HomeKarnatakaಕೊಲೆ ಯತ್ನ ಪ್ರಕರಣ: ಶಾಸಕ ಬಿ.ಕೆ. ಸಂಗಮೇಶ್ ಗೆ ಬಿಗ್ ರಿಲೀಫ್

ಕೊಲೆ ಯತ್ನ ಪ್ರಕರಣ: ಶಾಸಕ ಬಿ.ಕೆ. ಸಂಗಮೇಶ್ ಗೆ ಬಿಗ್ ರಿಲೀಫ್

ಬೆಂಗಳೂರು: ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು, ಪ್ರಕರಣದಲ್ಲಿ ಶಾಸಕ ಬಿ.ಕೆ. ಸಂಗಮೇಶ್ ಸೇರಿದಂತೆ ಐವರನ್ನು ನಿರ್ದೋಷಿ ಎಂದು ತೀರ್ಪು ನೀಡಿ ಆದೇಶ ಹೊರಡಿಸಿದೆ.

ನ್ಯಾಯಾಧೀಶರಾದ ಕೆ.ಬಿ. ಶಿವಪ್ರಸಾದ್ ತೀರ್ಪು ಪ್ರಕಟಿಸಿದ್ದಾರೆ. ಶಾಸಕ ಬಿ.ಕೆ. ಸಂಗಮೇಶ್ ಮತ್ತು ಅವರ ಸಹೋದರರು ಹಾಗೂ ಮಕ್ಕಳ ಮೇಲಿದ್ದ ಆರೋಪದಿಂದ ಮುಕ್ತರಾಗಿದ್ದಾರೆ. 2010ರಲ್ಲಿ ಭದ್ರಾವತಿಯ ಹಳದಮ್ಮ ದೇವಸ್ಥಾನ ಉತ್ಸವ ಉದ್ಘಾಟನೆಯ ವೇಳೆ ಗಲಾಟೆ ನಡೆದಿತ್ತು. ಈ ವೇಳೆ ಮಹೇಶ್ ಕುಮಾರ್ ಎಂಬುವರಿಗೆ ಸಂಗಮೇಶ್ ಸಂಗಡಿಗರು ಹಲ್ಲೆ ಮಾಡಿದ್ದಾಗಿ ಆರೋಪಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶಾಸಕ ಬಿ.ಕೆ. ಸಂಗಮೇಶ್, ಬಿ.ಕೆ. ಮೋಹನ್, ಬಸವರಾಜ್, ಜಗದೀಶ್ ಮತ್ತು ಗಣೇಶ್ ವಿರುದ್ಧ ಪ್ರಕರಣ ದಾಖಲಾಗಿತ್ತು. ನಂತರ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಲ್ಲಾ ಸಾಕ್ಷಿಗಳನ್ನು ಪರಿಶೀಲಿಸಿ ತೀರ್ಪು ನೀಡಿದೆ. ಆರೋಪಿಗಳ ವಿರುದ್ಧದ ಆರೋಪಗಳು ಸಾಬೀತಾಗಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಬಿ.ಕೆ. ಸಂಗಮೇಶ್ ಸೇರಿ ಆರೋಪಿಗಳನ್ನು ನಿರ್ದೋಷಿಗಳು ಎಂದು ಘೋಷಿಸಿ ಖುಲಾಸೆಗೊಳಿಸಲಾಗಿದೆ.

ಮೈಸೂರು ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ

ಮೈಸೂರು ದಸರಾ ಉತ್ಸವ-2026ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ: 11.10.2026ರಿಂದ 20.10.2026ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ-2026”ನ್ನು ಭಾರತ್‌ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ, ಹಳೆ ಡಿ.ಸಿ. ಕಚೇರಿ ಎದುರು, ಮೈಸೂರು ಇಲ್ಲಿ ಏರ್ಪಡಿಸಲಾಗುವುದು.

ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು / ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ   ರೂ.1000-00 ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು – ಅವರ ಹೆಸರಿನಲ್ಲಿ ಡಿಡಿಗಳನ್ನು ಸಲ್ಲಿಸುವುದು.

ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ಅಂದರೆ https://kpp.karnataka.gov.inನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ದಿನಾಂಕ:05.10.2026ರಂದು ಸಂಜೆ 5.00ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ಅವರ ಹೆಸರಿಗೆ ನೊಂದಾಯಿತ ಅಂಚೆ ಅಥವಾ ಮುದ್ದಾಂ ಮೂಲಕ ಸಲ್ಲಿಸಲು ಕೋರಿದೆ. ನಿರ್ಮಿಸಲಾಗುವ ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ  ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ದೂ:080-22484516  ಅನ್ನು ಸಂಪರ್ಕಿಸಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular