HomeKarnatakaಸವದತ್ತಿ ಯಲ್ಲಮ್ಮ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧಿ ಮಾರಾಟ: ಅಧಿಕಾರಿಗಳ ದಿಢೀರ್ ದಾಳಿ

ಸವದತ್ತಿ ಯಲ್ಲಮ್ಮ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧಿ ಮಾರಾಟ: ಅಧಿಕಾರಿಗಳ ದಿಢೀರ್ ದಾಳಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಪುರಾಣ ಪ್ರಸಿದ್ದ ಯಲ್ಲಮ್ಮನ ಗುಡ್ಡದಲ್ಲಿ ಅಂಗಡಿಗಳ ಮೇಲೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಇಲ್ಲಿನ ಕುಂಕುಮ ಭಂಡಾರ, ಕಿರಾಣಿ ಅಂಗಡಿಗಳ ಮೇಲೆ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಭಾವತಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಅಂಗಡಿಗಳಲ್ಲಿ ಔಷಧ ಮತ್ತು ಮಾತ್ರೆ ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಿರಾಣಿ ಅಂಗಡಿಗಳಲ್ಲಿ ಔಷಧಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿರುವ ಆರೋಪ ಕೇಳಿಬಂದಿದೆ. ಅಂಗಡಿಗಳಲ್ಲಿ ಅಸ್ವಚ್ಛತೆ ಹಾಗೂ ಕಳಪೆ ಆಹಾರ, ಕೊಳೆತ ತರಕಾರಿಗಳು ಇರುವುದು ಕಂಡು ಅಧಿಕಾರಿಗಳು ಗರಂ ಆಗಿದ್ದಾರೆ. ನಿಮ್ಮ ಮನೆಯಲ್ಲೂ ಇದೇ ತರಕಾರಿ ತಿಂತೀರಾ ಎಂದು ತರಾಟೆಗೆ ಪಡೆದಿದ್ದಾರೆ.

ತಂಪು ಪಾನೀಯ, ಆಹಾರ ಪ್ಯಾಕೆಟ್‌ ಮೇಲೆ ಎಕ್ಸ್‌ಪೈರಿ ಡೇಟ್‌ ಇಲ್ಲದಿರೋದು ಕಂಡುಬಂದಿರುವ ಜೊತೆಗೆ ಕೆಲವೊಂದು ಅಂಗಡಿ ಪರವಾನಗಿ ನವೀಕರಸದೆ ವ್ಯಾಪಾರ ವಹಿವಾಟು ಮಾಡುತ್ತಿರೋದು ಈ ವೇಳೆ ಗೊತ್ತಾಗಿದೆ. ನಿಯಮ ಮೀರಿದ ಅಂಗಡಿಗಳ ವಿದ್ಯುತ್‌, ನೀರಿನ ಸಂಪರ್ಕ ಕಡಿತಕ್ಕೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಭಕ್ತರಿಗೆ ಯಾವುದೇ ವರ್ತಕರು ಮೋಸ ಮಾಡಬಾರದೆಂದು ಪ್ರಭಾವತಿ ವಾರ್ನಿಂಗ್ ನೀಡಿದ್ದಾರೆ.

ಇದೇ ವೇಳೆ ನಿಯಮ ಮೀರಿ ವ್ಯಾಪಾರ ವಹಿವಾಟು ನಡೆಸುತ್ತಿದ್ದವರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಪರವಾನಗಿ ಪಡೆಯುವಂತೆ ಸೂಚಿಸಲಾಗಿದೆ.

ನಕಲಿ ಔಷಧ ಮಾಫಿಯಾ: FDA ಸಹಾಯಕ ನಿಯಂತ್ರಕ ಸಸ್ಪೆಂಡ್

ಬೆಂಗಳೂರು: ನಕಲಿ ಔಷಧ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ತಲೆದಂಡವಾಗಿದ್ದು, ಸರ್ಕಲ್-1ರ ಸಹಾಯಕ ಔಷಧ ನಿಯಂತ್ರಕ (ADC) ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಓಂಕಾರೇಶ್ವರ್ ಅಮಾನತುಗೊಂಡಿರುವ ಸಹಾಯಕ ಔಷಧ ನಿಯಂತ್ರಕ. ಚಾಮರಾಜಪೇಟೆಯ ಕೃಪಾ ಹೆಲ್ತ್ ಕೇರ್ ನಕಲಿ ಔಷಧ ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳದೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಓಂಕಾರೇಶ್ವರ್ ಅವರನ್ನು ಅಮಾನತುಗೊಳಿಸಿ ಕಠಿಣ ಕ್ರಮ ಕೈಗೊಳ್ಳಲಾಗಿದೆ.

