HomeKarnatakaಗಣಪತಿ ವಿಸರ್ಜನೆ ಹಿನ್ನೆಲೆ: ಸೆ. 22, 24, 26 & 28ರಂದು ಮದ್ಯ ಮಾರಾಟ ನಿಷೇಧ

ಗಣಪತಿ ವಿಸರ್ಜನೆ ಹಿನ್ನೆಲೆ: ಸೆ. 22, 24, 26 & 28ರಂದು ಮದ್ಯ ಮಾರಾಟ ನಿಷೇಧ

ಕೊಪ್ಪಳ: 2026ನೇ ಸಾಲಿನ ಗೌರಿ-ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೆಪ್ಟೆಂಬರ್ 22 ರಿಂದ ಸೆ. 28ರವರೆಗೆ ನಾಲ್ಕು ದಿನಗಳ ಕಾಲ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟವನ್ನು ನಿಷೇಧಿಸಿ ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.

ಗೌರಿ-ಗಣೇಶ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗಳು ಅಥವಾ ಗಲಾಟೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಗಣಿಸಿ, ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಅನ್ವಯ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಅದರಂತೆ ಸೆಪ್ಟೆಂಬರ್ 22, 24 ಮತ್ತು ಸೆ. 26 ರಂದು ಕೊಪ್ಪಳ ಜಿಲ್ಲೆಯಾದ್ಯಂತ ಹಾಗೂ ಸೆ. 28 ರಂದು ಗಂಗಾವತಿ ತಾಲೂಕು ಮತ್ತು ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯೊಳಗೆ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಮದ್ಯ ಮಾರಾಟ ನಿಷೇಧ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಈ ತಂಡದಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು ಹಾಗೂ ಅಬಕಾರಿ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದು, ಆದೇಶ ಉಲ್ಲಂಘಿಸುವವರ ವಿರುದ್ಧ ನಿಯಮಾನುಸಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ನ್ಯೂನ್ಯತೆ ಹೊಂದಿರುವ ಅರ್ಜಿಗಳ ಮರು ಸಲ್ಲಿಕೆಗೆ ಅವಕಾಶ

ಕೊಪ್ಪಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2026–27ನೇ ಸಾಲಿನ ನೋಂದಾಯಿತ ಸಂಘ-ಸಂಸ್ಥೆಗಳಿಗೆ, ಕಲಾವಿದರಿಗೆ ಸಹಾಯಧನಕ್ಕೆ ಸಂಬಂಧಿಸಿದಂತೆ ನ್ಯೂನ್ಯತೆ ಹೊಂದಿರುವ ಅರ್ಜಿಗಳ ಮರು ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ ಅವರು ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2026–27ನೇ ಸಾಲಿನ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ, ಕಲಾವಿದರಿಗೆ ವಾದ್ಯ ಪರಿಕರಗಳು ಹಾಗೂ ವೇಷಭೂಷಣಗಳ ಖರೀದಿಗೆ ಸಹಾಯಧನ ಮತ್ತು ಚಿತ್ರಕಲೆ, ಶಿಲ್ಪಕಲಾ ಕೃತಿಗಳ ಪ್ರದರ್ಶನಕ್ಕೆ ಸಹಾಯಧನ ಪಡೆಯಲು ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಲಾಗುತ್ತಿದೆ. ಈ ಅರ್ಜಿಗಳ ಪರಿಶೀಲನೆಯ ಸಂದರ್ಭದಲ್ಲಿ ಕೆಲವು ಅರ್ಜಿಗಳಲ್ಲಿ ಅಗತ್ಯ ದಾಖಲೆಗಳು ಅಪೂರ್ಣವಾಗಿರುವುದು ಹಾಗೂ ಇತರೆ ತಾಂತ್ರಿಕ ನ್ಯೂನ್ಯತೆಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ, ಅಂತಹ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸಂಬಂಧಪಟ್ಟ ಸಂಘ-ಸಂಸ್ಥೆಗಳು ತಮ್ಮ ಅರ್ಜಿಗಳಲ್ಲಿರುವ ಅಪೂರ್ಣ ದಾಖಲೆಗಳು ಹಾಗೂ ತಾಂತ್ರಿಕ ನ್ಯೂನ್ಯತೆಗಳನ್ನು ಮಾರ್ಗಸೂಚಿ ಮತ್ತು ನಿಗದಿತ ಷರತ್ತುಗಳಿಗೆ ಅನುಗುಣವಾಗಿ ಸರಿಪಡಿಸಿ, ಅಗತ್ಯ ಪೂರಕ ದಾಖಲೆಗಳೊಂದಿಗೆ ಅರ್ಜಿಗಳನ್ನು ಮರು ಸಲ್ಲಿಸಬೇಕು. ಈ ಕುರಿತು ಅರ್ಜಿ ಸಲ್ಲಿಸಿರುವ ಸಂಘ-ಸಂಸ್ಥೆಗಳು ಹಾಗೂ ಕಲಾವಿದರ ಮಾಹಿತಿಗಾಗಿ ಕೊಪ್ಪಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular