HomeKarnatakaತುಳು ಬೆನ್ನಲ್ಲೇ ಉರ್ದು ಭಾಷೆಗೂ ಅಧಿಕೃತ ಸ್ಥಾನಮಾನಕ್ಕೆ ಒತ್ತಾಯ: ಸಿಎಂ ಡಿ.ಕೆ.ಶಿವಕುಮಾರ್ ಗೆ ಪತ್ರ ಬರೆದ...

ತುಳು ಬೆನ್ನಲ್ಲೇ ಉರ್ದು ಭಾಷೆಗೂ ಅಧಿಕೃತ ಸ್ಥಾನಮಾನಕ್ಕೆ ಒತ್ತಾಯ: ಸಿಎಂ ಡಿ.ಕೆ.ಶಿವಕುಮಾರ್ ಗೆ ಪತ್ರ ಬರೆದ SDPI ರಾಜ್ಯಾಧ್ಯಕ್ಷ

ಮೈಸೂರು: ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ ಸ್ಥಾನಮಾನ ನೀಡಿರುವ ಬೆನ್ನಲ್ಲೇ ಉರ್ದು ಭಾಷೆಗೂ ಅಧಿಕೃತ ಭಾಷಾ ಸ್ಥಾನಮಾನ ನೀಡಬೇಕು ಎಂಬ ಆಗ್ರಹಗಳು ಕೇಳಿಬಂದಿವೆ. ಈ ಬಗ್ಗೆ ಎಸ್‌ಡಿಪಿಐರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕದಲ್ಲಿ ಉರ್ದುವಿಗೂ ಅಧಿಕೃತ ಭಾಷೆ ಸ್ಥಾನಮಾನ ನೀಡುವಂತೆ ಅಬ್ದುಲ್ ಮಜೀದ್ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ 4,236 ಉರ್ದು ಮಾಧ್ಯಮ ಶಾಲೆಗಳಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದು, ತೆಲಂಗಾಣ ಮಾದರಿಯಲ್ಲಿ ಉರ್ದುವಿಗೆ ಸ್ಥಾನಮಾನ ನೀಡಲು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉರ್ದುವಿಗೆ ಸ್ಥಾನಮಾನ ನೀಡುವುದರಿಂದ ಕನ್ನಡಕ್ಕೆ ಧಕ್ಕೆಯಾಗುವುದಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಉರ್ದುವಿನಲ್ಲೂ ಅರ್ಜಿ, ಮಾಹಿತಿ ನೀಡಲು ಅವಕಾಶ ಕಲ್ಪಿಸುವಂತೆ ಬೇಡಿಕೆ ಇಟ್ಟಿದ್ದು, ಉರ್ದು ಶಾಲೆಗಳ ಖಾಲಿ ಶಿಕ್ಷಕರ ಹುದ್ದೆ ಭರ್ತಿಗೆ ಆಗ್ರಹಿದ್ದಾರೆ. ಸರ್ಕಾರಿ ನೇಮಕಾತಿ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಉರ್ದುವಿನಲ್ಲೂ ನೀಡಲು ಅವಕಾಶ ನೀಡಬೇಕು ಎಂದು ಒತ್ತಾಯಿದ್ದಾರೆ.

ಇತ್ತೀಚೆಗೆ ಮಂಗಳೂರಿನಲ್ಲಿ ರಾಜ್ಯ ಸಂಪುಟ ಸಭೆ ನಡೆಸಿದ್ದ ಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕರಾವಳಿಯ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಅಧಿಕೃತ ಭಾಷೆ ಸ್ಥಾನಮಾನ ನೀಡಲಾಗುವುದು ಎಂದು ಘೋಷಿಸಿದರು. ಜೊತೆಗೆ ಕರಾವಳಿ ಅಭಿವೃದ್ಧಿಗೆ ಅನುದಾನ ಕೂಡ ಘೋಷಿಸಿದರು. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಉರ್ದು ಭಾಷೇಗೂ ಸ್ಥಾನಮಾನ ನೀಡುವಂತೆ ಎಸ್ ಡಿಪಿಐ ಒತ್ತಾಯಿಸಿದೆ.

