HomeKarnatakaಕೌಟುಂಬಿಕ ಕಲಹ ಹಿನ್ನೆಲೆ ತಂದೆಯನ್ನೇ ಕೊಚ್ಚಿ ಕೊಲೆಗೈದ ಪುತ್ರ

ಕೌಟುಂಬಿಕ ಕಲಹ ಹಿನ್ನೆಲೆ ತಂದೆಯನ್ನೇ ಕೊಚ್ಚಿ ಕೊಲೆಗೈದ ಪುತ್ರ

ಚಿಕ್ಕಮಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪುತ್ರನೇ ತಂದೆಯನ್ನು ಕೊಚ್ಚಿ ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ರಂಗನಾಥಪುರದಲ್ಲಿ ಶನಿವಾರ ರಾತ್ರಿ ನಡೆದಿದೆ.

ತಮ್ಮಯ್ಯ(59) ಕೊಲೆಯಾದವರು. ಅವರ ಪುತ್ರ ಗಣೇಶ(29) ತಂದೆಯನ್ನು ಕೊಲೆ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಂದೆ ಮತ್ತು ಮಗನ ನಡುವೆ ಕೌಟುಂಬಿಕ ಕಲಹ ಕಾರಣದಿಂದ ಗಲಾಟೆ ಆಗಿತ್ತು. ಗಲಾಟೆಯ ವೇಳೆ ಆಕ್ರೋಶಗೊಂಡ ಪುತ್ರ ಗಣೇಶ ಮಾರಕಾಸ್ತ್ರಗಳಿಂದ ತಂದೆ ತಮ್ಮಯ್ಯ ಅವರನ್ನು ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಲಕ್ಕವಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೃಷಿ ಅಧಿಕಾರಿ ಕೊಲೆ ಪ್ರಕರಣದಲ್ಲಿ 12 ವರ್ಷಗಳಿಂದ ನಾಪತ್ತೆಯಾಗಿದ್ದ ಆರೋಪಿ ಅರೆಸ್ಟ್

ವಿಜಯಪುರ: ಕೃಷಿ ಅಧಿಕಾರಿ ಕೊಲೆ ಪ್ರಕರಣದಲ್ಲಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ತನ್ನ ಅಕ್ರಮ ಸಂಬಂಧದಿಂದಾಗಿ ಪೊಲೀಸರಿಗೆ ಸಿಕ್ಕಿಬಿದ್ದು ಮತ್ತೆ ಜೈಲು ಸೇರಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸವರಾಜ ಪಾಟೀಲ ಎಂಬಾತ 2009ರಲ್ಲಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ. 2014ರಲ್ಲಿ ಅನಾರೋಗ್ಯದ ನೆಪ ಹೇಳಿ ಆಸ್ಪತ್ರೆಗೆ ತೆರಳಿ ಸಿಬ್ಬಂದಿಯ ಕಣ್ಣು ತಪ್ಪಿಸಿ ಪರಾರಿಯಾಗಿದ್ದ. 12 ವರ್ಷಗಳಿಂದ ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ನಂತರ ಬೈಲಹೊಂಗಲ ಸಮೀಪ ಅರೆಹುಚ್ಚನಂತೆ ಜೀವನ ನಡೆಸುತ್ತಿದ್ದ. ಸ್ವಲ್ಪ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡಿದ್ದ. ಈತ ಅಕ್ರಮ ಸಂಬಂಧ ಹೊಂದಿದ್ದ. ಇವನ ಮೇಲೆ ಪೊಲೀಸರಿಗೆ ಅನುಮಾನ ಬಂದು ಪರಿಶೀಲಿಸಿದಾಗ ಸಿಕ್ಕಿಬಿದ್ದಿದ್ದಾನೆ. ಆತನ ಮೊಬೈಲ್ ಕರೆಗಳ ಮಾಹಿತಿ ಮತ್ತು ಬೆರಳಚ್ಚು ಮಾದರಿ ಆದರಿಸಿ ಬಂಧಿಸಿದ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ.

ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ಡೆಹರಾಡೂನ್‍ನ ಪ್ರವೇಶ

ದಾವಣಗೆರೆ: ಜುಲೈ 2027ನೇ ಅಧಿವೇಶನಕ್ಕಾಗಿ ಡೆಹ್ರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯು ಡಿಸೆಂಬರ್ 6 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿದೆ.

7ನೇ ತರಗತಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ದಿನಾಂಕ 01-07-2026ಕ್ಕೆ 12 1/2 ವರ್ಷದಿಂದ 14 ವರ್ಷದೊಳಗಿರುವ ಬಾಲಕ ಮತ್ತು ಬಾಲಕಿಯರು ಆನ್ ಲೈನ್ ಮೂಲಕ ದಿನಾಂಕ ಸೆಪ್ಟೆಂಬರ್ 30 ರೊಳಗಾಗಿ https://examinationservices.nic.in/ExamSys26Part2/Root/Home.aspx?enc=Ei4cajBkK1gZSfgr53ImFQBut9oTMxhETt9bNm6zcP2ghS+a59eor30/A5h2io4z  ಜಾಲತಾಣದಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯದ ದೂರವಾಣಿ ಸಂಖ್ಯೆ : 080-25589459 ಹಾಗೂ ಜಾಲತಾಣ   rimc.edu.in  ಅಥವಾ ಹತ್ತಿರದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದೆದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

ಬಾಲ ಹಾಗೂ ಕಿಶೋರಕಾರ್ಮಿಕರ ಪತ್ತೆ

ದಾವಣಗೆರೆ: ನಗರದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಬಾಲ್ಯಾವಸ್ಥೆ & ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ ಕುರಿತು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಗುರುವಾರ ವಿವಿಧ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ, ಬಾಲ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ತಪಾಸಣೆ ನಡೆಸಿದಾಗ ಒಬ್ಬ ಬಾಲಕಾರ್ಮಿಕ ಮತ್ತು ಇಬ್ಬರು ಕಿಶೋರ ಕಾರ್ಮಿಕರು ಅಪಾಯಕಾರಿ ಉದ್ದಿಮೆಯಲ್ಲಿ ಪತ್ತೆ ಮಾಡಲಾಗಿದೆ.

ಪತ್ತೆಯಾದ ಕಿಶೋರ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ಒಪ್ಪಿಸಲಾಯಿತು. ಹಾಗೂ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ.

ಕಾರ್ಯಾಚರಣೆಯಲ್ಲಿ ಕಾರ್ಮಿಕ ನಿರೀಕ್ಷಕರಾದ ರಾಜಶೇಖರ ಹಿರೇಮಠ್, ಮಾಮ್ತಾಜ್, ಕವಿತಕುಮಾರಿ ಯೋಜನಾ ನಿರ್ದೇಶಕರಾದ ಪ್ರಸನ್ನ ಇ.ಎನ್ ಹಾಜರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular