HomeKarnatakaವೈದ್ಯಕೀಯ ಕೋರ್ಸ್ ಅಭ್ಯರ್ಥಿಗಳ ಮನವಿ ಮೇರೆಗೆ ಶುಲ್ಕ ಪಾವತಿ ಸಮಯ ವಿಸ್ತರಣೆ

ವೈದ್ಯಕೀಯ ಕೋರ್ಸ್ ಅಭ್ಯರ್ಥಿಗಳ ಮನವಿ ಮೇರೆಗೆ ಶುಲ್ಕ ಪಾವತಿ ಸಮಯ ವಿಸ್ತರಣೆ

ಬೆಂಗಳೂರು: UGNEET-26: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಸೆ.21ರಂದು ಸಂಜೆ 5 ಗಂಟೆವರೆಗೆ ಅವಕಾಶ ನೀಡಲಾಗಿದೆ.

ಅಭ್ಯರ್ಥಿಗಳ ಕೋರಿಕೆ ಮೇರೆಗೆ ಸಮಯ ವಿಸ್ತರಿಸಲಾಗಿದೆ. ಶುಲ್ಕ ಪಾವತಿ ನಂತರ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಕಡ್ಡಾಯವಾಗಿ ಪ್ರವೇಶ ಪಡೆಯಬೇಕು. ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಲು ಸೆ.21 ಕೊನೆ ದಿನವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಎಂಬಿಎ, ಎಂಸಿಎ ಅಣಕು ಫಲಿತಾಂಶ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

PGCET-2026: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ.

ಅಭ್ಯರ್ಥಿಗಳು ತಮ್ಮ ಇಚ್ಛೆಗಳನ್ನು ಬದಲಿಸಲು/ಅಳಿಸಲು ಹಾಗೂ‌ ಹೊಸದಾಗಿ ಸೇರಿಸುವುದಕ್ಕೂ ಸೆ.22ರಂದು ಬೆಳಿಗ್ಗೆ ‌11 ಗಂಟೆವರೆಗೆ ಅವಕಾಶ ನೀಡಲಾಗಿದೆ. ಇದುವರೆಗೂ ಆಪ್ಷನ್ಸ್ ದಾಖಲಿಸದಿರುವ ಅಭ್ಯರ್ಥಿಗಳು ಕೂಡ ಈಗ ಮಾಡಬಹುದು.

ಅಭ್ಯರ್ಥಿಗಳು, ಮೊದಲ ಸುತ್ತಿಗೆ ದಾಖಲಿಸಿದ ಆಪ್ಷನ್ಸ್ ಅನ್ನೇ ನಂತರದ ಸುತ್ತುಗಳಿಗೂ ಪರಿಗಣಿಸಲಾಗುತ್ತದೆ. ಆಪ್ಷನ್ಸ್ ದಾಖಲಿಸಲು ಒಮ್ಮೆ ಮಾತ್ರ ಅವಕಾಶ ಇರುತ್ತದೆ. ಹೀಗಾಗಿ ಎಚ್ಚರಿಕೆಯಿಂದ ಆಪ್ಷನ್ಸ್ ದಾಖಲಿಸಲು ಕೋರಲಾಗಿದೆ.

ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2026–27ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಹಾಗೂ ಸೌಲಭ್ಯ ಪಡೆಯಲು ಅರ್ಹರಿಂದ ಸೇವಾ ಸಿಂಧು ತಂತ್ರಾಂಶದ ಮೂಲಕ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 01 ಅರ್ಜಿ ಸಲ್ಲಿಸಲು ಕೊನೆಯ ದಿನ.

ಸ್ವಯಂ ಉದ್ಯೋಗ ಸಾಲ ಯೋಜನೆ,ಮ ಅರಿವು–ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿದ್ಯಾಭ್ಯಾಸಕ್ಕೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2024-25 ಮತ್ತು 2025-26ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ 080-22374832 ಮತ್ತು 8050770004 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಹೆಚ್.ಸಿ.ಸಾತ್ವಿಕ್ ತಿಳಿಸಿದ್ದಾರೆ.

ಬೀದಿ ನಾಯಿಗಳಿಗೆ ಉಚಿತ ಆಹಾರ: ಆಸಕ್ತ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿರುವ ಬೀದಿ ನಾಯಿಗಳಿಗೆ ಉಚಿತವಾಗಿ ಆಹಾರ ಒದಗಿಸಲು ಆಸಕ್ತಿ ಹೊಂದಿರುವ ನೋಂದಾಯಿತ ಸ್ವಯಂಸೇವಾ ಸಂಸ್ಥೆಗಳಿಂದ ಅಭಿರುಚಿ ಪತ್ರಗಳನ್ನು ಆಹ್ವಾನಿಸಲಾಗಿದೆ.

ನಗರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಯಾವುದೇ ಸಂಭಾವನೆ ಇಲ್ಲದೆ ಉಚಿತವಾಗಿ ಆಹಾರ ಒದಗಿಸುವ ಹಾಗೂ ಈ ಕಾರ್ಯದಲ್ಲಿ ಆಸಕ್ತಿ ಹೊಂದಿರುವ ನೋಂದಾಯಿತ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು.

ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು ತಮ್ಮ ನೋಂದಾವಣಿ ಪ್ರಮಾಣ ಪತ್ರ, ಸಂಸ್ಥೆಯ ವಿವರಗಳು ಹಾಗೂ ಉಚಿತವಾಗಿ ಸೇವೆ ಸಲ್ಲಿಸಲು ಸಮ್ಮತಿ ಪತ್ರವನ್ನು ಈ ಪ್ರಕಟಣೆ ಹೊರಡಿಸಿದ 07 ದಿನದೊಳಗೆ ನಗರಸಭೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರಸಭೆಯ ಆರೋಗ್ಯ ಶಾಖೆಯನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular