HomeKarnatakaವಾಯುಭಾರ ಕುಸಿತ ಹಿನ್ನೆಲೆ ನಿರ್ಗಮನ ಹಂತದಲ್ಲಿ ಮುಂಗಾರು ಚುರುಕು, ರಾಜ್ಯದಲ್ಲಿ ಸಿಡಿಲಿಗೆ ಮೂವರು ಬಲಿ

ವಾಯುಭಾರ ಕುಸಿತ ಹಿನ್ನೆಲೆ ನಿರ್ಗಮನ ಹಂತದಲ್ಲಿ ಮುಂಗಾರು ಚುರುಕು, ರಾಜ್ಯದಲ್ಲಿ ಸಿಡಿಲಿಗೆ ಮೂವರು ಬಲಿ

ಬೆಂಗಳೂರು: ಮುಂಗಾರು ನಿರ್ಗಮನ ಹಂತದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಕೆಲವು ಕಡೆ ಮತ್ತೆ ಮಳೆ ಚುರುಕುಗೊಂಡಿದೆ. 10 ಜಿಲ್ಲೆಗಳಲ್ಲಿ ಸೋಮವಾರ ಮಳೆಯಾಗಿದ್ದು, ಸಿಡಿಲಿಗೆ ಮೂವರು ಬಲಿಯಾಗಿದ್ದಾರೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಮಳೆ ಆಗುತ್ತಿದ್ದು, ಸಿಡಿಲಬ್ಬರದ ಮಳೆಗೆ ಮೂವರು ಬಲಿಯಾಗಿದ್ದಾರೆ. ಬೆಂಗಳೂರು, ಚಾಮರಾಜನಗರ ಸೇರಿ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸೋಮವಾರ ಮಳೆಯಾಗಿದೆ.

ಕಲುಬರಗಿ ಜಿಲ್ಲೆ ಕಮಲಾಪುರ ತಾಲೂಕಿನ ನಾಗೂರ ಗ್ರಾಮದಲ್ಲಿ ಸಿಡಿಲು ಬಡಿದು ಮಹಿಳೆಯರಿಬ್ಬರು ಮೃತಪಟ್ಟಿದ್ದಾರೆ. ವಿಜಯಲಕ್ಷ್ಮಿ ಬಸಯ್ಯ ಗುತ್ತೇದಾರ್(48) ಹಾಗೂ ಶೈಜಾದ್ ಬಿ ಪಾತರು ಸಾಬ್ (58) ಮೃತರು. ಮಧ್ಯಾಹ್ನದ ವೇಳೆ ಹೊಲದ ಬಳಿಯ ಮರದ ಕೆಳಗೆ ಕುಳಿತು ಊಟ ಮಾಡುತ್ತಿದ್ದಾಗ ಸಿಡಿಲು ಬಡಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ ಜಿಲ್ಲೆ ಯರಗಟ್ಟಿ ತಾಲೂ ಕಿನ ಮದ್ದೂರ ಗ್ರಾಮದ ಬಳಿ ಹೊಲಕ್ಕೆ ತೆರಳಿದ್ದವೇಳೆ ಸಿಡಿಲು ಬಡಿದು ಕೇದಾರಪ್ಪ ಬಸಪ್ಪ ಗುರ್ಲಹೊಸೂರ(47) ಎಂಬುವರು ಮೃತಪಟ್ಟಿದ್ದಾರೆ. ಭೀಮಪ್ಪ ಎಂಬುವರು ಗಾಯಗೊಂಡಿದ್ದು, ಅವರನ್ನು ಧಾರವಾಡದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಲ್ಲಿ ಮಳೆಯಿಂದಾಗಿ ಹಲವು ರಸ್ತೆಗಳು, ಪ್ರೈಓವರ್‌ ಗಳು, ಅಂಡರ್‌ ಪಾಸ್‌ಗಳು ಜಲಾವೃತಗೊಂಡು ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಗಿತ್ತು. ಹಲವೆಡೆ ಮರಗಳು ಧರೆಗುರುಳಿದ ಪರಿಣಾಮ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.

ಚಾಮರಾಜನಗರ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ಸುಮಾರು 50ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ. ವೈಶಂಪಾಳ್ಯ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಬಿದ್ದು, ವೃದ್ಧೆಯೊಬ್ಬರು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ರಾಮಾಪುರ ಗ್ರಾಮದ ಹಲವೆಡೆ ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿದೆ. ಚಂಗ ವಾಡಿ ಗ್ರಾಮದಲ್ಲಿ ತಾತ್ಕಾಲಿಕ ಸೇತುವೆ ಯೊಂದು ಕೊಚ್ಚಿಹೋಗಿದೆ. ಬಂಡಳ್ಳಿ ಗ್ರಾಮದಲ್ಲಿ ಕೊಟ್ಟಿಗೆ ಕುಸಿದು ಬಿದ್ದು, ಹಸು ಮೃತಪಟ್ಟಿದೆ. ಹಲವು ಹಸುಗಳು ಗಂಭೀರವಾಗಿ ಗಾಯಗೊಂಡಿವೆ.

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನವಂದಲಿ ಗ್ರಾಮದಲ್ಲಿ ಸಿಡಿಲಿನ ಹೊಡೆತಕ್ಕೆ ಆಂಜನೇಯ ದೇವಸ್ಥಾನದ ಗೋಪುರಕ್ಕೆ ಹಾನಿಯಾಗಿದೆ. ಇದೇ ವೇಳೆ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಗದಗ ಜಿಲ್ಲೆಗಳ ಹಲವೆಡೆ ಮಳೆಯಾಗಿದೆ.

ಗೌರಿ-ಗಣೇಶ ಹಬ್ಬ: ಜಿಲ್ಲೆಯಲ್ಲಿ ಸೆ. 22, 24, 26 & 28ರಂದು ಮದ್ಯ ಮಾರಾಟ ನಿಷೇಧ

ಕೊಪ್ಪಳ: 2026ನೇ ಸಾಲಿನ ಗೌರಿ-ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೆಪ್ಟೆಂಬರ್ 22 ರಿಂದ ಸೆ. 28ರವರೆಗೆ ನಾಲ್ಕು ದಿನಗಳ ಕಾಲ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟವನ್ನು ನಿಷೇಧಿಸಿ ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.

ಗೌರಿ-ಗಣೇಶ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗಳು ಅಥವಾ ಗಲಾಟೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಗಣಿಸಿ, ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಅನ್ವಯ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಅದರಂತೆ ಸೆಪ್ಟೆಂಬರ್ 22, 24 ಮತ್ತು ಸೆ. 26 ರಂದು ಕೊಪ್ಪಳ ಜಿಲ್ಲೆಯಾದ್ಯಂತ ಹಾಗೂ ಸೆ. 28 ರಂದು ಗಂಗಾವತಿ ತಾಲೂಕು ಮತ್ತು ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯೊಳಗೆ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಮದ್ಯ ಮಾರಾಟ ನಿಷೇಧ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಈ ತಂಡದಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು ಹಾಗೂ ಅಬಕಾರಿ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದು, ಆದೇಶ ಉಲ್ಲಂಘಿಸುವವರ ವಿರುದ್ಧ ನಿಯಮಾನುಸಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular