HomeJobsSSLC, ಪಿಯುಸಿ, ಪದವೀಧರರಿಗೆ ಉದ್ಯೋಗ: ಸೆ. 25 ರಂದು ವಾಕ್ ಇನ್-ಇಂಟರ್ ವ್ಯೂವ್

SSLC, ಪಿಯುಸಿ, ಪದವೀಧರರಿಗೆ ಉದ್ಯೋಗ: ಸೆ. 25 ರಂದು ವಾಕ್ ಇನ್-ಇಂಟರ್ ವ್ಯೂವ್

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್-ಇಂಟರ್‌ ವ್ಯೂವ್ ಅನ್ನು ಸೆಪ್ಟೆಂಬರ್ 25 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೊಪ್ಪಳ ಜಿಲ್ಲಾ ಆಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ., ಪಿ.ಯು.ಸಿ ಅಥವಾ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಈ ವಾಕ್ ಇನ್ ಇಂಟರ್‌ ವ್ಯೂವ್ ನಲ್ಲಿ ಭಾಗವಹಿಸಬಹುದು. 18 ರಿಂದ 26 ವರ್ಷದ ಅರ್ಹ ನಿರುದ್ಯೋಗಿ ಯುವಕ/ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ (ರೆಜ್ಯುಮ್) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವ್ ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಪ್ಪಳ ಮತ್ತು ಗಂಗಾವತಿ ನಗರಸಭೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕೊಪ್ಪಳ ಮತ್ತು ಗಂಗಾವತಿ ನಗರಸಭೆಗಳಲ್ಲಿ ಖಾಲಿ ಇರುವ ನೇರಪಾವತಿ ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೊಪ್ಪಳ ನಗರಸಭೆಯಲ್ಲಿ ನೇರಪಾವತಿ ಪೌರಕಾರ್ಮಿಕರು 15, ಮ್ಯಾನ್ಯುವಲ್ ಸ್ಕ್ಯಾವೇಂಜರ್ಸ್ ಅಧಿನಿಯಮದಡಿ (ಶೇ. 10 ರಷ್ಟು ಕಾಯ್ದಿರಿಸಿದ ಖಾಲಿ ಹುದ್ದೆಗಳು) 2 ಹುದ್ದೆಗಳು ಸೇರಿ ಒಟ್ಟು 17 ಹುದ್ದೆಗಳು ಹಾಗೂ ಗಂಗಾವತಿ ನಗರಸಭೆಯಲ್ಲಿ ನೇರಪಾವತಿ ಪೌರಕಾರ್ಮಿಕರು 27 ಹಾಗೂ ಮ್ಯಾನ್ಯುವಲ್ ಸ್ಕಾಸ್ಕ್ಯಾವೇಂಜರ್ಸ್ ಅಧಿನಿಯಮದಡಿ(ಶೇ. 10 ರಷ್ಟು ಕಾಯ್ದಿರಿಸಿದ ಖಾಲಿ ಹುದ್ದೆಗಳು) 4 ಹುದ್ದೆಗಳು ಸೇರಿ ಒಟ್ಟು 31 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಕನಿಷ್ಠ ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಆದರೆ ಅಭ್ಯರ್ಥಿಗೆ ಕನ್ನಡ ಭಾಷೆಯಲ್ಲಿ ಮಾತನಾಡಲು ಬರಬೇಕು. ಹಾಗೂ ಅಭ್ಯರ್ಥಿಗಳಿಗೆ ದಿನಾಂಕ:21-09-2026 ರ ವೇಳೆಗೆ ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಠ ವಯೋಮಿತಿ 50 ವರ್ಷ ಮೀರಿರಬಾರದು.

ಅರ್ಜಿ ಶುಲ್ಕವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂ.100 ಹಾಗೂ ಸಾಮಾನ್ಯ, 2ಎ, 2ಬಿ, 3ಎ ಹಾಗೂ 3ಬಿ ವರ್ಗದ ಅಭ್ಯರ್ಥಿಗಳಿಗೆ ರೂ.200 ನಂತೆ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಸಲ್ಲಿಸಬೇಕು.

ಕೊಪ್ಪಳ ನಗರಸಭೆಗೆ ಅರ್ಜಿ ಸಲ್ಲಿಸುವವರು ಕೊಪ್ಪಳ ನಗರಸಭೆಯ ಪೌರಾಯುಕ್ತರಿಗೆ ಹಾಗೂ ಗಂಗಾವತಿ ನಗರಸಭೆಗೆ ಅರ್ಜಿ ಸಲ್ಲಿಸುವವರು ಗಂಗಾವತಿ ಪೌರಾಯುಕ್ತರಿಗೆ ಅವರ ಹೆಸರಿನಲ್ಲಿ ಡಿಡಿ ತೆಗೆದು ಅರ್ಜಿಯೊಂದಿಗೆ ಲಗತ್ತಿಸಬೇಕು. ಶುಲ್ಕ ಪಾವತಿಸದ ಹಾಗೂ ಅಪೂರ್ಣ ದಾಖಲೆ ಇರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸಲು ಅಕ್ಟೋಬರ್ 22 ವರೆಗೆ ಅವಕಾಶವಿದ್ದು, ಅರ್ಜಿ ನಮೂನೆಯನ್ನು ಕೊಪ್ಪಳ ಅಥವಾ ಗಂಗಾವತಿ ನಗರಸಭೆ ಕಾರ್ಯಾಲಯದಲ್ಲಿ ಪಡೆದುಕೊಂಡು ಅಧಿಸೂಚನೆಯಲ್ಲಿ ತಿಳಿಸಲಾದ ಕೊನೆಯ ದಿನಾಂಕದೊಳಗಾಗಿ ಅಗತ್ಯ ಶಾಲಾ ಹಾಗೂ ಇತರ ಪ್ರಮಾಣಪತ್ರಗಳೊಂದಿಗೆ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಅಥವಾ ಗಂಗಾವತಿ ನಗರಸಭೆ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular