HomeIndiaನಕಲಿ ದಾಖಲೆ ಸೃಷ್ಟಿಸಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ: ಬಾಂಗ್ಲಾ ಪ್ರಜೆ ಅರೆಸ್ಟ್

ನಕಲಿ ದಾಖಲೆ ಸೃಷ್ಟಿಸಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ: ಬಾಂಗ್ಲಾ ಪ್ರಜೆ ಅರೆಸ್ಟ್

ತಿರುವನಂತಪುರಂ: ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡುತ್ತಿದ್ದ ಬಾಂಗ್ಲಾ ಪ್ರಜೆಯನ್ನು ಪೊಲೀಸರು ಬಂಧಿಸಿಸಿರುವ ಘಟನೆ ಕೇರಳದಲ್ಲಿ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಪ್ಲೋಬ್ ಸೊರೆನ್ (32) ಬಂಧಿತ ಬಾಂಗ್ಲಾ ಪ್ರಜೆ. ಈತ ಭಾರತೀಯ ಪ್ರಜೆ ಎಂಬಂತೆ ನಕಲಿ ದಾಖಲೆಗಳನ್ನು ನೀಡಿ ನೌಕಾ ಅಕಾಡೆಮಿಯ ಲಾಂಡ್ರಿ ವಿಭಾಗದಲ್ಲಿ ಗುತ್ತಿಗೆ ನೌಕರನಾಗಿ ಕೆಲಸಕ್ಕೆ ಸೇರಿದ್ದ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬಿಪ್ಲೋಬ್ ಸೊರೆನ್ ಯಾವುದೇ ಮಾನ್ಯ ದಾಖಲೆಗಳಿಲ್ಲದೆ ಭಾರತದಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ.

ಕೆಲ ದಿನಗಳಿಂದ ಆತನ ನಡವಳಿಕೆಯ ಬಗ್ಗೆ ಅನುಮಾನಗೊಂಡ ನೌಕಾಪಡೆಯ ಅಧಿಕಾರಿಗಳು ಆತನ ಮೇಲೆ ನಿಗಾ ಇರಿಸಿದ್ದರು. ನಂತರ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆತನ ಮೊಬೈಲ್‌ ಸಿಕ್ಕ ಮಾಹಿತಿಗಳ ಪ್ರಕಾರ ಆತ ಬಾಂಗ್ಲಾ ಪ್ರಜೆ ಎಂದು ಗೊತ್ತಾಗಿದೆ.

ನೌಕಾಪಡೆಯ ಅಧಿಕಾರಿಗಳು ವಿಚಾರಣೆ ನಡೆಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ವಿದೇಶಿ ಪ್ರಜೆಯೊಬ್ಬ ತನ್ನ ರಾಷ್ಟ್ರೀಯತೆಯ ಗುರುತು ಮುಚ್ಚಿಟ್ಟು, ಸೂಕ್ಷ್ಮ ಪ್ರದೇಶದಲ್ಲಿ ಸುಮಾರು ಒಂದು ವರ್ಷದವರೆಗೆ ಗುತ್ತಿಗೆ ನೌಕರನಾಗಿ ಕೆಲಸ ಮಾಡಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ಗುಪ್ತಚರ ಸಂಸ್ಥೆಗಳಿಂದ ಬಂದ ಮಾಹಿತಿಯ ಆಧಾರದ ಮೇಲೆ ಬಿಪ್ಲೋಬ್ ಸುರೇನ್ ನನ್ನು ಬಂಧಿಸಲಾಗಿದೆ. ಬಾಂಗ್ಲಾದೇಶಿ ಪ್ರಜೆಯು ನಕಲಿ ದಾಖಲೆಗಳನ್ನು ಹೇಗೆ ಪಡೆದ? ಸೂಕ್ಷ್ಮ ರಕ್ಷಣಾ ಸಂಸ್ಥೆಗೆ ಪ್ರವೇಶ ಹೇಗೆ ಗಿಟ್ಟಿಸಿಕೊಂಡ? ಆತನಿಗೆ ಯಾರು ಸಹಾಯ ಮಾಡಿದ್ದರು ಎಂಬ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಕೇರಳದ ಕ೦ಣ್ಣೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಬಾಂಗ್ಲಾದೇಶಿ ಪ್ರಜೆಗಳ ವಿರುದ್ಧ ಪೊಲೀಸರು ಕ್ರಮಕೈಗೊಳ್ಳುತ್ತಿರುವಾಗಲೇ ನೌಕಾಪಡೆಯಲ್ಲಿ ಸುರೇನ್ ಕೆಲಸ ಮಾಡುತ್ತಿದ್ದ ಬಗ್ಗೆ ವಿಚಾರ ಬೆಳಕಿಗೆ ಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular