HomeIndiaಮುಂಬೈ ಕರಾವಳಿ ರಸ್ತೆ ಸೇತುವೆಯಿಂದ ಕೆಳಗೆ ಬಿದ್ದ ಬಿಎಂಡಬ್ಲ್ಯೂ ಕಾರು: ಮೂವರು ಸಾವು, ಒಬ್ಬರ ಸ್ಥಿತಿ...

ಮುಂಬೈ ಕರಾವಳಿ ರಸ್ತೆ ಸೇತುವೆಯಿಂದ ಕೆಳಗೆ ಬಿದ್ದ ಬಿಎಂಡಬ್ಲ್ಯೂ ಕಾರು: ಮೂವರು ಸಾವು, ಒಬ್ಬರ ಸ್ಥಿತಿ ಗಂಭೀರ

ಮುಂಬೈನ ಕರಾವಳಿ ರಸ್ತೆಯ ಸೇತುವೆಯಿಂದ ಐಷಾರಾಮಿ ಬಿಎಂಡಬ್ಲ್ಯೂ ಕಾರು ಕೆಳಗೆ ಬಿದ್ದ ಪರಿಣಾಮ, ಅದರಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮೃತಪಟ್ಟಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ.

ಭಾನುವಾರ ಬೆಳಿಗ್ಗೆ 5:20 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕರಾವಳಿ ರಸ್ತೆ ನಿಯಂತ್ರಣ ಕೊಠಡಿಯ ಪ್ರಕಾರ, ಮರೀನ್ ಡ್ರೈವ್‌ನಿಂದ ಹಾಜಿ ಅಲಿಯ ಕಡೆಗೆ ಹೋಗುತ್ತಿದ್ದ ಕಪ್ಪು ಬಣ್ಣದ ಬಿಎಂಡಬ್ಲ್ಯೂ ಕಾರಿನ ಚಾಲಕ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದರಿಂದ ಅದು ಸೇತುವೆಯಿಂದ ಕೆಳಗೆ ಬಿದ್ದಿದೆ; ಇದಕ್ಕೆ ಅತಿಯಾದ ವೇಗವೇ ಕಾರಣ ಎಂದು ಹೇಳಲಾಗಿದೆ.

ಕಾರಿನಲ್ಲಿದ್ದ ನಾಲ್ವರನ್ನೂ ತಕ್ಷಣವೇ ಹತ್ತಿರದ ಮಹಾನಗರ ಪಾಲಿಕೆ ನಿರ್ವಹಣೆಯ ನಾಯರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಮೃತಪಟ್ಟವರಲ್ಲಿ ಶನಯ್ ಗಜ್ಜಲ್ (21) ಮತ್ತು 17 ವರ್ಷದ ಬಾಲಕ ಸೇರಿದ್ದಾರೆ. ಸುಮಾರು 25 ವರ್ಷ ವಯಸ್ಸಿನ ಮತ್ತೊಬ್ಬ ವ್ಯಕ್ತಿಯನ್ನು ಇನ್ನೂ ಗುರುತಿಸಲಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಲ್ಕನೇ ಪ್ರಯಾಣಿಕರಾದ ಸುಮಾರು 20 ವರ್ಷ ವಯಸ್ಸಿನ ಗುರುತಿಸಲಾಗದ ವ್ಯಕ್ತಿಯು ತೀವ್ರವಾಗಿ ಗಾಯಗೊಂಡಿದ್ದು, ಪ್ರಸ್ತುತ ಆಸ್ಪತ್ರೆಯ ಟ್ರಾಮಾ ವಾರ್ಡ್‌ನಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮುಂಬೈ ಕರಾವಳಿ ರಸ್ತೆಯು (Mumbai Coastal Road) 10.58 ಕಿ.ಮೀ ಉದ್ದದ ಹೈ-ಸ್ಪೀಡ್ ಹೆದ್ದಾರಿಯಾಗಿದ್ದು, ಇದು ದಕ್ಷಿಣ ಮುಂಬೈನ ಮರೀನ್ ಡ್ರೈವ್ ಅನ್ನು ಬಾಂದ್ರಾ-ವರ್ಲಿ ಸೀ ಲಿಂಕ್‌ ನ ವರ್ಲಿ ಭಾಗದೊಂದಿಗೆ ಸಂಪರ್ಕಿಸುತ್ತದೆ.

ವೇಗವಾಗಿದ್ದ ಬಿಎಂಡಬ್ಲ್ಯೂ (BMW) ಕಾರು

ಭಾನುವಾರ ಮುಂಜಾನೆ ಮುಂಬೈನ ಕರಾವಳಿ ರಸ್ತೆಯಲ್ಲಿ (Coastal Road) ವೇಗವಾಗಿ ಬಂದ ಬಿಎಂಡಬ್ಲ್ಯೂ ಕಾರು ಅಪಘಾತಕ್ಕೀಡಾದ ಪರಿಣಾಮ ಕನಿಷ್ಠ ಮೂವರು ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತವು ಬೆಳಿಗ್ಗೆ 5:20 ರ ಸುಮಾರಿಗೆ ಸಂಭವಿಸಿದೆ. ಬಿಎಂಸಿ (BMC) ಪ್ರಕಾರ, ಮರೀನ್ ಡ್ರೈವ್‌ನಿಂದ ಹಾಜಿ ಅಲಿಯ ಕಡೆಗೆ ಹೋಗುತ್ತಿದ್ದ ಕಪ್ಪು ಬಣ್ಣದ ಬಿಎಂಡಬ್ಲ್ಯೂ ಕಾರು, ಅತಿಯಾದ ವೇಗದಿಂದಾಗಿ ಅಪಘಾತಕ್ಕೀಡಾಗಿದೆ.

ಮೃತಪಟ್ಟವರನ್ನು ಶನಯ್ ಗಜ್ಜಲ್ (21), ಧೈರ್ಯ ಸೇಠ್ (17) ಮತ್ತು ಮತ್ತೊಬ್ಬ ಸುಮಾರು 25 ವರ್ಷ ವಯಸ್ಸಿನ ವ್ಯಕ್ತಿ ಎಂದು ಗುರುತಿಸಲಾಗಿದೆ; ಈ ಮೂರನೇ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆತರುವಷ್ಟರಲ್ಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಸುಮಾರು 20 ವರ್ಷ ವಯಸ್ಸಿನ ಮತ್ತೊಬ್ಬ ಗುರುತಿಸಲಾಗದ ವ್ಯಕ್ತಿಯನ್ನು ಟ್ರಾಮಾ ವಾರ್ಡ್‌ಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ಕೇರಳದಲ್ಲಿ ಟ್ರಕ್‌ಗೆ ಎರಡು ಕಾರುಗಳು ಡಿಕ್ಕಿ: ಆರು ಮಂದಿಗೆ ಗಾಯ

ಕಾಸರಗೋಡು(ಕೇರಳ): ಭಾನುವಾರ ನಸುಕಿನ ಜಾವ ಇಲ್ಲಿನ ಕನ್ಯಪ್ಪಾಡಿ ಬಳಿ, ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟ್ರಕ್‌ ಗೆ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಗಾಯಗೊಂಡಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಂಬಳೆ ಕಡೆಯಿಂದ ಬರುತ್ತಿದ್ದ ಕಾರುಗಳು ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಾಗ ಈ ಘಟನೆ ಸಂಭವಿಸಿದೆ ಎಂದು ಬದಿಯಡ್ಕ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಾಯಗೊಂಡವರನ್ನು ಸ್ಥಳೀಯರು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ಸಾಗಿಸಿದರು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular