HomeKarnatakaಬೆಂಗಳೂರಿನಲ್ಲಿ ಹೋಟೆಲ್ ಮುಂದೆ ನಿಲ್ಲಿಸಿದ್ದ ಆಡಿ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬೆಂಗಳೂರಿನಲ್ಲಿ ಹೋಟೆಲ್ ಮುಂದೆ ನಿಲ್ಲಿಸಿದ್ದ ಆಡಿ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫಾಸ್ಟ್ ಫುಡ್ ಹೋಟೆಲ್ ಮುಂದೆ ನಿಲ್ಲಿಸಿದ್ದ ಐಷಾರಾಮಿ ಆಡಿ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ.

ಕೋರಮಂಗಲ ಪೊಲೀಸ್ ಠಾಣೆಯ ಬಳಿ ಫಾಸ್ಟ್ ಫುಡ್ ಹೋಟೆಲ್ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ರಾತ್ರಿ ಒಂದು ಗಂಟೆ ಸುಮಾರಿಗೆ ಠಾಣೆ ಮುಂಭಾಗ ಫಾಸ್ಟ್ ಫುಡ್ ಹೋಟೆಲ್ ಬಳಿ ಕಾರು ನಿಂತಿದೆ. ಬೆಳಗ್ಗೆ ಹೋಟೆಲ್ ಸೊಬ್ಬಂದಿ ನೋಡಿದಾಗ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಪೊಲೀಸರ ಪರಿಶೀಲನೆ ವೇಳೆ ಮೃತಪಟ್ಟ ವ್ಯಕ್ತಿ ಅಕ್ಬರ್ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇಲ್ನೋಟಕ್ಕೆ ಹೃದಯಾಘಾತದಿಂದ ವ್ಯಕ್ತಿ ಕಾರಿನಲ್ಲೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸೋಕೋ ಟೀಂ ಹಾಗೂ ಕೋರಮಂಗಲ ಪೊಲೀಸರಿಂದ ಪರಿಶೀಲನೆ ನಡೆಯುತ್ತಿದ್ದು, ಮೃತಪಟ್ಟ ಅಕ್ಬರ್ ಯಾರು? ಆತನ ಹಿನ್ನಲೆ ಏನು ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಬೆಂಗಳೂರಿನಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಓರ್ವ ಬಲಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ವ್ಹೀಲಿಂಗ್ ಪುಂಡರ ಹಾವಳಿ ಹೆಚ್ಚಾಗುತ್ತಿದೆ. ವ್ಹೀಲಿಂಗ್ ಮಾಡುವವರ ವಿರುದ್ಧ ಪೊಲಿಸರು ಎಷ್ಟೇ ಕ್ರಮ ಕೈಗೊಂಡರೂ ಮತ್ತೆ ಪುಂದಾಟ ಮುಂದುವರೆದಿದೆ. ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ವ್ಯಕ್ತಿಯೋರ್ವರು ಬಲಿಯಾಗಿರುವ ಘಟನೆ ನಡೆದಿದೆ.

ಅನ್ನಪೂರ್ಣೇಶ್ವರಿ ನಗರದ ಮಹದೇಶ್ವರ ದೇಗುಲದ ಬಳಿ ಈ ಘಟನೆ ನಡೆದಿದೆ. ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದವರನ್ನು ತಪ್ಪಿಸಲು ಹೋಗಿ ಟಿಟಿ ವಾಹನ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಟಿಟಿ ವಾಹನದಲ್ಲಿದ್ದ ಮನೋಜ್ ಕುಮಾರ್ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಅಖಲಿಸಲಾಗಿದೆ.

ಮನೋಜ್ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಟಿಟಿ ವಾಹನ ಲಗ್ಗೆರೆಯಿಂದ ಬರುತ್ತಿತ್ತು. ಈ ವೇಳೆ ಪುಂಡರು ಬೈಕ್ ವ್ಹೀಲಿಂಗ್ ಮಾಡುತ್ತಾ ಟಿಟಿ ವಾಹನಕ್ಕೆ ಅಡ್ಡ ಬಂದಿದ್ದಾರೆ. ಅವರನ್ನು ತಪ್ಪಿಸಲು ಹೋಗಿ ಈ ದುರಂತ ಸಂಭವಿಸಿದೆ.

ಅಪಘಾತ ಸಂಭವ್ಚಿಸಿ ಒಂದು ಗಂಟೆಯಾದರೂ ಆಂಬುಲೆನ್ಸ್ ವಾಹನ ಸ್ಥಳಕ್ಕೆ ಬಂದಿಲ್ಲ. ಇದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ವ್ಹೀಲಿಂಗ್ ಮಾಡುತ್ತಿದ್ದ ಯುವಕರ ವಿರುದ್ಧ ಈವರೆಗೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular