HomeKarnatakaಕರಾವಳಿಗರ ಕೈಗೆ ರಕ್ತ ಸವರುವುದನ್ನೇ ಕೆಲಸ ಮಾಡಿಕೊಂಡಿದ್ದ ಬಿಜೆಪಿಗೆ ತಳಮಳ ಶುರುವಾಗಿದೆ: ಪ್ರಿಯಾಂಕ್ ಖರ್ಗೆ

ಕರಾವಳಿಗರ ಕೈಗೆ ರಕ್ತ ಸವರುವುದನ್ನೇ ಕೆಲಸ ಮಾಡಿಕೊಂಡಿದ್ದ ಬಿಜೆಪಿಗೆ ತಳಮಳ ಶುರುವಾಗಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕರಾವಳಿಗರ ಕೈಗೆ ರಕ್ತ ಸವರುವುದನ್ನೇ ಕೆಲಸ ಮಾಡಿಕೊಂಡಿದ್ದ ಬಿಜೆಪಿಗೆ ತಳಮಳ ಶುರುವಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

 ಮಂಗಳೂರು ಕ್ಯಾಬಿನೆಟ್ ಬಗ್ಗೆ “ಮೂಗಿಗೆ ತುಪ್ಪ ಸವರುವ ಕ್ಯಾಬಿನೆಟ್” ಎನ್ನುವುದು ಬಿಜೆಪಿಗರ ಹತಾಶೆಯ ಟೀಕೆ, ಕರಾವಳಿಗರ ಕೈಗೆ ರಕ್ತ ಸವರುವುದನ್ನೇ ಕೆಲಸವನ್ನಾಗಿ ಮಾಡಿಕೊಂಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿಪರ ನಿಲುವುಗಳನ್ನು ನೋಡಿ ತಳಮಳ ಶುರುವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಕರಾವಳಿಯನ್ನು ಕೋಮುವಾದದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿತ್ತು, ನಾವು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ. ಬಿಜೆಪಿ ಕರಾವಳಿಯನ್ನು ಕೇವಲ ಮತಬ್ಯಾಂಕಿನ ಪ್ರದೇಶವಾಗಿ ಮಾತ್ರ ಕಾಣುತ್ತದೆ, ನಾವು ಕರಾವಳಿಯಲ್ಲಿ ಪ್ರಗತಿಯ ಸಾಧ್ಯತೆಗಳನ್ನು ಕಾಣುತ್ತಿದ್ದೇವೆ. ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರವಾಗಿತ್ತು, ನಾವು ಕರಾವಳಿಗರ ಆತ್ಮಗೌರವವನ್ನು ಗೌರವಿಸಲು ಕಾಲಿಟ್ಟಿದ್ದೇವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಕರಾವಳಿಯಲ್ಲಿ ಕೋಮು ಕಲಹದ ಚರ್ಚೆಗಳನ್ನು ಮಾತ್ರ ಹುಟ್ಟು ಹಾಕುತ್ತಿತ್ತು, ನಾವು ಡೇಟಾ ಸೆಂಟರ್, ವಾಟರ್ ಮೆಟ್ರೋ, ಪ್ರವಾಸೋದ್ಯಮ, ಮರೀನ್ ಬಯೋಟೆಕ್, ಮಾಹಿತಿ ತಂತ್ರಜ್ಞಾನಗಳಂತಹ ಪ್ರಗತಿಪರ ವಿಷಯಗಳ ಚರ್ಚೆ ಹುಟ್ಟುಹಾಕಿದ್ದೇವೆ. ದಕ್ಷಿಣ ಕನ್ನಡದ ಜನರ ಬೇಡಿಕೆಗಳನ್ನು ಕೇಳಿಸಿಕೊಳ್ಳುವ ಕೆಲಸ ಬಿಜೆಪಿಗರು ಮಾಡಿರಲಿಲ್ಲ, ತುಳುವನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಿದ್ದು ನಮ್ಮ ಸರ್ಕಾರ ಎಂದು ತಿಳಿಸಿದ್ದಾರೆ.

ಕೋಮು ಪ್ರಚೋದನೆ ಮತ್ತು ರಕ್ತ ಕಣ್ಣೀರು ಇವೆರಡನ್ನೂ ಹೊರತುಪಡಿಸಿದರೆ ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ! ಕರಾವಳಿಯ 3 ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಘೋಷಣೆ ಐತಿಹಾಸಿಕವಾದುದು, ಕರಾವಳಿಯನ್ನು ಮತಬ್ಯಾಂಕ್ ಮಾಡಿಕೊಂಡಿದ್ದ ಬಿಜೆಪಿಗೆ ಈ ಅಭಿವೃದ್ಧಿಪರ ನಿಲುವು ತಳೆಯುವುದಕ್ಕೆ ಸಾಧ್ಯವಾಗಲಿಲ್ಲ ಏಕೆ ಎಂದು ಪ್ರಶ್ನಿಸಿದ ಅವರು, ಜನತೆ ಕೋಮು ವಿಷಯಗಳನ್ನು ಬಿಟ್ಟು ಪ್ರಗತಿಯ ವಿಷಯಗಳತ್ತ ಚಿಂತನೆಗಳನ್ನು ಆರಂಭಿಸಿರುವುದೇ ಬಿಜೆಪಿಗೆ ಅಸ್ತಿತ್ವದ ಭಯ ಕಾಡಲು ಶುರುವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ನೀಲಿ ಜೈವಿಕ ಆರ್ಥಿಕತೆಯನ್ನು ನಿರ್ಮಿಸುವತ್ತ ಪ್ರಮುಖ ಹೆಜ್ಜೆ

ಭಾರತದ ಮೊದಲ ಸಮಗ್ರ ಕರ್ನಾಟಕ ಸಾಗರ ಜೈವಿಕ ತಂತ್ರಜ್ಞಾನ ನೀತಿ 2026-31 ರೊಂದಿಗೆ ಕರ್ನಾಟಕವು ಉನ್ನತ ಮೌಲ್ಯದ ನೀಲಿ ಜೈವಿಕ ಆರ್ಥಿಕತೆಯನ್ನು ನಿರ್ಮಿಸುವತ್ತ ಪ್ರಮುಖ ಹೆಜ್ಜೆ ಇಡುತ್ತಿದೆ, ಇದು 2031 ರ ವೇಳೆಗೆ $8 ಶತಕೋಟಿಗೆ ಬೆಳವಣಿಗೆಯನ್ನು ಗುರಿಯಾಗಿರಿಸಿಕೊಂಡಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕರ್ನಾಟಕ ಸಾಗರ ಜೈವಿಕ ತಂತ್ರಜ್ಞಾನ ಸಂಸ್ಥೆ ಮತ್ತು ನೀಲಿ ಆರ್ಥಿಕತೆ (KIMBE), ಸುಧಾರಿತ ಸಂಶೋಧನಾ ಮೂಲಸೌಕರ್ಯ, ಪ್ಲಗ್-ಅಂಡ್-ಪ್ಲೇ ಸೌಲಭ್ಯಗಳೊಂದಿಗೆ ಮೀಸಲಾದ ಸಾಗರ ಜೈವಿಕ ತಂತ್ರಜ್ಞಾನ ವಲಯಗಳು ಮತ್ತು ಸ್ಟಾರ್ಟ್ಅಪ್ ಇನ್ಕ್ಯುಬೇಷನ್, 2030 ರ ವೇಳೆಗೆ 100 ಸಾಗರ ಜೈವಿಕ ತಂತ್ರಜ್ಞಾನ ಉತ್ಪನ್ನಗಳ “ಸಾಗರದಿಂದ ಮಾರುಕಟ್ಟೆಗೆ” ಮಹತ್ವಾಕಾಂಕ್ಷೆಯೊಂದಿಗೆ ಈ ನೀತಿಯ ಕೇಂದ್ರಬಿಂದುವಾಗಿದೆ ಎಂದು ಹೇಳಿದ್ದಾರೆ.

ಜೈವಿಕ ವಸ್ತುಗಳು, ಜೈವಿಕ ಪ್ಲಾಸ್ಟಿಕ್‌ಗಳು, ನ್ಯೂಟ್ರಾಸ್ಯುಟಿಕಲ್‌ಗಳು, ಜೈವಿಕ ಗೊಬ್ಬರಗಳು ಮತ್ತು ಜೈವಿಕ ಇಂಧನಗಳಲ್ಲಿ ಹೆಚ್ಚಿನ ಮೌಲ್ಯದ ಅನ್ವಯಿಕೆಗಳನ್ನು ಬೆಂಬಲಿಸುವಾಗ, ಈ ನೀತಿಯು ಸುಮಾರು 2,500 ಉನ್ನತ ಮೌಲ್ಯದ ತಾಂತ್ರಿಕ ಉದ್ಯೋಗಗಳು ಮತ್ತು 7,500 ಕರಾವಳಿ ಉದ್ಯಮ ಮತ್ತು ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಕರಾವಳಿಯು ಇನ್ನೂ ಬಳಸದ ಅಪಾರ ಸಾಮರ್ಥ್ಯವನ್ನು ಹೊಂದಿದೆ ಮತ್ತು ರಾಜ್ಯವು ಈಗಾಗಲೇ ಜೈವಿಕ ತಂತ್ರಜ್ಞಾನದಲ್ಲಿ ರಾಷ್ಟ್ರೀಯ ನಾಯಕನಾಗಿರುವುದರಿಂದ, ಜಾಗತಿಕವಾಗಿ ಸ್ಪರ್ಧಾತ್ಮಕ ನೀಲಿ ಜೈವಿಕ ಆರ್ಥಿಕತೆಯಾಗಿ ಇದನ್ನು ನಿರ್ಮಿಸಲು ನಮ್ಮಲ್ಲಿ ವೈಜ್ಞಾನಿಕ ಶಕ್ತಿ, ಪ್ರತಿಭೆ ಮತ್ತು ಪರಿಸರ ವ್ಯವಸ್ಥೆ ಇದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular