಡುತ್ತಿದ್ದೇವೆ. ನಮ್ಮ ಸರ್ಕಾರ ಕರವಾಳಿ ಭಾಗದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಿದೆ. ಇದಕ್ಕಾ 3-4 ಹೊಸ ನೀತಿಗಳನ್ನು ಜಾರಿ ಮಾಡಲು ಚಿಂತನೆ ನಡೆಸಿದ್ದೇವೆ. ಕರಾವಳಿಯಲ್ಲಿ ಹೂಡಿಕೆದಾರರಿಗೆ ಪ್ರೋತ್ಸಾಹ ಕೊಡಬೇಕು. ಹೊಸದಾಗಿ ಹೂಡಿಕೆ ಮಾಡುವವರಿಗೆ ಮೂಲಸೌಕರ್ಯಗಳನ್ನು ಒದಗಿಸಬೇಕು. ಅವರು ಬಂದಾಗ ಇಳಿದುಕೊಳ್ಳುವುದಕ್ಕೆ ಒಳ್ಳೆಯ ಹೋಟೆಲ್ ಗಳ ನಿರ್ಮಾಣ ಮಾಡಬೇಕು. ಇರುವ ಜಾಗವನ್ನು ಗುರಿತಿಸಿ ಕಾನೂನಿನ ಚೌಕಟ್ಟಿನಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಾಣಕ್ಕೆ ಅವಕಾಶ ಮಾಡಿಕೊಡುತ್ತೇವೆ ಎಂದು ವಿವರಿಸಿದರು.

ವಿರೋಧ ಪಕ್ಷ ನಾಯಕ ಅಶೋಕ್ ಅವರಿಗೆ ಮೀನು ತಿನ್ನುವ ಆಸೆಯಾಗಿದೆ. ಅವರಿಗೆ ಮೀನು ಬೇಕಂತೆ. ಮಂಗಳೂರಿನಿಂದಲೇ ಮೀನನ್ನು ಕಳುಹಿಸಿ, ಅವರ ಆಸೆ ತೀರಿಸೋಣ ಎಂದು ತಿರುಗೇಟು ನೀಡಿದರು.

ನಾವು ಕರಾವಳಿ ಅಭಿವೃದ್ಧಿಯ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ. ವಿರೋಧ ಪಕ್ಷಗಳು ನಮ್ಮ ಅಭಿವೃದ್ಧಿಯ ಪ್ರವಾಸದ ಬಗ್ಗೆ ಕುಹಕಿ ಮಾತುಗಳನ್ನು ಆಡುತ್ತಿವೆ. ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿಗಳು ಮೀನು ತಿನ್ನೋಕೆ ಮಂಗಳೂರಿಗೆ ಹೋಗಿದ್ದಾರೆ ಎಂದಿದ್ದಾರೆ. ನಾನು ಮೀನು ತಿನ್ನುವುದನ್ನು ಬಿಟ್ಟು ಬಹಳ ವರ್ಷಗಳಾಯಿತು. ಇವರಿಗೆ ಅಭಿವೃದ್ಧಿ ಬೇಕಿಲ್ಲ ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular