ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಪ್ರೇರಣೆಯಿಂದ ಯುವ ಜನತೆ ಹೆಚ್ಚು ಹೆಚ್ಚು ಪ್ರಮಾಣದಲ್ಲಿ ರಾಷ್ಟ್ರಸೇವೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಉದ್ಯೋಗ ಮೇಳದ (ರೋಜ್ಗಾರ್ ಮೇಳ) ಇಪ್ಪತ್ತನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ದೂರದೃಷ್ಟಿಯ ಸಂಕಲ್ಪ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಗೆ ಹೆಚ್ಚೆಚ್ಚು ಅವಕಾಶ ಕಲ್ಪಿಸುವ ಉದ್ದೇಶದಿಂದ ಆರಂಭಿಸಲಾದ ರೋಜ್ಗಾರ್ ಬೆಳದಿಂಗ ಯುವಕರಿಗೆ ಹೆಚ್ಚು ಉದ್ಯೋಗ ಅವಕಾಶಗಳು ಸಿಗುತ್ತಿದೆ ಎಂದು ಹೇಳಿದರು.
ಪ್ರಧಾನಿಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸೇರಿ ಇಡೀ ದೇಶಾದ್ಯಂತ 51,000ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ನೀಡಲಾಯಿತು. ನಾನೂ ಸಹ ಅನೇಕ ಯುವಜನರಿಗೆ ನೇಮಕಾತಿ ಆದೇಶ ಪತ್ರಗಳನ್ನು ಕೊಟ್ಟು ಶುಭ ಹಾರೈಸಿದೆ ಎಂದು ಸಚಿವರು; ಮೇಕ್ ಇನ್ ಇಂಡಿಯಾ, ಆತ್ಮನಿರ್ಭರ ಭಾರತ ಮುಂತಾದ ಕಾರ್ಯಕ್ರಮಗಳ ಮೂಲಕ ವಿಕಸಿತ ಗುರಿ ಸಾಧಿಸುವ ನಿಟ್ಟಿನಲ್ಲಿ ಈ ನೇಮಕಾತಿ ಪರ್ವವೂ ಬಹುದೊಡ್ಡ ಕಾಣಿಕೆ ನೀಡುತ್ತಿದೆ. ಎಂದು ಹೇಳಿದರು.
ಈ ಉದ್ಯೋಗ ಮೇಳವು ದೇಶದ 45 ವಿವಿಧ ಕೇಂದ್ರಗಳಲ್ಲಿ ಏಕಕಾಲದಲ್ಲಿ ನಡೆದು, ಆಯ್ಕೆಯಾದ ಅಭ್ಯರ್ಥಿಗಳು ಕೇಂದ್ರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೇರ್ಪಡೆಗೊಳ್ಳಲಿದ್ದಾರೆ. ಕಂದಾಯ, ರೇಲ್ವೆ, ಗೃಹ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಹಣಕಾಸು, ರಕ್ಷಣೆ ಸೇರಿದಂತೆ ಹಲವಾರು ಪ್ರಮುಖ ಇಲಾಖೆಗಳಲ್ಲಿ ನೇಮಕ ಅಗಲಿದ್ದಾರೆ. ಈ 20ನೇ ಆವೃತ್ತಿಯೊಂದಿಗೆ ರೋಜ್ಗಾರ್ ಮೇಳದ ಮೂಲಕ ನೇಮಕಾತಿ ಆದೇಶ ಪತ್ರಗಳನ್ನು ಪಡೆದ ಒಟ್ಟು ಯುವಜನರ ಸಂಖ್ಯೆ ಸುಮಾರು 12.75 ಲಕ್ಷ ಮೀರಿದೆ. ಮಾನ್ಯ ಪ್ರಧಾನಿಗಳ ನಾಯಕತ್ವದಲ್ಲಿ ಇಷ್ಟೆಲ್ಲಾ ಅವಕಾಶಗಳು ನಮ್ಮ ಯುವಜನರಿಗೆ ದೊರೆತಿವೆ ಎಂದು ಸಂತೋಷವಾಗಿ ಹೇಳಬಯಸುತ್ತೇನೆ.
ಶಾಸಕ ಮುನಿರತ್ನ ಅವರು, ಬೆಂಗಳೂರು ಕಸ್ಟಮ್ಸ್ ವಿಭಾಗದ ಮುಖ್ಯ ಆಯುಕ್ತ ಆಶಿಸ್ ಚಂದನ್ ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕೇಂದ್ರದ ವಿವಿಧ ಸೇವೆಗಳಿಗೆ ಆಯ್ಕೆಯಾದ 25ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಸಚಿವರು ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿದರು.
ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ರೋಜ್ಗಾರ್ ಮೇಳದ ಮುಖ್ಯ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನಿಂದ ಆನ್ಲೈನ್ ವೇದಿಕೆ ಮೂಲಕ ಭಾಗಿಯಾಗಿ ಮಾತನಾಡಿದರು.
ಮಂಗಳೂರಿಗೆ ಮೀನು ತಿನ್ನಲು ಹೋಗಿದ್ದಾರೆಂಬ ಆರ್.ಅಶೋಕ್ ಹೇಳಿಕೆಗೆ ಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು
ಮಂಗಳೂರು: ಮಂಗಳೂರಿನಲ್ಲಿ ಮೊದಲ ಬಾರಿಗೆ ವಿಶೇಷ ಸಂಪುಟ ಸಭೆ ನಡೆಸಿದ್ದ ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವರ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್, ಮೀನು ತಿನ್ನಲು ಮಂಗಳೂರಿಗೆ ಹೋಗಿದ್ದಾರೆ ಎಂಫ಼್ದು ಟೀಕಿಸಿದ್ದರು. ಇದೀಗ ವಿಪಕ್ಷ ನಾಯಕರ ಹೇಳಿಕೆಗೆ ಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಮೀನು ತಿನ್ನುವ ಆಸೆಯಾಗಿದೆ. ಅವರಿಗೆ ಮೀನು ಬೇಕಂತೆ. ಮಂಗಳೂರಿನಿಂದಲೇ ಮೀನನ್ನು ಕಳುಹಿಸಿ, ಅವರ ಆಸೆ ತೀರಿಸೋಣ” ಎಂದು ತಿರುಗೇಟು ನೀಡಿದರು.
ಮಂಗಳೂರಿನಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ನಾವು ಕರಾವಳಿ ಅಭಿವೃದ್ಧಿಯ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ. ವಿರೋಧ ಪಕ್ಷಗಳು ನಮ್ಮ ಅಭಿವೃದ್ಧಿಯ ಪ್ರವಾಸದ ಬಗ್ಗೆ ಕುಹಕಿ ಮಾತುಗಳನ್ನು ಆಡುತ್ತಿವೆ. ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿಗಳು ಮೀನು ತಿನ್ನೋಕೆ ಮಂಗಳೂರಿಗೆ ಹೋಗಿದ್ದಾರೆ ಎಂದಿದ್ದಾರೆ. ನಾನು ಮೀನು ತಿನ್ನುವುದನ್ನು ಬಿಟ್ಟು ಬಹಳ ವರ್ಷಗಳಾಯಿತು. ಇವರಿಗೆ ಅಭಿವೃದ್ಧಿ ಬೇಕಿಲ್ಲ ಎಂದರು.
ನಾವು ಇಲ್ಲಿ ಏನೇನು ಕೆಲಸಗಳನ್ನು ಮಾಡಿದ್ದೇವೆ ಎನ್ನುವುದನ್ನು ಈ ರಾಜ್ಯದ ಮತ್ತು ಈ ಭಾಗದ ಜನತೆ ನೋಡಿದ್ದಾರೆ. ನಾನು ಮೀನು ತಿನ್ನುವುದಿಲ್ಲ, ನಮ್ಮ ಅಶೋಕಣ್ಣಗೆ ಇಲ್ಲಿಂದಲೇ ಮೀನು ಕಳುಹಿಸಲು ವ್ಯವಸ್ಥೆ ಮಾಡುತ್ತೇನೆ. ಮಂಗಳೂರು ಮತ್ತು ಉಡುಪಿ ಬಂದರಿನಲ್ಲಿ ಹಲವು ಅಭಿವೃದ್ದಿ ಕೆಲಸಗಳನ್ನು ಮಾಡಲು ಯೋಜನೆಯನ್ನು ರೂಪಿಸುವ ಕೆಲಸವಾಗಲಿದೆ ಎಂದಿದ್ದಾರೆ.
ಸರಕಾರದ ಬೊಕ್ಕಸದಲ್ಲಿ ಹಣವಿಲ್ಲ, ಆದರೂ ತೋರಿಕೆಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸುತ್ತಿದ್ದಾರೆ. ಘೋಷಣೆ ಮಾಡಿದ ಯೋಜನೆಗಳಿಗೆ ಹಣ ಹೇಗೆ ಬರುತ್ತೆ? ಕೇವಲ ಘೋಷಣೆ ಮಾಡಿ ಬರುತ್ತಾರೆ. ಆದರೆ ಅದು ಜಾರಿಗೆ ಬರುವುದಿಲ್ಲ ಎಂದು ಆರ್.ಅಶೋಕ್ ಟೀಕಿಸಿದ್ದರು.
ಒಂದೂವರೆ ಲಕ್ಷ ಕೋಟಿ ರೂ. ಸಾಲ ಮಾಡಿ ಬಜೆಟ್ ಮಂಡಿಸಿ, ಅದರ ಬಡ್ಡಿ ಕಟ್ಟಲು ಕೂಡ ಆಗುತ್ತಿಲ್ಲ. ಸಾರಿಗೆ ನಿಗಮಗಳಿಗೆ 5,000 ಕೋಟಿ ರೂ. ನೀಡಬೇಕಿದೆ. ನೌಕರರಿಗೆ ಸಂಬಳ ಕೂಡ ಕೊಟ್ಟಿಲ್ಲ. ಅಂಗನವಾಡಿ ಕಾರ್ಯಕರ್ತರಿಗೆ ಸಂಬಳ ಹೆಚ್ಚಳ ಮಾಡಿಲ್ಲ. ಆಸ್ಪತ್ರೆಗಳಲ್ಲಿ ಔಷಧಿ ಲಭ್ಯವಿಲ್ಲ. ಬರಗಾಲ ಬಂದರೂ ಒಂದೊಂದೇ ಘೋಷಣೆ ಮಾಡುತ್ತಿದ್ದಾರೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ರೆಸಾರ್ಟ್ಗೆ ಹೋಗಿ ಮೀನು ತಿಂದು ಈಗ ಸಚಿವ ಸಂಪುಟ ಸಭೆ ಮಾಡಿದ್ದಾರೆ. ಇದು ಕೂಡ ಮೂಗಿಗೆ ತುಪ್ಪ ಸವರುವ ಪ್ರಯತ್ನವಾಗಲಿದೆ. ಹಣವಿದ್ದರೆ ಸಾಲ ಮಾಡದೆ ಬಜೆಟ್ ಮಂಡಿಸುತ್ತೇನೆ ಎಂದು ಹೇಳಬೇಕು. ಕಾಂಗ್ರೆಸ್ ಸರ್ಕಾರ ಏನೋ ಸಾಧನೆ ಮಾಡುತ್ತೇವೆ ಎಂದು ಕೊಂಡು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ಮಾಡಿದೆ. ಆದರೆ ಯಾವುದೇ ಯೋಜನೆಗಳು ಕರಾವಳಿಗೆ ಸಿಗುವುದಿಲ್ಲ ಎಂದು ಹೇಳಿದ್ದರು.

