HomeIndiaಭೀಕರ ಅಪಘಾತ: ಸೇತುವೆ ತಡೆಗೋಡೆಗೆ ಡಿಕ್ಕಿಯಾದ ಕ್ಯಾಬ್: ಇಂಡಿಗೋ ಕ್ಯಾಬಿನ್ ಸಿಬ್ಬಂದಿ ದುರ್ಮರಣ

ಭೀಕರ ಅಪಘಾತ: ಸೇತುವೆ ತಡೆಗೋಡೆಗೆ ಡಿಕ್ಕಿಯಾದ ಕ್ಯಾಬ್: ಇಂಡಿಗೋ ಕ್ಯಾಬಿನ್ ಸಿಬ್ಬಂದಿ ದುರ್ಮರಣ

ಮುಂಬೈ: ಇಂಡಿಗೋ ವಿಮಾನ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಕ್ಯಾಬ್ ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಂಡಿಗೋ ಕ್ಯಾಬಿನ್‌ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮುಂಬೈನ ಬೊರಿವಲಿ ಪೂರ್ವದ ವೆಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ.

32 ವರ್ಷದ ಕೈನೂರ್ ಮಿಸ್ತ್ರಿ ಮೃತ ದುರ್ದೈವಿ. ಮೀರಾ ರಸ್ತೆಯ ನಿವಾಸಿಯಾಗಿದ್ದ ಕೈನೂರ್ ಮಿಸ್ತ್ರಿ ಕೆಲಸ ಮುಗಿಸಿ ಕಂಪನಿ ಒದಗಿಸಿದ್ದ ಕ್ಯಾಬ್‌ನಲ್ಲಿ ಅವರು ಮನೆಗೆ ಮರಳುತ್ತಿದ್ದರು. ಈ ವೇಳೆ ಕಾರು ಬೊರಿವಲಿ ಪೂರ್ವದ ವೆಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿರುವ ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಹಿಂಭಾಗದ ಸೀಟಿನಲ್ಲಿ ಕುಳಿತಿದ್ದ ಮಿಸ್ತ್ರಿ ಅವರ ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂಡಿಗೋ ತಮ್ಮ ಉದ್ಯೋಗಿಗಳಿಗೆ ಸಾರಿಗೆ ಸೌಲಭ್ಯ ಕಲ್ಪಿಸಲು ‘ಮಯೂರೇಶ್ ಟೂರ್ ಅಂಡ್ ಟ್ರಾವೆಲ್ಸ್’ಗೆ ಗುತ್ತಿಗೆ ನೀಡಿತ್ತು. ಈ ಅಪಘಾತದ ಬಳಿಕ ಸಾರಿಗೆ ಸೌಲಭ್ಯಗಳ ಸುರಕ್ಷತೆಯ ಬಗ್ಗೆ ಚರ್ಚೆ ನಡೆಯುತ್ತಿದೆ.

ಪೊಲೀಸರು ಕ್ಯಾಬ್ ಚಾಲಕ ವಿಜಯ್ ಖೋಸೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರಂಭದಲ್ಲಿ, ಅಜಾಗರೂಕತೆಯಿಂದ ವಾಹನ ಚಲಾಯಿಸಿದ ಮತ್ತು ಜೀವಕ್ಕೆ ಅಪಾಯವನ್ನುಂಟುಮಾಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು. ಆದರೆ ಕೈನೂರ್ ಮಿಸ್ತ್ರಿ ಮರಣದ ನಂತರ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 106(1) ರ ಅಡಿಯಲ್ಲಿ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ವಿಚಾರಣೆಗಾಗಿ ಪೊಲೀಸರು ಚಾಲಕನಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ಐಐಟಿ ಬಾಂಬೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಡೀನ್ ಸಸ್ಪೆಂಡ್; ಕ್ಷಮೆಯಾಚಿಸಿದ ಆಡಳಿತ ಮಂಡಳಿ

ಮುಂಬೈ: ಐಐಟಿ ಬಾಂಬೆಯಲ್ಲಿ ಎರಡನೇ ವರ್ಷದ ಬಿ.ಟೆಕ್ ವಿದ್ಯಾರ್ಥಿ ಸಾಹಿಲ್ ರವೀಂದ್ರ ವಕೋಡ್ (22) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೀನ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಸಾಹಿಲ್ ಆತ್ಮಹತ್ಯೆ ಖಂಡಿಸಿ ನ್ಯಾಯಕ್ಕಾಅಗಿ ಆಗ್ರಹಿಸಿ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಹಾಗೂ ಕುಟುಂಬಸ್ಥರ ದೂರಿನ ಹಿನ್ನೆಲೆಯಲ್ಲಿ ಐಐಟಿ ಬಾಂಬೆ ಡೀನ್ ಪ್ರೊಫೆಸರ್ ಸೂರ್ಯನಾರಾಯಣ್ ದುಲ್ಲಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ.

ಅಲ್ಲದೇ ವಿದ್ಯಾರ್ಥಿಯ ಸಾವಿನ ಸುತ್ತಲಿನ ಸನ್ನಿವೇಶಗಳ ಬಗ್ಗೆ ಈ ಹಿಂದೆ ನೀಡಿದ್ದ ಅಸಂವೇದನಾಶೀಲ ಹೇಳಿಕೆಗಳಿಗಾಗಿ ಐಐಟಿ ಬಾಂಬೆ ಆಡಳಿತ ಮಂಡಳಿಯು ಸಾರ್ವಜನಿಕವಾಗಿ ಕ್ಷಮೆಯಾಚಿಸಿದೆ.

ಮಹಾರಾಷ್ಟ್ರದ ಯವತ್ಮಾಳ್ ಮೂಲದ ಸಾಹಿಲ್, ಎನರ್ಜಿ ಸೈನ್ಸ್ ವಿಭಾಗದಲ್ಲಿ ಕಲಿಯುತ್ತಿದ್ದರು. ಶುಕ್ರವಾರ ನಡೆದ ಮಿಡ್-ಸೆಮಿಸ್ಟರ್ ಪರೀಕ್ಷೆಯಲ್ಲಿ ಮೊಬೈಲ್ ಮೂಲಕ ಪ್ರಶ್ನೆ ಪತ್ರಿಕೆಯನ್ನು ಚಾಟ್‌ಜಿಪಿಟಿಗೆ ಅಪ್‌ಲೋಡ್ ಮಾಡಿ ನಕಲು ಮಾಡಲು ಯತ್ನಿಸಿದ್ದರು ಎಂದು ಆರೋಪಿಸಲಾಗಿತ್ತು. ಪರೀಕ್ಷೆ ಮುಗಿದ ಕೆಲವೇ ಗಂಟೆಗಳಲ್ಲಿ ಅವರು ಪೊವೈ ಕ್ಯಾಂಪಸ್‌ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.

ಸಾಹಿಲ್ ಕ್ಯಾಂಪಸ್‌ನಲ್ಲಿ ಸಾಂಸ್ಥಿಕ ಕಿರುಕುಳ ಮತ್ತು ಜಾತಿ ಆಧಾರಿತ ತಾರತಮ್ಯವನ್ನು ಎದುರಿಸುತ್ತಿದ್ದರು ಎಂದು ಅವರ ಕುಟುಂಬ ಹಾಗೂ ಸಹಪಾಠಿಗಳು ಆರೋಪಿಸಿದ್ದಾರೆ. ಪೋಷಕರ ದೂರಿನ ಮೇರೆಗೆ ಮುಂಬೈ ಪೊಲೀಸರು ಪ್ರೊ. ದುಲ್ಲಾ ಮತ್ತು ಇತರರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಹಾಗೂ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ, ತನಿಖೆಯನ್ನು ಅಪರಾಧ ವಿಭಾಗಕ್ಕೆ ರವಾನಿಸಿದ್ದಾರೆ.

ಘಟನೆಯನ್ನು ಖಂಡಿಸಿ ವಿದ್ಯಾರ್ಥಿಗಳು ಮುಖ್ಯ ದ್ವಾರದಲ್ಲಿ ಮಧ್ಯರಾತ್ರಿವರೆಗೂ ಧರಣಿ ನಡೆಸಿದರು. ನಿರ್ದೇಶಕ ಪ್ರೊ. ಶಿರೀಶ್ ಕೇದಾರೆ ಖುದ್ದಾಗಿ ಸ್ಥಳಕ್ಕೆ ತೆರಳಿ 3 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ವಿದ್ಯಾರ್ಥಿಗಳು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ನಿಷ್ಪಕ್ಷಪಾತ ತನಿಖೆ, ಪರಿಹಾರ ಮತ್ತು ನಿಯಮಾವಳಿ ಬದಲಾವಣೆ ಸೇರಿದಂತೆ ಎಲ್ಲಾ 18 ಬೇಡಿಕೆಗಳ ಲಿಸ್ಟ್ ಗೆ ಆಡಳಿತ ಮಂಡಳಿ ಸಹಿ ಹಾಕಿದೆ.

ತನಿಖೆ ನಡೆಯುತ್ತಿರುವಾಗಲೇ ವಿದ್ಯಾರ್ಥಿ ಸಾವಿನ ಬಗ್ಗೆ ಹೇಳಿಕೆ ನೀಡಿದ್ದು ಸರಿಯಲ್ಲ, ಈ ಹಿಂದಿನ ಹೇಳಿಕೆಗಳಿಗಾಗಿ ನಾವು ಕ್ಷಮೆಯಾಚಿಸುತ್ತೇವೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ. ಇದೇ ವೇಳೆ ನಿರ್ದೇಶಕ ಶಿರೀಶ್ ಕೇದಾರೆ ಅವರ ರಾಜೀನಾಮೆ ವರದಿಗಳು ಕೇವಲ ವದಂತಿ ಎಂದು ಸಂಸ್ಥೆ ತಿಳಿಸಿದೆ.

ಇನ್ನು ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಈ ವರ್ಷ ನಡೆದಿರುವ ಮೂರನೇ ಆತ್ಮಹತ್ಯೆ ಪ್ರಕರಣ ಇದಾಗಿದೆ. ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುವುದನ್ನು ತಡೆಯುವ ಮುನ್ನೆಚ್ಚರಿಕೆಯಾಗಿ, ಎಲ್ಲಾ ಹಾಸ್ಟೆಲ್ ಕೊಠಡಿಗಳಿಂದ ಸಾಂಪ್ರದಾಯಿಕ ಸೀಲಿಂಗ್ ಫ್ಯಾನ್‌ಗಳನ್ನು ತೆರವುಗೊಳಿಸಿ, ಅವುಗಳ ಬದಲಿಗೆ ಗೋಡೆಗೆ ಜೋಡಿಸುವ ಫ್ಯಾನ್‌ಗಳನ್ನು ಅಳವಡಿಸಲು ಸಂಸ್ಥೆ ಮುಂದಾಗಿದ್ದು, ಮೊದಲ ಹಂತದ ಫ್ಯಾನ್‌ಗಳು ಈಗಾಗಲೇ ಕ್ಯಾಂಪಸ್‌ ತಲುಪಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular