HomeJobsಉದ್ಯೋಗಾಕಾಂಕ್ಷಿಗಳ ಗಮನಕ್ಕೆ ; ಖಾಲಿ ಇರುವ ಹುದ್ದೆಗಳಿಗೆ ಸೆ.24 ರಂದು ನೇರ ಸಂದರ್ಶನ

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ ; ಖಾಲಿ ಇರುವ ಹುದ್ದೆಗಳಿಗೆ ಸೆ.24 ರಂದು ನೇರ ಸಂದರ್ಶನ

ಶಿವಮೊಗ್ಗ :   ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಶಿವಮೊಗ್ಗ ಇವರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ದಿನಾಂಕ 24-09-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

 ಈ ನೇರ ಸಂದರ್ಶನದಲ್ಲಿ ಆರ್-ಕ್ಯೂಬ್ ಅಕಾಡೆಮಿ ಪ್ರೈ.ಲಿ. ಖಾಸಗಿ ಕಂಪನಿ ಭಾಗವಹಿಸುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.

 ಶೈಕ್ಷಣಿಕ ಅರ್ಹತೆ: ಯಾವುದೇ ಪದವಿ ತೇರ್ಗಡೆಯಾದ 18 ರಿಂದ 35 ವರ್ಷ ವಯೋಮಾನದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು. ಉಚಿತ ಪ್ರವೇಶವಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606/9108235132 ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

 ಪ. ಜಾತಿ ಮತ್ತು ಪ. ಪಂಗಡಗಳ ಅಲೆಮಾರಿ ಸಮುದಾಯಗಳ ನಾಮನಿರ್ದೇಶಿತ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

 ಶಿವಮೊಗ್ಗ :   ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ಜಿಲ್ಲಾಮಟ್ಟದ ಆಯ್ಕೆ ಅನುಷ್ಠಾನ ಸಮಿತಿಗೆ 2 ವರ್ಷಗಳ ಅವಧಿಗೆ ಒಟ್ಟು 05 ಜನ ನಾಮನಿರ್ದೇಶಿತ ಸದಸ್ಯರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳಿಂದ 04 ಪುರುಷರು ಹಾಗೂ 01 ಮಹಿಳೆ ಸೇರಿದಂತೆ ಒಟ್ಟು 05 ಜನ ಸದಸ್ಯರನ್ನು ಆಯ್ಕೆ ಮಾಡಲಾಗುತ್ತಿದ್ದು, ಈ ಸಮುದಾಯಗಳಿಗಾಗಿ ಶ್ರಮಿಸಿದ ಸಾಧಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅರ್ಜಿದಾರರು ಉಪನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಛೇರಿ ಅವಧಿಯಲ್ಲಿ ಅರ್ಜಿಯನ್ನು ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 03-10-2026 ರೊಳಗಾಗಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಮಹಾರಾಷ್ಟ್ರದ ನಾಗಪುರದಲ್ಲಿರುವ ಐತಿಹಾಸಿಕ ದೀಕ್ಷಾ ಭೂಮಿಗೆ ಭೇಟಿ ನೀಡಲು ಇಚ್ಛಿಸುವ ಶಿವಮೊಗ್ಗ ಜಿಲ್ಲೆಯ ಪರಿಶಿಷ್ಟ ಜಾತಿಯ (SC) ಅಭ್ಯರ್ಥಿಗಳಿಂದ ಸಮಾಜ ಕಲ್ಯಾಣ ಇಲಾಖೆಯು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

2026-27 ನೇ ಸಾಲಿನ ಯೋಜನೆಯಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳು ಅಕ್ಟೋಬರ್ 21 ರಂದು ನಾಗಪುರದಲ್ಲಿ ನಡೆಯಲಿರುವ ‘ಧಮ್ಮ ಚಕ್ರ ಪ್ರವರ್ತನ ದಿನ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಈ ಯಾತ್ರೆಯನ್ನು ಆಯೋಜಿಸಲಾಗಿದೆ. ಈ ಪ್ರವಾಸವು ಅಕ್ಟೋಬರ್ 19 ರಿಂದ 22 ರವರೆಗೆ ನಡೆಯಲಿದೆ.

ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯ ಖಾಯಂ ನಿವಾಸಿಗಳಾಗಿದ್ದು, ಪರಿಶಿಷ್ಟ ಜಾತಿಗೆ ಸೇರಿರಬೇಕು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದ್ದು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ swdservices.karnataka.gov.in ಮೂಲಕವೇ ಅರ್ಜಿ ಸಲ್ಲಿಸಬೇಕು.

ಆಸಕ್ತರು ಹೆಚ್ಚಿನ ವಿವರಗಳಿಗೆ ಮೊಬೈಲ್ ಸಂಖ್ಯೆ: 9480843044 ಅಥವಾ ಕಚೇರಿ ದೂರವಾಣಿ ಸಂಖ್ಯೆ: 08182-249241 ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಲ್ಲೇಶಪ್ಪ ಅವರು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular