ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪೊಲೀಸ್(KSRP) ಪಡೆಯ ಕಾನ್ಸ್ ಟೇಬಲ್ ಹುದ್ದೆಗೆ ಇಂದು ಯಶಸ್ವಿಯಾಗಿ ಪರೀಕ್ಷೆ ನಡೆಯಿತು.
ಒಟ್ಟು 2,314 ಹುದ್ದೆಗಳಿಗೆ ಪರೀಕ್ಷೆ ನಡೆಯಿತು. ಮಿಕ್ಕುಳಿಕೆ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದಗಳಿಗೆ ಪರೀಕ್ಷೆ ನಡೆಯಿತು.
ಮಿಕ್ಕುಳಿಕೆ ವೃಂದದ ಒಟ್ಟು 1,42,912 ಅಭ್ಯರ್ಥಿಗಳ ಪೈಕಿ 1,12,125 (ಶೇ 78) ಹಾಗೂ ಕಲ್ಯಾಣ ಕರ್ನಾಟಕ ವೃಂದದ 38,332 ಅಭ್ಯರ್ಥಿಗಳ ಪೈಕಿ 32,694 (ಶೇ 85) ಮಂದಿ ಪರೀಕ್ಷೆ ಗೆ ಹಾಜರಾಗಿದ್ದರು.
ಪರೀಕ್ಷಾ ಕೇಂದ್ರಗಳ ಮೇಲೆ ತೀವ್ರ ನಿಗಾ ಇಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಕಚೇರಿಯಲ್ಲಿ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಕಮಾಂಡ್ ಸೆಂಟರ್ ನಲ್ಲಿ ಇದ್ದು ಖುದು ಪರಿಶೀಲನೆ ನಡೆಸಿದರು.
ಸುರಕ್ಷತೆ, ಭದ್ರತೆಯೊಂದಿಗೆ ಪರೀಕ್ಷೆ
ಈ ದಿನ ದಿನಾಂಕ: 20-09-2026 ರಂದು ಕೆ.ಎಸ್.ಆರ್.ಪಿ ಪೊಲೀಸ್ ಕಾನ್ ಸ್ಟೆಬಲ್ ಹುದ್ದೆ(RPC NKK ವೃಂದ) ಯ ಲಿಖಿತ ಪರೀಕ್ಷೆಯನ್ನು ಶಿವಮೊಗ್ಗ ನಗರದ 29 ಮತ್ತು ಭದ್ರಾವತಿ ನಗರದ 5 ಶಾಲಾ ಕಾಲೇಜುಗಳು ಸೇರಿ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ಮತ್ತು RPC KK ವೃಂದದ ಲಿಖಿತ ಪರೀಕ್ಷೆಯನ್ನು ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ ಆಯೋಜಿಸಲಾಗಿತ್ತು.
ಲಿಖಿತ ಪರೀಕ್ಷೆಯ ಸಂಬಂಧ ಶಿವಮೊಗ್ಗ ಜಿಲ್ಲೆಗೆ ನಿಗದಿಪಡಿಸಲ್ಪಟ್ಟಿದ್ದ RPC NKK ವೃಂದ ಒಟ್ಟು 11712, ಪ್ರಶಿಕ್ಷಣಾರ್ಥಿಗಳಲ್ಲಿ, 9380 ಪ್ರಶಿಕ್ಷಣಾರ್ಥಿಗಳು ಸದರಿ ಲಿಖಿತ ಪರೀಕ್ಷೆಗೆ ಹಾಜರಾಗಿದ್ದರು ಹಾಗೂ RPC KK ವೃಂದ ಒಟ್ಟು 4118 ಪ್ರಶಿಕ್ಷಣಾರ್ಥಿಗಳಲ್ಲಿ, 3478 ಪ್ರಶಿಕ್ಷಣಾರ್ಥಿಗಳು ಸದರಿ ಲಿಖಿತ ಪರೀಕ್ಷೆಗೆ ಹಾಜರಾಗಿದ್ದರು.
ಪರೀಕ್ಷೆಯನ್ನು ಯಶಸ್ವಿಯಾಗಿ ಯಾವುದೇ ಅಡೆತಡೆ ಇಲ್ಲದೆ ನಡೆಸಿಕೊಡುವ ಸಂಬಂಧ, ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆ ಹಾಗೂ ಉಪ ನಿರ್ದೇಶಕರು, ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆಯ ಸಹಯೋಗ ಮತ್ತು ಸಹಕಾರದೊಂದಿಗೆ ಶಿವಮೊಗ್ಗ ಪೊಲೀಸ್ ಇಲಾಖೆಯು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿರುತ್ತದೆ.
ಎಲ್ಲ 34 ಪರೀಕ್ಷಾ ಕೇಂದ್ರಗಳಲ್ಲಿ ಸುರಕ್ಷತೆ, ಪರೀಕ್ಷಾ ಕೇಂದ್ರದ ಸುತ್ತಲಿನ ಭದ್ರತೆ ಹಾಗೂ Frisking ಸಂಬಂಧ, 9-DySP, 34-PI, 34-PSI, 4- ASI & 135 – HC&PC ಸೇರಿ ಒಟ್ಟು 216 ಜನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಿಸಲಾಗಿದ್ದು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಗಡಿಯಾರ, ಜಾಮರ್, ಗಾಳಿ ಬೆಳಕಿನ ವ್ಯವಸ್ಥೆ, ಕುಡಿಯುವ ನೀರು, ಪೀಠೋಪಕರಣಗಳ ಜೊತೆಗೆ ಅಗತ್ಯ ಮೂಲಭೂತ ಸೌಕರ್ಯಗಳ ಸಂಬಂಧ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿತ್ತು, ಪಾರದರ್ಶಕ ಪರೀಕ್ಷೆಯನ್ನು ಖಚಿತಪಡಿಸಿಕೊಳ್ಳುವ ಸಂಬಂಧ, ಎಲ್ಲಾ ಪರೀಕ್ಷಾ ಕೊಠಡಿಗಳಿಗೆ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಗಳನ್ನು ಸಹ ಅಳವಡಿಸಲಾಗಿರುತ್ತದೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟಾರೆಯಾಗಿ ಲಿಖಿತ ಪರೀಕ್ಷೆಯು ಯಶಸ್ವಿಯಾಗಿ ಮುಕ್ತಾಯವಾಗಿದ್ದು, ಪರೀಕ್ಷೆಯ ಯಶಸ್ಸಿಗೆ ಸಹಕರಿಸಿದಂತಹ ಎಲ್ಲರಿಗೂ ಸಹ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಧನ್ಯವಾದ ಸಲ್ಲಿಸಲಾಗಿದೆ.