ಪವಿತ್ರ ಸ್ನಾನಕ್ಕೆಂದು ಕೆರೆಗೆ ಇಳಿದಾಗ ದುರಂತ: ನೀರಿನಲ್ಲಿ ಮುಳುಗಿ 6 ಮಕ್ಕಳು ದಾರುಣ ಸಾವು

ಪಾಟ್ನಾ: ಧಾರ್ಮಿಕ ಕಾರ್ಯಕ್ರಮದ ನಿಮಿತ್ತ ಕೆರೆಯಲ್ಲಿ ಸ್ನಾನಕ್ಕೆ ತೆರಳಿದ್ದ ಆರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ನಡೆದಿದೆ.

ಕೆರೆಯಲ್ಲಿ ಸ್ನಾನ ಮಾಡುತ್ತಿದ್ದಾಗ ಆರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಲ್ತಂಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ತರೈತಾ ಬಹಿಯಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ‘ಕರ್ಮ-ಧರ್ಮ’ ಹಬ್ಬದ ಅಂಗವಾಗಿ ಧಾರ್ಮಿಕ ಸ್ನಾನಕ್ಕಾಗಿ ಮಕ್ಕಳು ಕೆರೆಯಲ್ಲಿ ಸ್ನಾನಕ್ಕೆ ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಮೂವರು ಬಾಲಕಿಯರು ಹಾಗೂ ಮೂವರು ಬಾಲಕರು ಸೇರಿ ಒಟ್ಟು ಆರು ಮಕ್ಕಳು ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಪೂಜಾ ಕುಮಾರಿ (13), ರಾಹುಲ್ ಕುಮಾರ್ (14), ವಿಕಾಸ್ ಕುಮಾರ್ (13), ಆಯುಷ್ ಕುಮಾರ್ (12), ಮೀನಾಕ್ಷಿ ಕುಮಾರಿ ಅಲಿಯಾಸ್ ಮಿಂಕಿ (12) ಮತ್ತು ಜ್ಯೋತಿ ಕುಮಾರಿ (14) ಎಂದು ಗುರುತಿಸಲಾಗಿದೆ

ಪೊಲೀಸರ ಪ್ರಕಾರ, ಮಕ್ಕಳ ಪೈಕಿ ಒಬ್ಬರು ಆಳವಾದ ನೀರಿಗೆ ಇಳಿದಾಗ, ಉಳಿದವರು ಆತನನ್ನು ರಕ್ಷಿಸಲು ತಾವೂ ನೀರಿಗೆ ಇಳಿದಿದ್ದಾರೆ. ಹೀಗೆ ಒಬ್ಬರನ್ನು ರಕ್ಷಿಸಲು ಹೋಗಿ ಒಬ್ಬರು ಅಂತಿಮವಾಗಿ ಆರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ತಿದ್ದಾರೆ.

ಸ್ಥಳೀಯರು ಮಕ್ಕಳನ್ನು ಕೆರೆಯಿಂದ ಹೊರತೆಗೆದು ಸುಲ್ತಂಗಂಜ್ ರೆಫರಲ್ ಆಸ್ಪತ್ರೆಗೆ ಕರೆದೊಯ್ದರು, ಆದರೆ ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಸುಲ್ತಂಗಂಜ್ ಸರ್ಕಲ್ ಅಧಿಕಾರಿ ರಾಮನ್ ಕುಮಾರ್ ಮತ್ತು ಠಾಣಾಧಿಕಾರಿ ಧನಂಜಯ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ನಿಯಮಗಳ ಪ್ರಕಾರ ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ನೆರವು ಮತ್ತು ಪರಿಹಾರವನ್ನು ಒದಗಿಸಲಾಗುವುದು ಎಂದು ಠಾಣಾಧಿಕಾರಿ ಧನಂಜಯ್ ಕುಮಾರ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular