HomeKarnatakaನಂದಿನಿ ಹಾಲು ಖರೀದಿ, ಮಾರಾಟ ದರ 8-10 ರೂ. ಹೆಚ್ಚಳಕ್ಕೆ ಸಿಎಂಗೆ ಹಾಲು ಉತ್ಪಾದಕರ ನಿಯೋಗ...

ನಂದಿನಿ ಹಾಲು ಖರೀದಿ, ಮಾರಾಟ ದರ 8-10 ರೂ. ಹೆಚ್ಚಳಕ್ಕೆ ಸಿಎಂಗೆ ಹಾಲು ಉತ್ಪಾದಕರ ನಿಯೋಗ ಮನವಿ

ಬೆಂಗಳೂರು: ಕರ್ನಾಟಕ ರಾಜ್ಯದ ಸಹಕಾರ ಹಾಲು ಉತ್ಪಾದಕರ ಒಕ್ಕೂಟಗಳ ನಿಯೋಗವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ನಂದಿನಿ ಹಾಲಿನ ಖರೀದಿ ಹಾಗೂ ಮಾರಾಟ ದರವನ್ನು ಪ್ರತಿ ಲೀಟರ್‌ ಗೆ 8 ರೂಪಾಯಿಯಿಂದ 10 ರೂಪಾಯಿಗೆ ಹೆಚ್ಚಿಸುವಂತೆ ಮನವಿ ಸಲ್ಲಿಸಿ ಚರ್ಚಿಸಿತು.

ಈ ವೇಳೆ ಸಚಿವರಾದ ಲಕ್ಷ್ಮಣ್‌ ಸವದಿ, ಪುಟ್ಟರಂಗಶೆಟ್ಟಿ, ಬಮೂಲ್‌ ಅಧ್ಯಕ್ಷ ಡಿ.ಕೆ ಸುರೇಶ್‌, ಶಾಸಕರಾದ ಶಿವಣ್ಣ, ಎನ್. ಶ್ರೀನಿವಾಸ್‌ ಸೇರಿದಂತೆ ಹೈನುಗಾರರು, ರೈತರು ಉಪಸ್ಥಿತರಿದ್ದರು.

ಮನವಿ ಸ್ವೀಕರಿಸಿದ ಸಿಎಂ ಡಿ.ಕೆ. ಶಿವಕುಮಾರ್ ಅವರು, ಹಾಲಿನ ಖರೀದಿ ದರ, ಮಾರಾಟ ದರ ಹೆಚ್ಚಳ, ಹಾಲು ಉತ್ಪಾದಕರ ಪ್ರೋತ್ಸಾಹಧನ, ಪಶು ಆಹಾರ ಇತರೆ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಲಿನ ದರ, ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ

ಬೆಂಗಳೂರು: ಪ್ರತಿ ಲೀಟರ್ ಹಾಲಿನ ದರವನ್ನು 8 ರೂಪಾಯಿ ಮತ್ತು ಪ್ರೋತ್ಸಾಧನವನ್ನು 8 ರೂಪಾಯಿಯಷ್ಟು ಹೆಚ್ಚಳ ಮಾಡಬೇಕೆಂದು ಸರ್ಕಾರಕ್ಕೆ ಹಾಲು ಒಕ್ಕೂಟಗಳು ಆಗ್ರಹಿಸಿವೆ. ಬರಗಾಲದಿಂದ ಪಶು ಆಹಾರ, ಸಾಗಾಣೆ ವೆಚ್ಚ, ಕಚ್ಚಾ ವಸ್ತು ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಹಾಲಿನ ದರ ಮತ್ತು ಪ್ರೋತ್ಸಾಹಧನವನ್ನು ತಲಾ 8 ರೂ. ಹೆಚ್ಚಳ ಮಾಡುವಂತೆ ಒತ್ತಾಯಿಸಲಾಗಿದೆ.

ರಾಜ್ಯದಲ್ಲಿ ತೀವ್ರ ಬರಗಾಲದಿಂದ ಪಶು ಆಹಾರ, ಸಾಗಣೆ ವೆಚ್ಚ ಹಾಗೂ ಕಚ್ಚಾವಸ್ತುಗಳ ಬೆಲೆ ಏರಿಕೆಯಾಗಿದೆ. ಆದ್ದರಿಂದ ರೈತರನ್ನು ಹಾಗೂ ಹಾಲಿನ ಒಕ್ಕೂಟಗಳನ್ನು ಉಳಿಸಲು ಹಾಲಿನ ಮಾರಾಟ ಬೆಲೆಯನ್ನು ಪ್ರತಿ ಲೀಟ‌ರ್ ಗೆ ₹8 ಮತ್ತು ಸರ್ಕಾರ ನೀಡುವ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್‌ಗೆ ₹8 ರಂತೆ ಹೆಚ್ಚಳ ಮಾಡಬೇಕು ಎಂದು ರಾಜ್ಯದ ವಿವಿಧ ಹಾಲು ಒಕ್ಕೂಟಗಳು ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಈ ಬಾರಿ ಮುಂಗಾರು ಮಳೆ ಕೊರತೆ ತೀವ್ರ ಬರಗಾಲದಿಂದಾಗಿ ಮೇವಿನ ಕೊರತೆ ಎದುರಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಮತ್ತು ಸಂಗ್ರಹಣೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಈ ಹಿಂದೆ ದಿನಕ್ಕೆ1.11 ಕೋಟಿ ಲೀಟರ್ ಇದ್ದಹಾಲಿನ ಸಂಗ್ರಹಣೆಯು ಈಗ 1.05 ಕೋಟಿ ಲೀಟರ್‌ ಗೆ ಇಳಿಕೆಯಾಗಿದೆ. ಕರ್ನಾಟಕದಲ್ಲಿ ಪ್ರತಿ ಲೀಟರ್ ಹಾಲಿನ ಮಾರಾಟ ದರವನ್ನು 8 ರೂಪಾಯಿ ಹೆಚ್ಚಿಸಬೇಕು ಹಾಗೂ ರೈತರ ಪ್ರೋತ್ಸಾಹ ಧನವನ್ನು 5 ರೂ.ನಿಂದ 8 ರೂ.ಗೆ ಏರಿಸಬೇಕೆಂದು ರಾಜ್ಯದ ಹಾಲು ಉತ್ಪಾದಕರ ಸಂಘಗಳು ಮತ್ತು ಒಕ್ಕೂಟಗಳು ಸರ್ಕಾರವನ್ನು ಆಗ್ರಹಿಸಿವೆ.

ಕಸ್ತೂರಿ ರಂಗನ್ ಕರಡು ಅಧಿಸೂಚನೆ: ಅಗತ್ಯ ಬದಲಾವಣೆಗೆ ನಿರ್ಣಯ

ಕಸ್ತೂರಿರಂಗನ್ ಕರಡು ಅಧಿಸೂಚನೆಗೆ ಅಗತ್ಯ ಬದಲಾವಣೆಗಳನ್ನು ಕೋರುವ ನಿರ್ಣಯವನ್ನು ಕರ್ನಾಟಕ ಶಾಸಕಾಂಗವು ಸರ್ವಾನುಮತದಿಂದ ಅಂಗೀಕರಿಸಿದೆ. ಈ ನಿರ್ಣಯವು ಹೊಸದಾದ ಭೌತಿಕ ಸಮೀಕ್ಷೆ, ನಿವೃತ್ತ ನ್ಯಾಯಾಧೀಶರ ನೇತೃತ್ವದ ಉನ್ನತ ಮಟ್ಟದ ಸಮಿತಿ, ಕೇಂದ್ರಕ್ಕೆ ಸರ್ವಪಕ್ಷ ನಿಯೋಗದ ಭೇಟಿ ಮತ್ತು ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಒಂದು ವರ್ಷದ ಕಾಲಾವಕಾಶದಂತಹ ಅಂಶಗಳನ್ನು ಒಳಗೊಂಡಿದೆ.

ಈ ಸಮೀಕ್ಷೆಯು ಗ್ರಾಮ ಹಾಗೂ ಸರ್ವೆ ನಂಬರ್ ಮಟ್ಟದ ನಕ್ಷೆಗಳೊಂದಿಗೆ ಪರಿಸರ ಸೂಕ್ಷ್ಮ ಪ್ರದೇಶಗಳು, ಅರಣ್ಯಗಳು, ಕೃಷಿ ಹಾಗೂ ತೋಟಗಾರಿಕಾ ಭೂಮಿ ಮತ್ತು ಜನವಸತಿ ಪ್ರದೇಶಗಳನ್ನು ವೈಜ್ಞಾನಿಕವಾಗಿ ಗುರುತಿಸಲಿದೆ. ಇದರೊಂದಿಗೆ ಗ್ರಾಮ ಪಂಚಾಯಿತಿ ಮಟ್ಟದ ಸಮಿತಿಗಳನ್ನು ಸಹ ರಚಿಸಲಾಗುವುದು. ಜತೆಗೆ, ಹೊಸ ಒತ್ತುವರಿ ಮತ್ತು ಅಕ್ರಮ ಬೇಟೆಯನ್ನು ತಡೆಯಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಹಾಗೂ ವನ್ಯಜೀವಿ ಸಂರಕ್ಷಣೆಯನ್ನು ಬಲಪಡಿಸಲು ಮತ್ತು ಮಾನವ-ವನ್ಯಜೀವಿ ಸಂಘರ್ಷವನ್ನು ಕಡಿಮೆ ಮಾಡಲು ಆಧುನಿಕ ತಂತ್ರಜ್ಞಾನವನ್ನು ಬಳಸಲಾಗುವುದು.

ರೈತರು, ಆದಿವಾಸಿಗಳು ಮತ್ತು ಸ್ಥಳೀಯ ಕುಟುಂಬಗಳ ಭೂಮಿ, ಜೀವನೋಪಾಯ ಹಾಗೂ ಹಕ್ಕುಗಳನ್ನು ರಕ್ಷಿಸುವ ಜೊತೆಗೆ, ಪಶ್ಚಿಮ ಘಟ್ಟಗಳು ಮತ್ತು ಅಲ್ಲಿನ ಜೀವವೈವಿಧ್ಯವನ್ನು ಸಂರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular