ರಾಯಚೂರು: ಮಹಿಳೆಯೊಬ್ಬರನ್ನು ದುಷ್ಕರ್ಮಿಗಳು ಜಮೀನುವೊಂದರಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್.ಹೆಚ್.ಯಂಪ್ ಹೊರವಲಯದಲ್ಲಿ ನಡೆದಿದೆ.
ಆರ್‌ಹೆಚ್.ಕ್ಯಾಂಪ್ 4ರ ನಿವಾಸಿ ಸ್ನೇಹಾ (25 ) ಕೊಲೆಯಾದ ಮಹಿಳೆ. ಜಮೀನಿನಲ್ಲಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಕಲ್ಲಿನಿಂದ ಜಜ್ಜಿದ್ದಾರೆ. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಮಹಿಳೆಯ ಪಕ್ಕದಲ್ಲೇ ಆಕೆಯ 2 ವರ್ಷದ ಮಗುವನ್ನು ಬಿಟ್ಟು ಆರೋಪಿಗಳು ಪರಾರಿಯಾಗಿದ್ದರು.
ತಾಯಿಯ ಸ್ಥಿತಿ ಅರಿಯದೇ ಪುಟ್ಟ ಕಂದಮ್ಮ ತಾಯಿ ಎದೆಯ ಮೇಲೆ ಕುಳಿತು ದೋದಿಸುತ್ತಿದ್ದ ದೃಶ್ಯ ಕರುಳು ಹಿಂದುವಂತಿತ್ತಿತ್ತು. ಇದನ್ನು ಕಂಡು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿ, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಮಗುವಿನ ತಲೆಗೂ ಸಣ್ಣಪುಟ್ಟ ಗಾಯಗಳಾಗಿದ್ದು ಚೇತರಿಸಿಕೊಂಡಿದೆ.
ಸಿಂಧನೂರು ಗ್ರಾಮೀಣ ಠಾಣೆ ಪೊಲೀಸರು ಮೃತ ಮಹಿಳೆಯ ಪತಿ ಅಮಿತ್ ಹಾಗೂ ಮೃತಳ ಪ್ರಿಯಕರ ಶುಭಂನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪತಿಯೊಂದಿಗೆ ಜಗಳ ಮಾಡಿಕೊಂಡು 15 ದಿನಗಳ ಹಿಂದೆ ಸ್ನೇಹಾ ತವರು ಮನೆಗೆ ತೆರಳಿದ್ದಳು. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಅಣ್ಣನ ಮನೆಯಿಂದ ಹೊರಗಡೆ ಬಂದಿದ್ದಳು ಎಂದು ತಿಳಿದುಬಂದಿದೆ. ಈ ವೇಳೆ ಮಹಿಳೆಯ ಮೇಲೆ ಜಮೀನಿನಲ್ಲಿ ಹಲ್ಲೆ ನಡೆಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಮಹಿಳೆಯ ಪತಿ ಹಾಗೂ ಪ್ರಿಯಕರನ್ನು ವಶಕ್ಕೆ ಪಡೆಯಲಾಗಿದೆ. ತನಿಖ್ಎ ನಡೆಸಲಾಗುತ್ತಿದೆ ಎಂದು ಎಸ್ ಪಿ ಅರುಣಾಂಗ್ಷು ಗಿರಿ ತಿಳಿಸಿದ್ದಾರೆ.
ಮದ್ಯದ ಅಮಲಿನಲ್ಲಿ ಪ್ರಿಯಕರನನ್ನು ಕೊಲೆಗೈದ ಮಹಿಳೆ
ದಾವಣಗೆರೆ: ಮದ್ಯದ ಅಮಲಿನಲ್ಲಿ ಮಹಿಳೆಯೊಬ್ಬರು ತನ್ನ ಪ್ರಿಯಕರನನ್ನೇ ಕೊಲೆಗೈದಿರುವ ದಾರುಣ ಘಟನೆ ದಾವಣಗೆರೆಯ ನಾಗಮ್ಮ ಕೇಶವಮೂರ್ತಿ ಬಡಾವಣೆಯಲ್ಲಿ ನಡೆದಿದೆ.
ಪ್ರಿಯಕರನ ಜೊತೆ ಸೇರಿ ಕಂಠಪೂರ್ತಿ ಕುಡಿದಿದ್ದ ಮಹಿಳೆ ಇಬರ ನಡುವೆ ಜಗಳ ಶುವಾಗಿ, ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿದೆ. ಈ ವೇಳೆ ಮಹಿಳೆ ತನ್ನ ಸೀರೆಯಿಂದ ಪ್ರಿಯಕರನ ಕತ್ತು ಬಿಗಿದು ಕೊಲೆ ಮಾಡಿದ್ದಾಳೆ.
ಪ್ರಿಯಕರ ಮಂಜಪ್ಪ (40) ಕೊಲೆಯಾದ ದುರ್ದೈವಿ. ಶಬೀನಾ (38) ಪ್ರಿಯಕರನನ್ನೇ ಕೊಲೆಗೈದ ಹಂತಕಿ. ಹದಡಿ ಠಾಣೆ ಪೊಲೀಸತು ಸದ್ಯ ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.
ಮಂಜಪ್ಪ ತನ್ನ ಪತ್ನಿ ಹಾಗೂ ಮಕ್ಕಳಿಂದ ದೂರವಾಗಿ ಕಳೆದ ಆರು ವರ್ಷಗಳಿಂದ ಶಬೀನಾ ಜೊತೆಗೆ ವಾಸವಾಗಿದ್ದ. ಶಬೀನಾ ಕೂಡ ಅದಾಗಲೇ ಒಂದು ಮದುವೆಯಾಗಿ ಪತಿಗೆ ವಿಚ್ಛೇದನ ನೀಡಿದ್ದಳು. ವಿಚ್ಛೇದಿತ ಮಹಿಳೆ ಶಬೀನಾ ಜೊತೆ ಮಂಜಪ್ಪ ವಾಸವಾಗಿದ್ದ.
ನಿನ್ನೆ ರಾತ್ರಿ ಕುಡಿದ ಅಮಲಿನಲ್ಲಿ ಮಂಜಪ್ಪನನ್ನು ಕೊಲೆ ಮಾಡಿದ್ದಾಳೆ. ಸೀರೆಯಿಂದ ಕತ್ತು ಬಿಗಿದು ಮಂಜಪ್ಪನನ್ನು ಹತ್ಯೆಗೈದಿದ್ದಾಳೆ.
ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಶಬೀನಾಳನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹದಡಿ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