ನಕಲಿ ಔಷಧಗಳನ್ನು ವಿವಿಧ ಆಸ್ಪತ್ರೆಗಳಿಗೂ ನೀಡಿರುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದ್ದು, ಯಾವೆಲ್ಲ ಆಸ್ಪತ್ರೆಗಳಿಗೆ ಈ ಜಾಲ ನಕಲಿ ಔಷಧಗಳನ್ನು ಸಪ್ಲೈ ಮಾಡಿತ್ತು ಎಂಬುದನ್ನು ಎಸ್​ಐಟಿ ಅಧಿಕಾರಿಗಳು ಪತ್ತೆ ಹೆಚ್ಚಿದ್ದಾರೆ. ದೇಶದ ಹಲವೆಡೆ ಆಸ್ಪತ್ರೆಗಳಿಗೆ ಆಹಾರ ಮತ್ತು ಔಷಧ ಆಡಳಿತ ಇಲಾಖೆ (FDA) ​ ಶಾಕ್ ನೀಡಿದ್ದು, ಬೆಂಗಳೂರು ಸೇರಿ 15ಕ್ಕೂ ಹೆಚ್ಚು ಆಸ್ಪತ್ರೆಗಳ ಫಾರ್ಮಸಿಗಳಿಗೆ ನೋಟಿಸ್ ನೀಡಲಾಗಿದ್ದು, ಫಾರ್ಮಸಿಗಳ ಲೈಸೆನ್ಸ್ ರದ್ದು ಮಾಡಲಾಗಿದೆ.

ಕ್ಯಾನ್ಸರ್ ಔಷಧ, ಜೀವ ರಕ್ಷಕ ಔಷಧ ಹಾಗೂ ಐಸಿಯು ಇಂಜೆಕ್ಷನ್‌ಗಳನ್ನು ಆಸ್ಪತ್ರೆಗಳಿಗೆ ಪೂರೈಸಿದ ಡಿಸ್ಟ್ರಿಬ್ಯೂಟರ್‌ಗಳು, ಮೆಡಿಕಲ್ ರೆಪ್ರೆಸೆಂಟೇಟಿವ್‌ಗಳನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಯಾರೆಲ್ಲ ನಿಯಮ ಉಲ್ಲಂಘಿಸಿದ್ದಾರೆ? ಮಾನದಂಡಗಳನ್ನು ಫಾಲೋ ಮಾಡಿಲ್ಲ? ಎಂಬುದರ ಪರಿಶೀಲನೆ ನಡೆಯುತ್ತಿದ್ದು, ಕೇವಲ ಆಸ್ಪತ್ರೆಗಳ ಫಾರ್ಮಸಿ ಪರವಾನಿಗೆ ಮಾತ್ರವಲ್ಲದೆ ಡಿಸ್ಟ್ರಿಬ್ಯೂಟರ್​​ಗಳ ಲೈಸೆನ್ಸ್ ರದ್ದಿಗೂ ಕ್ರಮ ಕೈಗೊಳ್ಳಲಾಗಿದೆ. ಇದಿರಂದ ನಕಲಿ ಔಷಧ ಜಾಲದಲ್ಲಿ ಸೇರಿಕೊಂಡು ಜನರ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದವರೆಲ್ಲರಿಗೂ ಆತಂಕ ಶುರುವಾಗಿದೆ.

ಮತ್ತೊಂದೆಡೆ ವ್ಯಾಪಕ ಡಿಸ್ಕೌಂಟ್ ನೀಡಿ ಔಷಧ ಮಾರಾಟ ಮಾಡುತ್ತಿರುವ ಕಂಪನಿಗಳಿಗೆ ಆಹಾರ ಮತ್ತು ಔಷಧ ಆಡಳಿತ ಇಲಾಖೆ ಶಾಕ್ ನೀಡಿದ್ದು, ಔಷಧಗಳ ಗುಣಮಟ್ಟ ಟೆಸ್ಟ್ ಮಾಡಲು ಮುಂದಾಗಿದೆ. ರ್ಯಾಂಡಮ್​​ ಟೆಸ್ಟ್​​ ಮೂಲಕ ಗುಣಮಟ್ಟ ಪರೀಕ್ಷೆ ನಡೆಯಲಿದೆ. ಹಲವು ಮೆಡಿಸಿನ್​​ಗಳಿಗೆ ಪ್ರಿಸ್ಕ್ರಿಪ್ಷನ್ ಅತ್ಯಗತ್ಯ. ಆದರೆ ಆನ್‌ಲೈನ್‌ನಲ್ಲಿ ಔಷಧ ಆರ್ಡರ್ ಮಾಡುವಾಗ ವೈದ್ಯರ ಸಲಹೆ ಮತ್ತು ಪ್ರಿಸ್ಕ್ರಿಪ್ಷನ್ ಪರಿಶೀಲನೆ ಸರಿಯಾಗಿ ನಡೆಯುತ್ತಿಲ್ಲ.

ವೈದ್ಯರು ಬರೆದಿರುವ ಔಷಧದ ಬದಲಿಗೆ ಪರ್ಯಾಯ ಬ್ರ್ಯಾಂಡ್ ಅಥವಾ ಬೇರೆ ಔಷಧದ ಸಲಹೆ ನೀಡಲಾಗುತ್ತಿದೆ. ಇದರಿಂದ ರೋಗಿಯ ಚಿಕಿತ್ಸೆಯ ಪರಿಣಾಮಕಾರಿತ್ವ ಮತ್ತು ಸುರಕ್ಷತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಿದ್ದರೂ ಕೆಲವು ಕಂಪನಿಗಳು ಭಾರಿ ಡಿಸ್ಕೌಂಟ್ ಜಾಹೀರಾತುಗಳ ಮೂಲಕ ಗ್ರಾಹಕರನ್ನು ಸೆಳೆಯುವ ಬಗ್ಗೆ ಕೂಡ ವಿರೋಧ ಕೇಳಿ ಬಂದಿದೆ. ಹೀಗಾಗಿ ಇವುಗಳ ನಿಯಂತ್ರಣಕ್ಕೂ ಎಫ್ ಡಿಎ ಮುಂದಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular